*Former Congress MLA from Chikkapet assembly constituency in Bengaluru, R.V. Devaraj passed away in Mysore**ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*
ಬೆಂಗಳೂರು: ಚಿಕ್ಕಪೇಟೆ (Chikpet) ಕ್ಷೇತ್ರದ ಮಾಜಿ ಶಾಸಕ (Ex-MLA), ಹಿರಿಯ ಕಾಂಗ್ರೆಸ್ ನಾಯಕ
(Congress Leader) ಆರ್.ವಿ. ದೇವರಾಜ್ (RV Devraj) ನಿಧನರಾಗಿದ್ದಾರೆ. 67 ವರ್ಷದ ಆರ್‌ವಿ ದೇವರಾಜ್, ಇಂದು ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾರೆ. ಮೈಸೂರಿನ (Mysore) ಚಾಮುಂಡಿ ಬೆಟ್ಟಕ್ಕೆ (Chamundi Hills) ಹೋಗಿದ್ದಾಗ ಹೃದಯಾಘಾತ ಸಂಭವಿಸಿದೆ. ಮೊದಲು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೆ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ.











