• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಹುದ್ದೆ, ಅಧಿಕಾರ ಹಸ್ತಾಂತರದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ- ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ಹುದ್ದೆ, ಅಧಿಕಾರ ಹಸ್ತಾಂತರದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ- ಡಿಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜೊತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT
CM  siddaramaiah on DkShivakumar: CM-DCM ರೇಸ್ ಬಗ್ಗೆ ಕಡ್ಡಿ ಮುರಿದಂಗೆ ಮಾತಾಡಿದ  siddaramaiah

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. ಜೊತೆಗೆ ನಾವಿಬ್ಬರು ಆತ್ಮೀಯ ಸ್ನೇಹಿತರು. ಇಬ್ಬರ ಬಾಂಧವ್ಯ ಚೆನ್ನಾಗಿದೆ. ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದೇವೆ. ನಾನು ಮತ್ತು ಸತೀಶ್ ಇಬ್ಬರೂ ಪ್ರಸ್ತುತ ಒಂದೇ ಸಂಪುಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಪಕ್ಷದ ದೊಡ್ಡ ಆಸ್ತಿ. ನಾವು ನಮ್ಮ ಕೆಲಸ ಮುಂದುವರೆಸಿಕೊಂಡು ಹೋಗುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಮಿಕ್ಕ ಸಮಯದಲ್ಲಿ ಏನೇನು ಕೆಲಸಗಳನ್ನು ಮಾಡಬೇಕು ಎಂದು ಚರ್ಚೆ ನಡೆಸಲಾಗಿದೆ. ಇದು ಬಿಟ್ಟರೆ ಮಾತುಕತೆಯಲ್ಲಿ ಬೇರೆ ವಿಶೇಷತೆ ಏನಿಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ, ಡಿಸಿಎಂ ಬಣವಿದೆ ಎನ್ನುವ ಚರ್ಚೆಯ ಬಗ್ಗೆ ಉತ್ತರಿಸಿದ ಅವರು, ನನ್ನದು ಯಾವುದೇ ಬಣವಿಲ್ಲ. ಒಂದು ಬಣವಿದೆ, ಅದು ‘ಕಾಂಗ್ರೆಸ್ ಬಣ’.‌ ನನ್ನ ಸಂಖ್ಯೆ 140. ಸಾಮೂಹಿಕ ನಾಯಕತ್ವದಲ್ಲಿ ಈ ಪಕ್ಷವನ್ನು ಕಟ್ಟಲಾಗಿದೆ. ಪಕ್ಷಕ್ಕೆ ನಾನೊಬ್ಬನೆ ದುಡಿದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ, ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ಶಾಸಕರ ಶ್ರಮದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇವೆ. ಇದನ್ನು ಉಳಿಸಿಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಹಾಗೂ ನಾನು ಭೇಟಿ ಮಾಡಿ ಚರ್ಚಿಸಿದ್ದೇವೆ ಎಂದರು.

ಸೂಕ್ತ ಸಮಯದಲ್ಲಿ ಪಕ್ಷ ತೀರ್ಮಾನ ಮಾಡಲಿದೆ

ಶಾಸಕರು ಹೈಕಮಾಂಡ್ ಭೇಟಿಗೆ ಪ್ರಯತ್ನಿಸಿದ ಬಗ್ಗೆ ಮಾತನಾಡಿದ ಅವರು, ನನಗೆ ಇದರ ಬಗ್ಗೆ ಗೊತ್ತಿಲ್ಲ. ಮುಖ್ಯಮಂತ್ರಿಯವರು ಸಂಪುಟ ಪುನರ್ ರಚನೆ ಮಾಡಲಾಗುವುದು ಎಂದಿದ್ದಾರೆ. ಎಲ್ಲರಿಗೂ ಮಂತ್ರಿಯಾಗಬೇಕು ಎನ್ನುವ ಆಸೆ ಇರುತ್ತದೆ. ಆದ ಕಾರಣಕ್ಕೆ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ. ಸಚಿವ ಸ್ಥಾನದ ಆಕಾಂಕ್ಷೆ ಇರುವುದರ ಬಗ್ಗೆ ನಾನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನನ್ನ ಪರವಾಗಿ ಯಾರೂ ಮಾತನಾಡುವುದು ಬೇಡ. ಪಕ್ಷ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಣಯ ಕೈಗೊಳ್ಳಲಿದೆ. ಅಧಿಕಾರದ ಬಗ್ಗೆ ಏನೇ ಚರ್ಚೆಯಗಿದ್ದರೂ ಅದು ನಾಲ್ಕು ಗೋಡೆಗಳ ಮಧ್ಯೆ ಆಗಿದೆ. ಅದನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದರು.

DkShivakumar on MLAs: ಕೈ ಪಾಳಯದಲ್ಲಿನ ಬಣ ರಾಜಕೀಯದ ಬಗ್ಗೆ DK ಡೇರಿಂಗ್ ಸ್ಟೇಟ್​ಮೆಂಟ್ | #pratidhvani

ಮುಖ್ಯಮಂತ್ರಿ ಹುದ್ದೆ, ಅಧಿಕಾರ ಹಸ್ತಾಂತರ ಈ ಎಲ್ಲದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರು, ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸುತ್ತಾರೆ. ಅವರುಗಳು ಸೂಕ್ತ ತೀರ್ಮಾನ ಮಾಡುತ್ತಾರೆ ಎಂದರು.

Tags: cm siddarmaiahcongressdcm dk shivkumarKarnatakaPolitics
Previous Post

ಕನ್ನಡವನ್ನು ಬಳಸಿ, ಬೆಳೆಸಿದಾಗಷ್ಟೇ ರಾಜ್ಯೋತ್ಸವ-ನಿತ್ಯೋತ್ಸವ: ಅಗ್ರಹಾರ ಕೃಷ್ಣಮೂರ್ತಿ

Next Post

Daily Horoscope: ಇಂದು ಲಕ್ಷ್ಮೀ ದೇವಿಯ ಕೃಪೆ ಇರುವ ಅದೃಷ್ಟದ ರಾಶಿಗಳಿವು..!

Related Posts

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..
Top Story

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಪ್ರಮುಖ ವಿಚಾರಗಳನ್ನು...

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
Next Post
Daily Horoscope: ಇಂದು ಲಕ್ಷ್ಮೀ ದೇವಿಯ ಕೃಪೆ ಇರುವ ಅದೃಷ್ಟದ ರಾಶಿಗಳಿವು..!

Daily Horoscope: ಇಂದು ಲಕ್ಷ್ಮೀ ದೇವಿಯ ಕೃಪೆ ಇರುವ ಅದೃಷ್ಟದ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada