• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in Top Story, ಸಿನಿಮಾ
0
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Share on WhatsAppShare on FacebookShare on Telegram

ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’(Mahakavi) ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ. ‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ ಎನ್ನುವುದು ಒಂದು ವಿಶೇಷ.

ADVERTISEMENT
Belagavi Session : ಕೈಯಲ್ಲಿ ಲಾಠಿ ಹಿಡಿದು ನಿಂತ ಪೊಲೀಸರು   #pratidhvani

‘ಮಹಾಕವಿ’ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಪಂಪ ಮಹಾಕವಿಯು ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನು ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನು ಕುರಿತ ಪಂಪನ ಪರಿಕಲ್ಪನೆಯು ಇಂದಿಗೂ ಪ್ರಸ್ತುತವಾಗಿದೆ. ಅಂತೆಯೇ ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ.

‘ಆದಿಪುರಾಣ’ದಲ್ಲಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದು ಪ್ರತಿಪಾದಿಸಿದ ಪಂಪ, ‘ವಿಕ್ರಮಾರ್ಜುನ ವಿಜಯ’ದಲ್ಲಿ ಕರ್ಣನ ಪಾತ್ರದ ಮೂಲಕ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಾನೆ. ‘ಆದಿಪುರಾಣ’ದಲ್ಲಿ ಅಧಿಕಾರದ ಅಹಂಕಾರಕ್ಕೆ ವಿರೋಧ ಒಡ್ಡಿ ಯುದ್ಧದ ಬದಲು ಶಾಂತಿ ಸಂದೇಶ ನೀಡಿದ್ದಾನೆ. ಭೋಗದ ನಶ್ವರತೆಯನ್ನು ಪ್ರತಿಪಾದಿಸಿದ್ದಾನೆ. ಈ ಎಲ್ಲಾ ಪರಿಕಲ್ಪನೆಗಳಿಗೆ ಪ್ರತೀಕವಾಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆ.

Belagavi Winter Session: ಸದನದಲ್ಲಿ ರೇವಣ್ಣಗೆ ಸಚಿವ ಚಲುವರಾಯಸ್ವಾಮಿ ಟಾಂಗ್  #pratidhvani

ಪಂಪ ಮಹಾಕವಿಯ ಕೆಲವು ಪದ್ಯಗಳನ್ನು ಚಿತ್ರದಲ್ಲಿ ಬಳಸಿದ್ದು, ಒಂದು ಗೀತೆಯನ್ನು ಬರಗೂರರು ರಚಿಸಿದ್ದಾರೆ. ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಪಂಪನ ಪಾತ್ರದಲ್ಲಿ ಪ್ರಸಿದ್ಧ ಕಲಾವಿದ ಕಿಶೋರ್ ಅಭಿನಯಿಸಿದ್ದು, ‘ಬಿಗ್‍ಬಾಸ್’ ಖ್ಯಾತಿಯ ಅನುಷಾ ರೈ ನಾಯಕಿಯ ಪಾತ್ರದಲ್ಲಿದ್ದಾರೆ. ಬಾಲಕ ಪಂಪನ ಪಾತ್ರವನ್ನು ಆಕಾಂಕ್ಷ್ ಬರಗೂರು ವಹಿಸಿದ್ದು, ಹಿರಿಯ ನಟರಾದ ಸುಂದರ ರಾಜ್, ಪ್ರಮೀಳಾ ಜೋಷಾಯ್, ಕುಮಾರ್ ಗೋವಿಂದ್, ಸುಂದರರಾಜ ಅರಸು, ವತ್ಸಲಾ ಮೋಹನ್, ರಾಘವ್, ಹನುಮಂತೇಗೌಡ, ಶಾಂತರಾಜು, ಚಲಪತಿ ಸಿರಾ, ಬಾಲಕೃಷ್ಣ ಬರಗೂರು, ನಟರಾಜ್, ಪ್ರವೀಣ್, ಮುಂತಾದವರ ತಾರಾಗಣವಿದೆ.

CM Siddaramaiah  ಸಿಎಲ್‌ಪಿಯಲ್ಲಿ ಚರ್ಚೆ ಮಾಡಿದ್ದು ನಿಮಗೆ ಹೇಳ್ಬೇಕಾ..? ಸಿಎಂ ಗರಂ..! #pratidhvani

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ನಟ್ರಾಜ್ ಶಿವು ಮತ್ತು ಪ್ರವೀಣ್ ಅವರ ಸಹನಿರ್ದೇಶನ, ತ್ರಿಭುವನ್ ನೃತ್ಯ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನವು ಈ ಚಿತ್ರಕ್ಕಿದೆ.

Tags: Kannadakannada moviesMahakaviMoviePampasandalwood
Previous Post

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

Next Post

ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada