ಮಂಗಳೂರು: ಸಿಎಂ ಕುರ್ಚಿ ಶೀತಲ ಸಮರ ತಣ್ಣಾಗಾದ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಇಂದು ಉಳ್ಳಾಲದಲ್ಲಿ ನಡೆದ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಕೆ.ಸಿ. ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಇಬ್ಬರು ಅಕ್ಕಪಕ್ಕದಲ್ಲೇ ಕುಳಿತುಕೊಂಡು ಗುಸು ಗುಸು ಮಾತುಕತೆ ನಡೆಸಿದ್ದಾರೆ. ಅತ್ತ ಬಿ.ಕೆ ಹರಿಪ್ರಸಾದ್ ಭಾಷಣ ಮಾಡುತ್ತಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯ ನೀಡುತ್ತಿರುವ ವಿವರಣೆಗೆ ವೇಣುಗೋಪಾಲ್ ತಲೆ ಆಡಿಸುತ್ತಿರುವ ದೃಶ್ಯ ಕಂಡುಬಂದಿತು.

ಇದೀಗ ವೇಣುಗೋಪಾಲ್ ಜೊತೆಗಿನ ಮಾತುಕತೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಮ್ಮ ನಡುವೆ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಮಾತನಾಡಿ, ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ. ಅವರು ದೆಹಲಿಗೆ ಹೋಗುವುದಕ್ಕೆ ಯಾರೂ ಬೇಡ ಎನ್ನುವುದಿಲ್ಲ. ಸದ್ಯ ನಾನು ಹೋಗುವುದಿಲ್ಲ ಎಂದಿದ್ದಾರೆ.





