• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in ಕರ್ನಾಟಕ
0
ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ
Share on WhatsAppShare on FacebookShare on Telegram

ಬೆಳಗಾವಿ: ಕರ್ನಾಟಕ ಕೇಡರ್ ನ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ (51) ಮಂಗಳವಾರ ಸಂಜೆ
ಕಾರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸದ್ಯ ಬೀಳಗಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಹಿಂದೆ ದಾವಣಗೆರೆ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಬೀಳಗಿ ಸೇವೆ ಸಲ್ಲಿಸಿದ್ದರು.

ADVERTISEMENT

ನಿನ್ನೆ ಸಂಜೆ ಮಹಾಂತೇಶ್ ಬೀಳಗಿ ಮದುವೆ ಕಾರ್ಯಕ್ರಮಕ್ಕಾಗಿ ಬೆಳಗಾವಿಯ ರಾಮದುರ್ಗದಿಂದ ಕಲಬುರಗಿಯತ್ತ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಬೀಳಗಿ ವಾಹನಕ್ಕೆ ಅಡ್ಡಲಾಗಿ ಬೈಕ್ ಸವಾರನೋರ್ವ ಬಂದ ಪರಿಣಾಮ ಬೈಕ್ ಸವಾರನನ್ನು ಉಳಿಸಲು ಹೋಗಿ ಸೇತುವೆಗೆ ರಭಸವಾಗಿ ಕಾರ್ ಡಿಕ್ಕಿ ಹೊಡೆದು ಸೇತುವೆಯ ಕೆಳಗೆ ಕಾರು ಪಲ್ಟಿಯಾಗಿದೆ. ಈ ವೇಳೆ ಈರಣ್ಣ ಬೀಳಗಿ ಹಾಗು ಹಾಗೂ ಶಂಕರ್ ಬೀಳಗಿ ಸ್ಥಳದಲ್ಲೆ ಸಾವನಪ್ಪಿದ್ರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಮತ್ತೊಬ್ಬ ಸ್ನೇಹಿತರನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

IAS Officer Mahantesh Bilagi Death: ಕಡು ಬಡತನದಿಂದ ಬೆಳೆದು ಬಂದ ಐಎಎಸ್ ಅಧಿಕಾರಿ ಇವರು #pratidhvani

ಕರ್ನಾಟಕದಲ್ಲಿ ತಮ್ಮ ಸೇವೆ ಹಾಗೂ ಕಾರ್ಯವೈಖರಿಯಿಂದಲೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಖ್ಯಾತಿ ಗಳಿಸಿದ್ದರು. ಕರ್ತವ್ಯ ಪಾಲನೆ ಹಾಗೂ ಜನಪರ ಕಾಳಜಿಯ ಕೆಲಸಗಳಿಂದಲೇ ಅವರು ಖ್ಯಾತಿ ಗಳಿಸಿದ್ದರು. ಬೀಳಗಿ ಅಕಾಲಿಕ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ.

2012 ಕರ್ನಾಟಕ ಕೇಡರ್‌ ಐಎಎಸ್‌ ಅಧಿಕಾರಿಯಾಗಿದ್ದ ಬೀಳಗಿಯವರು ಹಲವು ಜಿಲ್ಲೆಗಳ ಸಿಇಒ, ಜಿಲ್ಲಾಧಿಕಾರಿಯಾಗಿ ಕಾರ್ಯ ಕೆಲಸ ಮಾಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡು ಬೆಸ್ಕಾಂ ಎಂಡಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಇತ್ತೀಚೆಗೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದರು.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮಹಾಂತೇಶ್ ಬೀಳಗಿ ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

ಮೃತ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ ಇಂದು ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ನಡೆಯಲಿದೆ.

 

 

Tags: #ias #upscMahantesh Bilagiroad accident
Previous Post

ಜಟಿಲ ಸವಾಲುಗಳ ನಡುವೆ ಸಂವಿಧಾನ ದಿನಾಚರಣೆ

Next Post

ಹುಟ್ಟೂರಿಗೆ ಆಗಮಿಸಿದ ಮಹಾಂತೇಶ ಬೀಳಗಿ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬ‌ಸ್ಥರ ಆಕ್ರಂದನ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಹುಟ್ಟೂರಿಗೆ ಆಗಮಿಸಿದ ಮಹಾಂತೇಶ ಬೀಳಗಿ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬ‌ಸ್ಥರ ಆಕ್ರಂದನ

ಹುಟ್ಟೂರಿಗೆ ಆಗಮಿಸಿದ ಮಹಾಂತೇಶ ಬೀಳಗಿ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬ‌ಸ್ಥರ ಆಕ್ರಂದನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada