• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಕರ್ನಾಟಕ, ರಾಜಕೀಯ
0
ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲ ಮೂಡಿಸಿರುವ ಕಾಂಗ್ರೆಸ್‌ ಮುಖ್ಯಮಂತ್ರಿ ಕುರ್ಚಿ ಜಟಾಪಟಿಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೌನ ಮುರಿದಿದ್ದು, ಪಕ್ಷಕ್ಕೆ ಮುಜುಗರ ತರಲು ನನಗೆ ಇಷ್ಟವಿಲ್ಲ ಎಂದಿದ್ದಾರೆ.

D K Shivakumar : ನಾನು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರಲ್ಲ..! #pratidhvani #watch #siddaramaiah

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವುʼ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲೇ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕುʼ ಎಂದರು.

Zameer Ahmed Khan : ಚಿಕ್ಕಬಳ್ಳಾಪುರದಲ್ಲಿ ಜಮೀರ್ ಅಹ್ಮದ್ ಅಬ್ಬರದ ಭಾಷಣ #pratidhvani

ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಅಭಿಮಾನಿಗಳು ಪೂಜೆ, ಪ್ರಾರ್ಥನೆಗಳನ್ನು ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರುʼ.

ʼನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇರೆ ಹೇಳಿಕೆ ಕೊಟ್ಟರು. ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷʼ ಎಂದು ತಿಳಿಸಿದರು.

Nikhil Kumaraswamy : ಡಿಕೆ ಶಿವಕುಮಾರ್ ಗೆ ಖಡಕ್ ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರಸ್ವಾಮಿ #pratidhvani
Tags: BJPCM Siddaramaiahcongressdcm dk shivkumarKarnatakaKarnataka PoliticsPolitics
Previous Post

ʼಭೂಮಿಗೆ ಬಂದಾಗ ನಿಲ್ಲಲು ಸಹ ಆಗುತ್ತಿರಲಿಲ್ಲʼ:ಭಯಾನಕ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

Next Post

ʼನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕುʼ: ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ʼನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕುʼ: ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

ʼನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕುʼ: ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada