ಬಾಗಲಕೋಟೆ: ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಿದ್ದಾಪುರ ಬಳಿ ನಡೆದಿದೆ.

ಪ್ರವೀಣ್ ಶೇಡಬಾಳ್ (22) ಗಣೇಶ ಅಳ್ಳಿಮಟ್ಟಿ (20) ವಿಶ್ವನಾಥ್ ಕಂಬಾರ್ (17) ಹಾಗೂ ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನಾಲ್ವರು ಯುವಕರಿದ್ದ ಕಾರು ವೇಗವಾಗಿ ಬಂದು ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ಗೆ ಹಿಂದಿನಿಂದ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರಿನಲ್ಲಿದ್ದ ಮೃತದೇಹಗಳನ್ನು ಜೆಸಿಬಿಯಿಂದ ಹೊರ ತೆಗೆದು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತ ಸಂಬಂಧ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







