ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಜಟಾಪಟಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶ್ವ ಮೀನುಗಾರಿಕೆ ದಿನಾಚರಣೆಯ ಪ್ರಯುಕ್ತ ಹೆಬ್ಬಾಳದಲ್ಲಿ ಮತ್ಸ್ಯ ಮೇಳ ನಡೆಯುತ್ತಿದ್ದು, ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದಾರೆ.

ನವೆಂಬರ್ 21 ರಿಂದ ಹೆಬ್ಬಾಳದಲ್ಲಿ ಮತ್ಸ್ಯ ಮೇಳ ಆರಂಭವಾಗಿದ್ದು, ಇಂದಿನ ಕಾರ್ಯಕ್ರಮ ಮುಖ್ಯವಾಗಿತ್ತು. ಆದರೆ ರಾಜ್ಯ ರಾಜಕಾರಣದಲ್ಲಿ ಆದ ಬೆಳೆವಣಿಗೆ ಗಮಿಸಿದಾಗ ಡಿ.ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅನುಮಾನ ಎನ್ನಲಾಗಿತ್ತು. ಹೀಗಾಗಿ ಖುದ್ದು ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಇಂದು ಬೆಳಗ್ಗೆ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದರು ಎನ್ನಲಾಗಿದೆ.

ಇನ್ನು ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳ-2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಮಾಂಕಾಳ ವೈದ್ಯ, ಬೈರತಿ ಸುರೇಶ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಹಾಗೂ ಮತ್ತಿತರರು ಭಾಗಿಯಾಗಿದ್ದಾರೆ.










