ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಸಿಎಂ ಬದಲಾವಣೆ ಹಾಗೂ ಅಧಿಕಾರ ಹಂಚಿಕೆಗೆ ಚರ್ಚೆ ಇದೀಗ ಮಹತ್ವದ ಹಂತಕ್ಕೆ ಬಂದು ತಲುಪಿದೆ. ಸದ್ಯ ಹೈಕಮಾಂಡ್ ಅಂಗಳದಲ್ಲಿರುವ ಸಿಎಂ ಕುರ್ಚಿ ಕದನದ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಹೇಳಿಕೆಯೊಂದನ್ನು ನೀಡಿದ್ದಾರೆ.

ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎನ್ನುವುದು ಒಬ್ಬರೇ ಅಲ್ಲ.. ಅದೊಂದು ತಂಡ. ಹೀಗಾಗಿ ಯಾವುದೇ ವಿಚಾರವಿದ್ದರೂ ಎಲ್ಲರೂ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಒಟ್ಟಿಗೆ ಕೂತು ಚರ್ಚೆ ನಡೆಸುತ್ತೇವೆ. ಆ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇರುತ್ತಾರೆ. ಮುಂದೆ ಏನು ಮಾಡಬೇಕೆಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.












