ಮೇಷ ರಾಶಿಯ ಇಂದಿನ ಭವಿಷ್ಯ

ಲೇವಾದೇವಿ ವ್ಯವಹಾರ ಮಾಡುವ ಮೇಷ ರಾಶಿಯವರಿಗೆ ಇಂದು ಅನಿರೀಕ್ಷಿತ ಧನ ಲಾಭವಾಗಲಿದೆ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಹೆಚ್ಚಾಗಲಿದೆ
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಕಠಿಣ ಪರಿಶ್ರಮದ ಅಗತ್ಯವಿರುತ್ತದೆ. ಕಾರ್ಯ ಕ್ಷೇತ್ರದಲ್ಲಿ ಪ್ರಗತಿ ಸಿಗಲಿದೆ. ನಿರೀಕ್ಷಿತ ಫಲಿತಾಂಶ ಸಿಗುವ ದಿನ. ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ಕೌಟುಂಬಿಕ ನೆಮ್ಮದಿ ಹೆಚ್ಚಾಗಲಿದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರು ಇಂದು ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯುತ್ತವೆ. ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಉಳಿತಾಯದ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬೇಡಿ.
ಕಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಸಾಕಷ್ಟು ಕೆಲಸದ ಒತ್ತಡ ಉಂಟಾಗುತ್ತದೆ. ಬರಬೇಕಾದ ಬಾಕಿ ಹಣ ಕೈಸೇರುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಹೆಚ್ಚು ಹಣ ಖರ್ಚಾಗುವ ಸಾಧ್ಯತೆ ಇದೆ. ದಿನಪೂರ್ತಿ ಸಮಯ ವ್ಯರ್ಥವಾಗಲಿದೆ. ಹಿತೈಷಿಗಳಿಂದ ಬೆಂಬಲ ಸಿಗಲಿದೆ. ಅನಿರೀಕ್ಷಿತ ಧನಲಾಭವಾಗಲಿದೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ಸಾಲ ಮಾಡುವ ಸಾಧ್ಯತೆ ಹೆಚ್ಚಿದೆ. ಖರ್ಚುಗಳನ್ನು ನಿಯಂತ್ರಿಸಿ. ವಿದೇಶ ಸಂಬಂಧಪಟ್ಟ ವ್ಯವಹಾರದಲ್ಲಿ ಅಭಿವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರು ಇಂದು ಹಿತ ಶತ್ರುಗಳಿಂದ ದೂರವಿರಿ. ಅತಿಯಾದ ಕೋಪವನ್ನು ತಪ್ಪಿಸಿ, ಮಾತಿನಲ್ಲಿ ಹಿಡಿತ ಇರಲಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗುತ್ತದೆ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ದೂರ ಪ್ರಯಾಣದ ಕೆಲಸ ಕಾರ್ಯ ಸಿದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ನೀರು ಹೆಚ್ಚು ಸೇವಿಸಿ. ಮಕ್ಕಳೊಂದಿಗೆ ಸಮಯ ಕಳೆಯಿರಿ.
ಧನಸ್ಸು ರಾಶಿಯ ಇಂದಿನ ಭವಿಷ್ಯ

ಧನಸ್ಸು ರಾಶಿಯವರಿಗೆ ಇಂದು ಕೆಲಸದ ಸ್ಥಳದಲ್ಲಿ ಬದಲಾವಣೆಗಳಾಗುವ ಸಾಧ್ಯತೆಯಿದೆ. ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿಯಾಗಲಿದೆ, ಅನಗತ್ಯ ಖರ್ಚು ಬರಲಿದ್ದು, ಹಣದ ಮೇಲೆ ಹಿಡಿತ ಇರಲಿ. ವಿದೇಶ ಪ್ರವಾಸದ ಅವಕಾಶ ಸಿಗಲಿದೆ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರಿಗೆ ಇಂದು ಹಳೆಯ ಸ್ನೇಹಿತರ ಸಹಾಯದಿಂದ ಉದ್ಯೋಗ ಪ್ರಾಪ್ತಿಯಾಗುತ್ತದೆ. ಆದಾಯದಲ್ಲಿ ಅಡೆತಡೆಗಳು ಉಂಟಾಗುತ್ತದೆ. ಮಾನಸಿಕ ಕಿರಿ ಕಿರಿ ಹೆಚ್ಚಾಗುತ್ತದೆ. ಧ್ಯಾನದತ್ತ ಗಮನ ಹರಿಸಿ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಸಂಗ್ರಹವಾದ ಸಂಪತ್ತು ಹೆಚ್ಚಾಗುತ್ತದೆ. ಹೊಸ ನಿರ್ಧಾರಗಳಿಗೆ ಮನೆಯವರ ಬೆಂಬಲ ಪಡೆಯಿರಿ. ಉತ್ತಮ ಆರೋಗ್ಯಕ್ಕಾಗಿ ಆಹಾರದ ಮೇಲೆ ಹಿಡಿತ ಇರಲಿ. ವಿವಾಹಕ್ಕೆ ಅಡೆತಡೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದೆ.
ಮೀನ ರಾಶಿಯ ಇಂದಿನ ಭವಿಷ್ಯ
ಮೀನ ರಾಶಿಯವರು ಇಂದು ಮಾನಸಿಕವಾಗಿ ನೆಮ್ಮದಿಯನ್ನು ಕಾಣುತ್ತೀರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ. ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಹಣವೊಂದು ಕೈ ಸೇರಲಿದೆ. ಕೌಟುಂಬಿಕ ನೆಮ್ಮದಿ ಹೆಚ್ಚಾಗಲಿದೆ.












