• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 22, 2025
in Top Story, ಕರ್ನಾಟಕ, ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರಬರೆದಿದ್ದಾರೆ. ಪತ್ರದಲ್ಲಿ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿರುವ ಸಿದ್ದರಾಮಯ್ಯ ಕೇಂದ್ರ ಸರ್ಕಾರ ತಕ್ಷಣವೇ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ADVERTISEMENT
Dwarakanath Guruji: ಜನವರಿಯಲ್ಲಿ ಡಿಕೆಶಿಗೆ ಸಿಎಂ ಪಟ್ಟ.. ದ್ವಾರಕನಾಥ್‌ ಗುರೂಜಿ ಸ್ಫೋಟಕ ಭವಿಷ್ಯ.! #dkshivakumar

ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದ ಪತ್ರದ ವಿವರ ಈ ಕೆಳಗಿನಂತಿದೆ.

ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶದಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇನೆ. ಇವು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ.

ಈ ಖಾರಿಫ್ ಋತುವಿನಲ್ಲಿ ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಮೆಕ್ಕೆ ಜೋಳ ಹಾಗೂ ಹೆಸರುಕಾಳನ್ನು 4.16 ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದ್ದು, ರಾಜ್ಯದಲ್ಲಿ ಸುಮಾರು 54.74 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚು ಮೆಕ್ಕೆ ಜೋಳ ಮತ್ತು ಹೆಸರುಕಾಳು 1.983 ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಉತ್ಪಾದನೆಯಾಗುವ ನಿರೀಕ್ಷೆಯಿದೆ. ಇದು ಸಮೃದ್ಧಿಯ ಅವಕಾಶವಾಗಬೇಕಿತ್ತು, ಆದರೆ ಪ್ರಸ್ತುತ ಮಾರುಕಟ್ಟೆ ಸ್ಥಿತಿಯು ಇದನ್ನು ಸಂಕಷ್ಟವನ್ನಾಗಿ ಪರಿವರ್ತಿಸಿದೆ.

ಕೇಂದ್ರ ಸರ್ಕಾರವು ಮೆಕ್ಕೆ ಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹2,400 ಹಾಗೂ ಹೆಸರುಕಾಳಿಗೆ ₹8,768 ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ಜೋಳಕ್ಕೆ ₹1600-1800 ಮತ್ತು ಹೆಸರುಕಾಳಿಗೆ ₹5,400 ಆಸುಪಾಸಿನಲ್ಲಿರುವುದು ತೀವ್ರ ಮತ್ತು ಹಿಂದೆಂದೂ ಕಾಣದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಹಿಂದಿನ ಮೂರು ವರ್ಷಗಳ ಮಾದರಿ ಬೆಲೆಗಳು ಎಂಎಸ್‌ಪಿ ಗಿಂತ ಹೆಚ್ಚಿರುವಾಗ, ಈ ವರ್ಷ ಬಾಹ್ಯ ಒತ್ತಡಗಳ ಪರಿಣಾಮ ಮತ್ತು ಸರಬರಾಜು-ಬೇಡಿಕೆಗಳ ಅಸಮತೋಲನದಿಂದ ಬೆಲೆಗಳು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದಿವೆ.

ಕರ್ನಾಟಕದಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿದ್ದು, ಸ್ಥಳೀಯ ಕೈಗಾರಿಕೆಗಳ ಬಳಕೆಯ ಸಾಮರ್ಥ್ಯಕ್ಕಿಂತ ಇದು ಹೆಚ್ಚಾಗಿದೆ. ಆದ್ದರಿಂದ ಭಾರತ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ, ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ:

1. NAFED, FCI ಮತ್ತು NCCF ಗೆ ತಕ್ಷಣ ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು ನಿರ್ದೇಶನ ನೀಡಬೇಕು

ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು.

2. ಎಥೆನಾಲ್ ಪೂರೈಕೆಯ ಇಡಿ ವ್ಯವಸ್ಥೆಯಲ್ಲಿ ಕರ್ನಾಟಕದ ರೈತರ ನ್ಯಾಯಯುತ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿ

ಮೆಕ್ಕೆ ಜೋಳದಿಂದ ಉತ್ಪಾದಿತ ಎಥೆನಾಲ್‌ಗೆ ಮೂಲ ದರ ಲೀಟರ್‌ಗೆ ₹66.07 ಇದ್ದು, ಮೆಕ್ಕೆ ಜೋಳದಿಂದ ಪಡೆದ ಎಥೆನಾಲ್‌ಗೆ ಲೀಟರ್‌ಗೆ ₹5.79 (GST ಹೊರತುಪಡಿಸಿ) ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಆದರೆ ಕರ್ನಾಟಕದ ಅನೇಕ ಎಥೆನಾಲ್ ಘಟಕಗಳು ರೈತರನ್ನು ಬಿಟ್ಟು ಮಧ್ಯವರ್ತಿಗಳಿಂದ ಮತ್ತು ವ್ಯಾಪಾರಿಗಳಿಂದ ಮೆಕ್ಕೆ ಜೋಳ ಖರೀದಿಸುತ್ತಿವೆ. ಇದು ಎಂಎಸ್‌ಪಿ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಉದ್ದೇಶವನ್ನೇ ವಿಫಲಗೊಳಿಸುತ್ತದೆ.

ಎಥೆನಾಲ್ ಘಟಕಗಳು ರೈತರಿಂದ ಅಥವಾ ರೈತ ಉತ್ಪಾದಕ ಸಂಘಗಳಿಂದ (FPO) ನೇರವಾಗಿ ಮೆಕ್ಕೆ ಜೋಳ ಖರೀದಿಸುವಂತೆ ಕೇಂದ್ರ ಸರ್ಕಾರವು ಆದೇಶಿಸಬೇಕು. ನೇರ ಖರೀದಿ ಖಾತ್ರಿಗೊಳ್ಳದಿದ್ದಲ್ಲಿ, ರೈತರಿಗೆ ಪ್ರೋತ್ಸಾಹಧನ ತಲುಪದಿದ್ದ ಪಕ್ಷದಲ್ಲಿ ಎಥೆನಾಲ್ ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಮರುಪರಿಶೀಲಿಸಬೇಕು ಎಂದು ಸಿದ್ದರಾಮಯ್ಯ ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ.

CM Siddaramaiah : ಭಾಷಣ ಆರಂಭದಲ್ಲೇ ಜನರ ಮೇಲೆ ರೊಚ್ಚಿಗೆದ್ದ ಸಿದ್ದರಾಮಯ್ಯ #pratidhvani

 

Tags: BJPCM SiddaramaiahcongressFarmersPM Narendra ModiPolitics
Previous Post

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

Next Post

ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
Next Post
ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ  ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada