• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

ಪ್ರತಿಧ್ವನಿ by ಪ್ರತಿಧ್ವನಿ
November 22, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ  ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

CM Siddaramaiah : ವೇದಿಕೆಯಲ್ಲೇ ಸಿದ್ದರಾಮಯ್ಯ ಡಿಕೆಶಿ ಗುಸುಗುಸು #pratidhvani

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕೆಜೋಳ ಖರೀದಿಯ ವಿಷಯದಲ್ಲಿ ಕರ್ನಾಟಕ ಸರ್ಕಾರವು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ, ಆದರೆ ಈ ದಿಸೆಯಲ್ಲಿ ತಕ್ಷಣವಾಗಿ ಕೈಗೊಳ್ಳಬೇಕಾದ ಕಾರ್ಯವನ್ನು ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ. ಅಲ್ಲದೇ ಕೆಲವು ಮುಖ್ಯವಾದ ಅಂಶಗಳನ್ನು ಉಲ್ಲೇಖಿಸಿದ್ದಾರೆ.

1. ಎಥೆನಾಲ್ (Ethanol) ಉತ್ಪಾದನೆಗಾಗಿ ಮೆಕ್ಕೆಜೋಳದ ಖಾತರಿ ಖರೀದಿಗೆ ಎನ್‌ಸಿಸಿಎಫ್ (NCCF) ಅಥವಾ ನಾಫೆಡ್ (NAFED) ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ರಾಜ್ಯದ ಡಿಸ್ಟಿಲರಿಗಳಿಗೆ (distilleries) ರಾಜ್ಯ ಸರಕಾರ (ಸಿದ್ದರಾಮಯ್ಯನವರೇ ನೀವು) ಏಕೆ ಸೂಚನೆ ನೀಡಿಲ್ಲ?

ರಾಜ್ಯ ಸರ್ಕಾರದಿಂದಲೇ ಪರವಾನಗಿ ಪಡೆದ ಈ ಡಿಸ್ಟಿಲರಿಗಳಿಗೆ, ಖಚಿತ ಖರೀದಿಗಾಗಿ ಎನ್‌ಸಿಸಿಎಫ್ ಅಥವ ನಾಫೆಡ್‌ನೊಂದಿಗೆ ಅಧಿಕೃತ ಒಪ್ಪಂದ ಮಾಡಿಕೊಳ್ಳುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕಿತ್ತು. ಆದರೆ ಅದು ನಡೆದಿಲ್ಲ. ಈ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು (SOP) ಈಗಾಗಲೇ ಸಂಬಂಧಪಟ್ಟವರಿಗೆ ಕಳುಹಿಸಲಾಗಿದೆ.

2. ಕನಿಷ್ಠ ಬೆಂಬಲ ಬೆಲೆ (MSP) ಜಾರಿ ಬಗ್ಗೆ ಕೇಂದ್ರದ ಕಡೆಗೆ ಬೆರಳು ತೋರಿಸುವ ಮುನ್ನ ರಾಜ್ಯ ಸರ್ಕಾರ ಈ ಪ್ರಶ್ನೆಗೆ ಉತ್ತರಿಸಬೇಕು:

ಡಿಸ್ಟಿಲರಿಗಳು ರೈತರಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿಯೇ (MSP) ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಕರ್ನಾಟಕ ಸರ್ಕಾರ ಏಕೆ ಕಡ್ಡಾಯಗೊಳಿಸಿಲ್ಲ? ಸ್ಥಳೀಯ ಖರೀದಿ ನಿಯಮಗಳನ್ನು ಜಾರಿಗೊಳಿಸುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರದ ಬಳಿ ಇದೆ.

ಒಂದು ವೇಳೆ ಡಿಸ್ಟಿಲರಿಗಳು ಎಂ.ಎಸ್.ಪಿ ಗಿಂತ ಕಡಿಮೆ ದರದಲ್ಲಿ ಖರೀದಿಸುತ್ತಿದ್ದರೆ, ಅದಕ್ಕೆ ರಾಜ್ಯ ಸರ್ಕಾರವು ಸೂಕ್ತ ಆದೇಶ ನೀಡದಿರುವುದೇ ಮುಖ್ಯ ಕಾರಣ.ಡಿಸ್ಟಲರಿಗಳು ಬೇಡಿಕೆಯನ್ನು ನೀಡಬೇಕು ಎಂದು SoP ಎಲ್ಲಿ ಅತ್ಯಂತ ಸ್ಪಷ್ಟವಾಗಿ ಹೇಳಲಾಗಿದೆ ಈ ಎಲ್ಲ ಡಿಸ್ಟಾಲರಿಗಳು ಕಾರ್ಯನಿರ್ವಹಿಸುವುದು ರಾಜ್ಯ ಸರ್ಕಾರದ ಅಬಕಾರಿ ಇಲಾಖೆಯ ಅಡಿಯಲ್ಲಿ, ಸರ್ಕಾರದ ಈ ನಿಷ್ಕ್ರಿಯತೆಗೆ ಇಂದು ರೈತರು ಬೆಲೆ ತೆರುತ್ತಿದ್ದಾರೆ. ಇದಕ್ಕೆ ಮೂಲ ತಮ್ಮ ಆಡಳಿತದ ವೈಫಲ್ಯತೆ.

Siddaramaiah VS DK Shivakumar: ನಾಯಕತ್ವ ಬದಲಾವಣೆಗೆ ಮುನ್ನುಡಿ ಬರೆದ್ರಾ ಕೈ ನಾಯಕರು..? #congress

3. “70 LMT ಆಮದು” ಎಂಬ ಹಸಿ ಸುಳ್ಳು.
ಭಾರತ ಸರ್ಕಾರವು ಈ ವರ್ಷ 70 ಎಲ್.ಎಂ.ಟಿ (LMT) ಮೆಕ್ಕೆಜೋಳ ಆಮದು ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಸರ್ಕಾರದ ಆರೋಪವು ಸಂಪೂರ್ಣ ಸತ್ಯಕ್ಕೆ ದೂರವಾದ ಮಾತು.
2025-26ರ ನೈಜ ಅಂಕಿಅಂಶಗಳು ಬೇರೆಯದೇ ಕಥೆ ಹೇಳುತ್ತವೆ:
ಆಮದು (Imports): ಕೇವಲ ~0.5 LMT ಮಾತ್ರ.
ರಫ್ತು (Exports): ~2.52 LMT.

4. ಇನ್ನೊಂದೆಡೆ, ಮೆಕ್ಕೆಜೋಳದ ಆಮದು ಸುಂಕವು (Import Duty) ಶೇ. 50 ರಷ್ಟಿದ್ದು, ಇದು ಆಮದನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಸುಳ್ಳು ಅಂಕಿಅಂಶಗಳನ್ನು ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ, ನಿಖರತೆಯೇ ಮುಖ್ಯ. ಬ್ಲೇಮ್ ಗೇಮನ್ನೇ ತಮ್ಮ ಆಡಳಿತದ ಮೂಲ ಮಂತ್ರವನ್ನಾಗಿಸಿಕೊಂಡಿದ್ದೆ ಇದಕ್ಕೆ ಕಾರಣವಲ್ಲವೇ?

5. ಎಥೆನಾಲ್ ಉತ್ಪಾದನೆಗೆ ಮೆಕ್ಕೆಜೋಳ ಹಂಚಿಕೆಯಲ್ಲಿ ಭಾರಿ ಹೆಚ್ಚಳ ಮಾಡಲಾಗಿರುವದನ್ನು
ರಾಜ್ಯ ಸರ್ಕಾರ ಮರೆಮಾಚುತ್ತಿರುವ ಸತ್ಯವೇನೆಂದರೆ, ಎಥೆನಾಲ್ ಮತ್ತು ಕೈಗಾರಿಕಾ ಬಳಕೆಗೆ ಹಂಚಿಕೆ ಮಾಡಲಾದ ಮೆಕ್ಕೆಜೋಳದ ಪ್ರಮಾಣದಲ್ಲಿ ಅಧಿಕ ಏರಿಕೆಯಾಗಿದೆ:
2022-23: 8.29 LMT
2023-24: 75.38 LMT
2024-25: 125.75 LMT
ಇದು 2022-23 ಕ್ಕೆ ಹೋಲಿಸಿದರೆ 1,417% ರಷ್ಟು ಹೆಚ್ಚಳವಾಗಿದೆ ಮತ್ತು ಕಳೆದ ವರ್ಷಕ್ಕಿಂತ 66% ರಷ್ಟು ಏರಿಕೆಯಾಗಿದೆ. ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಬೇಡಿಕೆಯನ್ನು (Demand) ಸ್ಪಷ್ಟವಾಗಿ ಹೆಚ್ಚಿಸಿದೆ, ಆದರೆ ರಾಜ್ಯ ಸರ್ಕಾರವು ಇದರ ಲಾಭ ರೈತರಿಗೆ ಸಿಗುವಂತೆ ನೋಡಿಕೊಳ್ಳುವಲ್ಲಿ ಸೋತಿದೆ. ನಮ್ಮ ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ಅದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತದೆ. ಪ್ರತಿ ಬಾರಿಯೂ ಕೇಂದ್ರದತ್ತ ಬೆರಳು ಮಾಡಿ ದೂಷಿಸುವ ಬದಲು, ರೈತರ ಸಂಕಷ್ಟ ಪರಿಹರಿಸಲು ರಾಜ್ಯ ಸರ್ಕಾರವು ಕೂಡಲೇ ತಾನು ಮಾಡಬೇಕಾದ ಕರ್ತವ್ಯಗಳನ್ನೂ ಹಾಗೂ ಕೈಗೊಳ್ಳಬೇಕಾದ ಕ್ರಮಗಳನ್ನು ನೆರವೇರಿಸುವುದು ಅತ್ಯಾವಶ್ಯಕವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress
Tags: CM SiddaramaiahcongressKarnatakaKarnataka PoliticsNarendra ModiPoliticsprahalad joshi
Previous Post

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Next Post

ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ: ಕೆ.ವಿ.ಪ್ರಭಾಕರ್

Related Posts

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರಿಗೆ ಈ ಹೊಸ ವಾರದ ಆರಂಭ ಉತ್ಸಾಹಕರವಾಗಿರುತ್ತದೆ. ಕೆಲಸಗಳಲ್ಲಿ ವೇಗ ಸಿಗಲಿದ್ದು, ಅಂದುಕೊಂಡ ದೊಡ್ಡ ಕಾರ್ಯವೊಂದು ಯಶಸ್ವಿಯಾಗಲಿದೆ. ದೊಡ್ಡ ನಿರ್ಧಾರಗಳಿಗೆ...

Read moreDetails

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
Next Post

ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ: ಕೆ.ವಿ.ಪ್ರಭಾಕರ್

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada