ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರಿಗೆ ಇಂದು ನಿಮ್ಮ ತ್ವರಿತ ನಿರ್ಧಾರಗಳಿಂದ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರ ವಹಿಸುವುದು ಉತ್ತಮ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಸಭೆ ಸಮಾರಂಭಗಳಿಗೆ ಭೇಟಿ ನೀಡುವಿರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯವಾಗಿದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯ ವೃತ್ತಿಪರರಿಗೆ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ವಿದ್ಯಾಭ್ಯಾಸದಲ್ಲಿ ಉತ್ತಮ ಅಭಿವೃದ್ಧಿಯಾಗಲಿದೆ.
ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕರ್ಕಾಟಕ ರಾಶಿಯ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುತ್ತದೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ವಿವಾದಗಳು ಉಂಟಾಗುತ್ತವೆ. ಮಾತು ನಡೆ ನುಡಿಯಲ್ಲಿ ಎಚ್ಚರ ವಹಿಸಿ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಬಹಳ ದಿನಗಳಿಂದ ಕಾಡುತ್ತಿದ್ದ ಚಿಂತೆಗಳಿಂದ ಪರಿಹಾರ ದೊರೆಯಲಿದೆ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ಕ್ರೀಡೆಗಳಲ್ಲಿ ಸಮಯ ಕಳೆಯುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚಾಗಲಿದೆ. ಹಣವನ್ನು ಬೇರೆಯವರಿಗೆ ಸಾಲವಾಗಿ ನೀಡುವ ಬಗ್ಗೆ ಜಾಗರೂಕರಾಗಿರಿ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರು ಇಂದು ಯಾವುದೇ ವ್ಯವಹಾರವನ್ನು ಮಾಡುವ ಮುನ್ನ ಎರಡು ಬಾರಿ ಯೋಚಿಸಿ. ದೂರದ ಪ್ರಯಾಣದಲ್ಲಿ ಲಾಭವಾಗಲಿದೆ. ಹೊಸ ಕಾರ್ಯಗಳಿಗೆ ಸ್ನೇಹಿತರಿಂದ ಅನುಕೂಲವಾಗುತ್ತದೆ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರು ಇಂದು ಇತರರೊಂದಿಗೆ ಸಂತೋಷದ ದಿನವನ್ನು ಕಳೆಯುವಿರಿ. ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುವಿರಿ. ನೆಮ್ಮದಿ ಸಿಗಲಿದೆ.
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರು ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಇಂದು ಭರವಸೆಯ ದಿನವಾಗಿದೆ. ಅಮೂಲ್ಯ ವಸ್ತುಗಳ ಬಗ್ಗೆ ಎಚ್ಚರ ವಹಿಸಿ. ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಹೆಜ್ಜೆ ಇಡಿ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರು ಇಂದು ದೀರ್ಘಕಾಲದ ಹೂಡಿಕೆಯಿಂದ ಲಾಭವನ್ನು ನಿರೀಕ್ಷಿಸಬಹುದು. ಸ್ಥಿರ ಆಸ್ತಿ ಖರೀದಿ ಬಗ್ಗೆ ಆಲೋಚಿಸುವಿರಿ. ಆರೋಗ್ಯ ಸುಧಾರಿಸಲಿದೆ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಇಂದು ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಹಣದ ಅಭಾವ ಉಂಟಾಗುತ್ತದೆ. ಹೊಸ ಹೂಡಿಕೆಯಲ್ಲಿ ದಿಢೀರ್ ಧನ ಲಾಭವಾಗಲಿದೆ. ಮಕ್ಕಳ ಬಗ್ಗೆ ಜಾಗೃತಿ ವಹಿಸಿ .
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಸರ್ಕಾರಿ ವ್ಯವಹಾರದಲ್ಲಿ ಹೆಚ್ಚು ಅಭಿವೃದ್ಧಿಯಾಗಲಿದೆ. ಸ್ವಂತ ಉದ್ಯೋಗಸ್ಥರಿಗೆ ಹೆಚ್ಚು ಧನ ಲಾಭ ಉಂಟಾಗುತ್ತದೆ ದೂರದ ಪ್ರಯಾಣದಿಂದ ಲಾಭವಾಗಲಿದೆ.











