• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿ ಚಳಿಗಾಲದ ವಿಧಾನಸಭೆಯ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ(Greater Bengaluru Authority) ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು.

ADVERTISEMENT
Belagavi Session: ಕಲಾಪದಲ್ಲಿ ಬಿಜೆಪಿ ನಾಯಕರ ಮಾತಿಗೆ ಸಿಎಂ ಕೌಂಟರ್‌..! #siddaramaiah #pratidhvani

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆಶಿವಕುಮಾರ್ ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು.

CM Siddaramaiah: ಆರ್ಚ್ ಬಿಷಪ್ ಡೆರೆಕ್ ಫೆರ್ನಾಂಡೀಸ್‌ಗೆ ಭೇಟಿ ಅವರಿಂದ ಗೌರವ ಸ್ವೀಕರಿಸಿದ ಸಿದ್ದರಾಮಯ್ಯ..!

ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ. ಇನ್ನು ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ.

Kuruba: ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಕುರುಬ ಸಮಾಜದ ಮುಖಂಡರು..! #kuruba #siddaramaiah

ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

Siddaramaiah ಇನ್ನೆಷ್ಟು ದಿನ Cmಅಂತ ಕಾಲೆಳೆದ ವಿಪಕ್ಷಗಳಿಗೆ ಸಿದ್ರಾಮಯ್ಯ ಖಡಕ್ ಕೌಂಟರ್ #pratidhvani

ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ

ಈ ವೇಳೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಅವರು ಮಾತನಾಡಿ, ʼಈಗಾಗಲೇ 369 ಪಾಲಿಕೆ ಸದಸ್ಯರಿರುತ್ತಾರೆ. ಸರ್ಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆʼ ಎಂದು ಕೇಳಿದರು.

Siddaramaiah ಇನ್ನೆಷ್ಟು ದಿನ Cmಅಂತ ಕಾಲೆಳೆದ ವಿಪಕ್ಷಗಳಿಗೆ ಸಿದ್ರಾಮಯ್ಯ ಖಡಕ್ ಕೌಂಟರ್  #pratidhvani

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ʼಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಈ ವಿಚಾರವಾಗಿ ಸದ್ಯಕ್ಕೆ ಸಮಸ್ಯೆ ಬರುವುದಿಲ್ಲ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯ್ತಿ ಸದಸ್ಯನಾಗಿದ್ದರೆ, ಅವರಿಗೆ ಇದರಲ್ಲಿ ಮತದಾನದ ಹಕ್ಕು ಬರುವುದಿಲ್ಲ. ಈ ಬದಲಾವಣೆಯ ಹಂತದಲ್ಲಿ ಆ ಪ್ರದೇಶವನ್ನು ಪ್ರತಿನಿಧಿಸಲು ಒಂದು ಅವಕಾಶ ಕಲ್ಪಿಸಿದ್ದೇವೆ. ಇದು ಅಗತ್ಯವಿಲ್ಲ, ಬೇಡ ಎಂದರೆ ಇದನ್ನು ತೆಗೆದುಹಾಕಲು ಸಿದ್ಧವಿದ್ದೇನೆ. ನಿಮ್ಮ ಸಲಹೆಯಂತೆ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆʼ ಎಂದರು.

Belagavi Session: ಶಾಸಕ ರಂಗನಾಥ್‌ ಪ್ರಶ್ನೆಗೆ ಸಿಎಂ ಖಡಕ್‌ ಉತ್ತರ..! #ranganatha #kunigal #mla

ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತದಾನದ ಹಕ್ಕು ಇರಬೇಕು

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ʼರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಒಂದೊಂದು ನಗರ ಸಭೆ, ಪುರಸಭೆಗಳಿಗೆ ಬದಲಾವಣೆ ಮಾಡಿಕೊಂಡು ಹೋಗುತ್ತಿರುತ್ತಾರೆ. ಬೆಂಗಳೂರು ಪಾಲಿಕೆ ಚುನಾವಣೆ, ಬಳ್ಳಾರಿ ನಗರ ಸಭೆ ಚುನಾವಣೆ, ಬೀದರ್ ನಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೋಗು ಮತ ಚಲಾಯಿಸುತ್ತಾರೆ. ಇದು ನಕಲಿ ಮತದಾನದಂತಾಗುತ್ತದೆ. ಹೀಗಾಗಿ ಅವರು ಯಾವುದಾದರೂ ಒಂದು ಕಡೆ ಐದು ವರ್ಷ ತಮ್ಮ ಮತದಾನದ ಅಧಿಕಾರ ಹೊಂದಿರಬೇಕುʼ ಎಂದು ತಿಳಿಸಿದರು.

HD Devegowda: ಇಳಿವಯಸ್ಸಿನಲ್ಲೂ ಕಾಂಗ್ರೆಸ್‌ ಸದಸ್ಯರ  ಬೆವರಿಳಿಸಿದ ದೇವೇಗೌಡ..! #pratidhvani

ಇದಕ್ಕೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ʼನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲʼ ಎಂದು ತಿಳಿಸಿದರು. ಈ ವೇಳೆ ಮಾತನಾಡಿದ ಸಿಎಂ ಆರ್ಥಿಕ ಸಲಹೆಗಾರರಾದ ಶಾಸಕ ಬಸವರಾಜ ರಾಯರೆಡ್ಡಿ ಅವರು ʼಈ ರೀತಿ ಮಾಡಲು ಜನಪ್ರತಿನಿಧಿಗಳ ಕಾಯ್ದೆ ಇದಕ್ಕೆ ಅವಕಾಶ ನೀಡುವುದಿಲ್ಲ. ವಿಳಾಸ ಬದಲಾವಣೆ ಮಾಡಿದರೆ, ನಾನು ಆ ಭಾಗದ ಮತದಾರನಾಗುತ್ತೇನೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆಯನ್ನು ಪರಿಶೀಲಿಸಿ ತೀರ್ಮಾನಕ್ಕೆ ಬನ್ನಿʼ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್‌ಅವರು, ʼಹಾಗೆಂದು ಮತದಾನವನ್ನು ಟೂರಿಂಗ್ ಟಾಕೀಸ್ ಮಾಡಿಕೊಳ್ಳಲು ಆಗುವುದಿಲ್ಲʼ ಎಂದು ಸ್ಪಷ್ಟಪಡಿಸಿದರು.

Tags: DCM DK ShivakumarGBAKarnataka PoliticsPoliticsWinter sessionWinter Session ̄2025
Previous Post

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Next Post

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada