• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದೇ ಕಿಡ್ನಿ ಹೊಂದಿದ್ದ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆಯ ಕಸಿ: ಕಿದ್ವಾಯಿ ಮತ್ತೊಂದು ಸಾಧನೆ

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in Top Story, ಕರ್ನಾಟಕ
0
ಒಂದೇ ಕಿಡ್ನಿ ಹೊಂದಿದ್ದ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆಯ ಕಸಿ: ಕಿದ್ವಾಯಿ ಮತ್ತೊಂದು ಸಾಧನೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ(Kidwai )ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ(Cancer) ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸುತ್ತಿದ್ದ 9 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ/ ಮೂಳೆ ಮಜ್ಜೆಯ ಕಸಿ (ಬಿಎಂಟಿ)ಯನ್ನು ಯಶಸ್ವಿಯಾಗಿ ನಿರ್ವಹಿಸಿ ಮಹತ್ವದ ಮೈಲಿಗಲ್ಲು ಸ್ಥಾಪಿಸಲಾಗಿದೆ.

Pradeep Eshwar  ಪ್ರದೀಪ್  ಈಶ್ವರ್  ಮಾತಿಗೆ ಹಾಸನ ಜನರು ಫುಲ್  ಫಿದಾ  ! #siddaramaiah #dkshivakumar #hassan

ಯುವರಾಜ್ (ಹೆಸರು ಬದಲಾಯಿಸಿದೆ) ಎಂಬ ಬಾಲಕನಿಗೆ ಡಿಸೆಂಬರ್ 2022 ರಲ್ಲಿ ವಿಲ್ಮ್ಸ್ ಟ್ಯೂಮರ್ ಇರುವುದು ಪತ್ತೆಯಾಯಿತು. ಕೀಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ತದನಂತರ ರೇಡಿಯೇಷನ್ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್, ಏಪ್ರಿಲ್ 2025 ರಲ್ಲಿ ಮರುಕಳಿಸಿತು. ಆಗ ಅವನು ಬದುಕುಳಿಯುವ ಅತ್ಯುತ್ತಮ ಅವಕಾಶವೆಂದರೆ ಹೆಚ್ಚಿನ ಪ್ರಮಾಣದ ಕೀಮೋಥೆರಪಿ ಮತ್ತು ನಂತರ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ ಎಂದು ಕಿದ್ವಾಯಿ ವೈದ್ಯರು ತೀರ್ಮಾನಿಸಿದರು.

ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ವಸುಂಧರಾ ಕೈಲಾಸನಾಥ್, ಬಿಎಂಟಿ – ಸಹ ಪ್ರಾಧ್ಯಾಪಕರು ಮತ್ತು ಅವರ ತಂಡವು ಬಿಎಂಟಿ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿತು. ಚಿಕ್ಕ ವಯಸ್ಸಿನಲ್ಲಿಯೇ ಕೀಮೊಥೆರಪಿ ಚಿಕಿತ್ಸೆ ನೀಡಿದ್ದರಿಂದ, ಹೆಚ್ಚಿನ ಪ್ರಮಾಣದ ಬಿಎಂಟಿ ಔಷಧಿಗಳ ಅಗತ್ಯತೆ ಮತ್ತು ತೀವ್ರವಾದ, ಕಾಯಿಲೆಯಿಂದ ಜೀವಕ್ಕೆ ಅಪಾಯಕಾರಿಯಾಗಿತ್ತು. ಈ ನಿಟ್ಟಿನಲ್ಲಿ ಈ ಚಿಕಿತ್ಸೆ ವಿಶೇಷವಾಗಿತ್ತು ಹಾಗೂ ಸವಾಲಿನಿಂದ ಕೂಡಿತ್ತು ಎಂದು ಡಾ. ವಸುಂಧರಾ ತಿಳಿಸಿದ್ದಾರೆ.

ದೇವೇಗೌಡ್ರು ಮಾತಿಗೆ ಬಿದ್ದು ಬಿದ್ದು ಎದ್ದು ನಕ್ಕ ಡಿಕೆ ಶಿವಕುಮಾರ್ #pratidhvani

ಕಳೆದ ಮೂರು ವರ್ಷಗಳಲ್ಲಿ ಇಲ್ಲಿಯವರೆಗೆ 130 ಬಿಎಂಟಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರಾದ ಡಾ. ನವೀನ್. ಟಿ ತಿಳಿಸಿದ್ದಾರೆ. ಬಾಲಕನಿಗೆ ಅತ್ಯಂತ ಯಶಸ್ವಿಯಾಗಿ ಚಿಕಿತ್ಸೆ ನೀಡಿರುವ ವೈದ್ಯರ ತಂಡವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅಭಿನಂದಿಸಿ ಶ್ಲಾಘಿಸಿದ್ದಾರೆ.

ವಿಶೇಷ ಪರವಾನಗಿ ಪಡೆದ ಕಿದ್ವಾಯಿ ಸಂಸ್ಥೆ

ಬಿಎಂಟಿ ಸೇವೆಗಳಿಗಾಗಿ ಹೋಟಾ (ಮಾನವ ಅಂಗಗಳು ಮತ್ತು ಅಂಗಾಂಶಗಳ ಕಸಿ ಕಾಯ್ದೆ, 1994) ಪರವಾನಗಿಯನ್ನು ಪಡೆಯುವ ಮೂಲಕ ಕಿದ್ವಾಯಿ ಸಂಸ್ಥೆಯು ಮತ್ತೊಂದು ಸಾಧನೆಯನ್ನು ಮಾಡಿದೆ. ಈ ಪ್ರಮಾಣ ಪತ್ರವನ್ನು ಪಡೆದ ಕರ್ನಾಟಕದ ಕೆಲವೇ ಆಸ್ಪತ್ರೆಗಳಲ್ಲಿ ಕಿದ್ವಾಯಿ ಕೂಡ ಒಂದಾಗಿದೆ. ಸಂಸ್ಥೆಯ ನಿರ್ದೇಶಕರಾದ ಡಾ. ನವೀನ್.ಟಿ ಅವರಿಗೆ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಪ್ರಮಾಣ ಪತ್ರವನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು.

Darshan Fans ; ಡೆವಿಲ್‌ ರಿಲೀಸ್‌ ದಿನ ನಮಗೆ ತುಂಬಾ ಜವಾಬ್ದಾರಿ ಇದೆ..! #pratidhvani #darshanthoogudeepa
Tags: bengaluruCancerHospitalKarnatakaKidwaiKidwai Hospital
Previous Post

ರಾಜಕೀಯ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆದ ಕೋಲ್ಕತ್ತಾದ ಸಾಮೂಹಿಕ ಭಗವದ್ಗೀತೆ ಪಠಣ

Next Post

ಏಕವಚನ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಷಿ ಕೆಂಡ

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಏಕವಚನ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಷಿ ಕೆಂಡ

ಏಕವಚನ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಷಿ ಕೆಂಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada