• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಅವರ ನಿಲುವೇ ನನ್ನ ನಿಲುವು-ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 29, 2025
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಅವರ ನಿಲುವೇ ನನ್ನ ನಿಲುವು-ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Siddaramaiah-DKS: ಸುಳ್ಳು ಆರೋಪ ಆರೋಪ ಮಾಡುವುದು ಬಿಜೆಪಿ, ಜೆಡಿಎಸ್ ಚಾಳಿ ಸಿದ್ದು ವಾಗ್ದಾಳಿ #pratidhvani

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಕಷ್ಟದ ಸಮಯದಲ್ಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮಹತ್ತರ ಪಾತ್ರ ನಿರ್ವಹಿಸಲಿದೆ. 2028ರ ಚುನಾವಣೆ ನಂತರ 2029ರ ಲೋಕಸಭೆ ಚುನಾವಣೆಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ 2028 ಕ್ಕೆ ಹಾಗೂ 2029ರಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದು, ಮುಂದೆಯೂ ಅದೇ ರೀತಿ ಕೆಲಸ ಮಾಡಲು ಅಚಲ ನಿರ್ಧಾರ ಕೈಗೊಂಡಿದ್ದೇವೆ ಎಂದರು.

Siddaramaiah-DKS breakfast Meeting: ಡಿಕೆ ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #pratidhvani

ಇಂದು ನಾನು ಹಾಗೂ ಸಿಎಂ ಅವರು ಉಪಹಾರ ಕೂಟದಲ್ಲಿ ಭಾಗವಹಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಭೋಜನಕೂಟಕ್ಕೆ ಬರಲಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಾರ್ಯಕರ್ತರ ಪರಿಶ್ರಮ, ಜನರ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತಿನಂತೆ ಜನರ ಸೇವೆ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡುತ್ತಿದ್ದಾರೆ. ಜನರ ನಿರೀಕ್ಷೆ, ಆಕಾಂಕ್ಷೆ, ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ನಮ್ಮಲ್ಲಿ ಯಾವುದೇ ಗುಂಪಿಲ್ಲ, ಇಡೀ ಕಾಂಗ್ರೆಸ್ ಒಂದೇ ಗುಂಪು

ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ಕೃಷ್ಣ ಅವರ ಕಾಲದಲ್ಲೂ ಗುಂಪುಗಾರಿಕೆ ಮಾಡಿಲ್ಲ. ಇವತ್ತಿಗೂ ಅವಕಾಶ ಕೊಟ್ಟಿಲ್ಲ. ನನಗೆ ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೊದಲ ಆರು ತಿಂಗಳು ನನ್ನನ್ನು ಮಂತ್ರಿ ಮಾಡದೇ ಇದ್ದಾಗಲೂ ನಾನು ಒಂದೇ ಒಂದು ಮಾತನ್ನೂ ಆಡಿರಲಿಲ್ಲ. ಒಟ್ಟಾಗಿ ಕೆಲಸ ಮಾಡುವ ನನ್ನ ನಿರ್ಧಾರ ಅಚಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು, ಪ್ರತಿಯೊಬ್ಬ ಶಾಸಕರಿಗೆ ಶಕ್ತಿ ತುಂಬಿ, ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವುದು ನಮ್ಮಿಬ್ಬರ ಕರ್ತವ್ಯ. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಅನೇಕ ಕಾರ್ಯಕ್ರಮ ರೂಪಿಸಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ನೀಡಿರುವ ಸಂದೇಶಕ್ಕೆ ನನ್ನ ಸಹಮತವಿದೆ ಎಂದರು.

Siddaramaiah-DKS breakfast Meeting: ಸಿದ್ದರಾಮಯ್ಯ ಮನೆಯಲ್ಲಿ ಡಿಕೆಶಿ ಮಾತುಕತೆ..! #dkshivakumar
Tags: CM Siddaramaiahcongressdcm dk shivkumarKarnatakaPolitics
Previous Post

ಅತಿಥಿಗಳೇ ಅತೀರೇಖ ಮಾಡಿದ್ರಾ..? ಕಿಚ್ಚನ ಖಡಕ್‌ ಕ್ಲಾಸ್‌ ಯಾರಿಗೆ..?

Next Post

ಲವ್ ಮಾಕ್ಟೇಲ್ ಸಿನಿಮಾದಲ್ಲಿ ನೇರಾನೇರಾ ಬಾಡಿ ಶೇಮಿಂಗ್: ನಟಿ ಗೀತಾ ಭಾರತಿ ಬೇಸರ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಲವ್ ಮಾಕ್ಟೇಲ್ ಸಿನಿಮಾದಲ್ಲಿ ನೇರಾನೇರಾ ಬಾಡಿ ಶೇಮಿಂಗ್: ನಟಿ ಗೀತಾ ಭಾರತಿ ಬೇಸರ

ಲವ್ ಮಾಕ್ಟೇಲ್ ಸಿನಿಮಾದಲ್ಲಿ ನೇರಾನೇರಾ ಬಾಡಿ ಶೇಮಿಂಗ್: ನಟಿ ಗೀತಾ ಭಾರತಿ ಬೇಸರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada