• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕದ್ದ ವಾಚ್‌ ಇರಬಹುದೇ? ಎಂದ ಛಲವಾದಿ ಬಾಯಿ ಮುಚ್ಚಿಸಿದ ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ಕರ್ನಾಟಕ, ರಾಜಕೀಯ
0
ಕದ್ದ ವಾಚ್‌ ಇರಬಹುದೇ? ಎಂದ ಛಲವಾದಿ ಬಾಯಿ ಮುಚ್ಚಿಸಿದ ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D. K. Shivakumar) ಇಬ್ಬರು ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಧರಿಸಿದ್ದ ಕಾರ್ಟಿಯರ್‌ ಕಂಪನಿ ವಾಚ್‌(Cartier watch) ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಅಲ್ಲದೇ ಪ್ರತಿಪಕ್ಷ ಬಿಜೆಪಿ(BJP) ವಾಚ್‌ ಕುರಿತು ಚುನಾವಣಾ ಆಯೋಗಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿತ್ತು.

ADVERTISEMENT
DK Shivakumar: ಜೊತೆ 2 ನೇ ಬಾರಿ ಮೀಟ್‌.. ಅಸಲಿ ವಿಚಾರ ಬಿಚ್ಚಿಟ್ಟ ಡಿಕೆ ಶಿವಕುಮಾರ್..!‌ #satishjarkiholi

ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆಪಾದಿಸಿದ್ದರು. ಅಫಿಡವಿಟ್‍ನಲ್ಲಿ ಡಿ.ಕೆ.ಶಿವಕುಮಾರ್‌ ಅವರು ಒಂದು ರೋಲೆಕ್ಸ್‌ ವಾಚ್‌ ಬೆಲೆಯನ್ನು ರೂ.9 ಲಕ್ಷ, ಹ್ಯುಬ್ಲೋ ವಾಚ್‌ ಬೆಲೆಯನ್ನು ರೂ.23,90,246 ಎಂದು ನಮೂದಿಸಿದ್ದಾರೆ.

ಅವರಿಬ್ಬರ ಕೈಯಲ್ಲಿ ಇರುವ  ಕಾರ್ಟಿಯರ್‌ ಕಂಪನಿಯ ವಾಚ್‌ ದರ ರೂ.43 ಲಕ್ಷ ಇದೆ. ತೆರಿಗೆ ಸೇರಿ 47 ಲಕ್ಷ ರೂ ಆಗುತ್ತದೆ. ಈ ವಾಚ್‌ನ ಮಾಹಿತಿ ಅಫಿಡವಿಟ್‌ನಲ್ಲಿ ಇಲ್ಲ. ಇದು ಕಳವು ಮಾಡಿದ ವಾಚ್‌ ಇರಬಹುದೇ? ಖರೀದಿಸಿದ್ದರೆ ಈ ಬಗ್ಗೆ ದಾಖಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದರು.  ವಾಚ್‌ ಕುರಿತು ಸಾಕಷ್ಷು ಅನುಮಾನ ವ್ಯಕ್ತಪಡಿಸಿದ್ದರು.

ಛಲವಾದಿ ನಾರಾಯಣಸ್ವಾಮಿ ಅವರ ಈ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅಫಿಡವಿಟ್‌ ಸಮೇತ ಉತ್ತರಿಸುವ ಮೂಲಕ ತಿರುಗೇಟು ನೀಡಿದ್ದಾರೆ ʼಮಿಸ್ಟರ್ ನಾರಾಯಣಸ್ವಾಮಿ.., ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್. ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲʼ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

NirmalaSitharaman Parliament : ಸಂಸತ್‌ನಲ್ಲಿ ಸಚಿವೆ ನಿರ್ಮಲಾ ಮಾತಿಗೆ ಓಂ ಬಿರ್ಲಾ ಸ್ಫೀಕರ್‌ ಮೆಚ್ಚುಗೆ #ombirla

ʼನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿʼ ಎಂದು ಡಿ.ಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

NirmalaSitharaman Parliament : ಸಂಸತ್‌ನಲ್ಲಿ ಸಸಿಕಾಂತ್ ಸೆಂಥಿಲ್‌ಗೆ ಚಾಟಿ ಬೀಸಿದ ಸಚಿವೆ ನಿರ್ಮಲಾ #pratidhvani

ಶೆಡ್ಯೂಲ್‌ 7ರ ಅಡಿಯಲ್ಲಿ ಸಲ್ಲಿಸಲಾಗಿರುವ ಅಫಿಡವಿಟ್‌ನಲ್ಲಿ ರೋಲೆಕ್ಸ್‌ ಗಡಿಯಾರ 9 ಲಕ್ಷ ರೂಪಾಯಿ, ಕಾರ್ಟಿಯರ್‌ ಗಡಿಯಾರ 23,90,246 ಹಾಗೂ 12,06,000 ಲಕ್ಷ ರೂಪಾಯಿಯ ಮೌಲ್ಯದ್ದಾಗಿವೆ. ಆದರೆ ಇವುಗಳನ್ನು ಸಂಬಂಧಿಕರು, ಗೆಳೆಯರು ಕೊಡುಗೆ ನೀಡಿದ್ದಾರೆ. ಅಲ್ಲದೇ ಕೆಲವನ್ನು ಕೃಷಿ ಆದಾಯ, ಡಿವಿಡೆಂಟ್‌ ಸೇರಿದಂತೆ ಸಂಬಳದಂತಹ ಮೂಲಗಳ ಆದಾಯದಿಂದ ಪಡೆಯಲಾಗಿದೆ ಎಂದು ಡಿಕೆ ಶಿವಕುಮಾರ್‌ ನಾರಾಯಣಸ್ವಾಮಿಗೆ ಕೌಂಟರ್‌ ನೀಡಿದ್ದಾರೆ.

ಮಿಸ್ಟರ್ ನಾರಾಯಣಸ್ವಾಮಿ..,@NswamyChalavadi ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್!

ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ!

ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ.… pic.twitter.com/nNBfGuJMHM

— DK Shivakumar (@DKShivakumar) December 5, 2025

Tags: BJPChalavadi Narayana SwamyCM SiddaramaiahcongressDK ShivakumarKarnatakaPolitics
Previous Post

IndiGo Crisis: ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ನಿಯಮಕ್ಕೆ ಕೇಂದ್ರ ವಿನಾಯಿತಿ

Next Post

ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?

ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada