• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in Top Story, ಕರ್ನಾಟಕ, ರಾಜಕೀಯ
0
ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕದನ ದಿನಕಳೆದಂತೆ ತಾರಕಕ್ಕೇರುತ್ತಿದೆ. ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಮೂಲಕ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌(Congress) ಹೈಕಮಾಂಡ್‌ ಮಾಡಿದ್ದ ಪ್ಲಾನ್‌ ಕೈ ಕೊಟ್ಟಿದೆ. ಇದರ ಪರಿಣಾಮ ಬೆಳಗಾವಿಯ ಚಳಿಗಾಲದ ಅಧಿವೇಶನದ(Winter Session 2025) ಮೇಲೆ ಬೀರಿದಂತಾಗಿತ್ತು. ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚೆ ಮಾಡಬೇಕಾಗಿದ್ದ ನಾಯಕರು ಸಿಎಂ ಬದಲಾವಣೆಯ ಬಗ್ಗೆ ದಿನಕ್ಕೊಂದರಂತೆ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದರು.

ADVERTISEMENT
HD Kumaraswamy: ಅದೆಷ್ಟೋ ಬಾರಿ ಬೆನ್ನಿಗೆ ಚೂರಿ ಇರಿದ್ರು... #pratidhvani

ಈ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ. ತಮ್ಮ ಎಂದಿನ ಶೈಲಿಯಲ್ಲಿಯೇ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ವಿಧಾನಸಭೆಯಲ್ಲಿ ಈ ಮಾತನ್ನು ಸಿದ್ದು ಪುನರುಚ್ಚರಿಸುವ ಮೂಲಕ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಬಣಕ್ಕೆ ಟಾಂಗ್‌ ನೀಡಿದ್ದರು. ಈ ಮೂಲಕ ತಾವು ನೀಡಬೇಕಾಗಿದ್ದ ಸ್ಪಷ್ಟ ಸಂದೇಶವನ್ನು ರವಾನಿಸುವಲ್ಲಿ ಸಿಎಂ ಯಶಸ್ವಿಯಾಗಿದ್ದರು.

Lakshmi Hebbalkar: ಸತ್ತವರ ಖಾತೆಗೂ ಗೃಹ ಲಕ್ಷ್ಮೀ ಹಣ ಹೋಗ್ತಿತ್ತು ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಮಾತು.!

ಅಲ್ಲದೇ ಇದೇ ವಿಚಾರಕ್ಕೆ ಸರಣಿ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿದ್ದ ತಮ್ಮ ಪುತ್ರ ಹಾಗೂ ವಿಧಾನಪರಿಷತ್‌ ಸದಸ್ಯ ಡಾ. ಯತೀಂದ್ರಗೆ ಕ್ಲಾಸ್‌ ತೆಗೆದುಕೊಂಡಿದ್ದರು. ಗೊಂದಲಕಾರಿ ಹೇಳಿಕೆಗಳನ್ನು ನೀಡದಂತೆ ತಾಕೀತನ್ನೂ ಮಾಡಿದ್ದರು. ಇದಾದ ಬಳಿಕ ಡಿಕೆ ಶಿವಕುಮಾರ್‌ ನಾಯಕತ್ವದ ಬದಲಾವಣೆಯ ಕುರಿತು ಕಳೆದೆರಡು ದಿನಗಳಿಂದ ನೀಡುತ್ತಿರುವ ಹೇಳಿಕೆಗಳು ಸಾಕಷ್ಟು ಕುತೂಹಲ ಮೂಡಿಸುತ್ತಿವೆ.

Siddaramaiah:  ಹೆಚ್ಚು ಮಾತನಾಡೋಕೆ ಸ್ಪೀಕರ್‌ ಟೈಮ್‌ ಕೊಟ್ಟಿದ್ದಾರೆ..!  #pratidhvani

ಸಿಎಂ ಸಿದ್ದರಾಮಯ್ಯ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಆಪ್ತರ ಡಿನ್ನರ್‌ ಮೀಟಿಂಗ್‌ ನಡೆಸಿದ್ದರು. ಇದಕ್ಕೂ ಸಹ ಡಿಕೆಶಿ ತಾಳ್ಮೆಯಿಂದಲೇ ಅದು ಸಹಜ ಎಂದು ಪ್ರತಿಕ್ರಿಯಿಸಿದ್ದರು. ಊಟ ಮಾಡೋಕೆ ಬೇಡ ಅನ್ನೀಕ್ಕಾಗಲ್ಲ, ಅದರಲ್ಲಿ ತಪ್ಪೇನಿದೆ ಎಂದಿದ್ದರು. ಈ ಮೊದಲು ಜಾರಕಿಹೊಳಿಯನ್ನು ರಹಸ್ಯವಾಗಿ ಭೇಟಿಯಾಗಿ ಪಕ್ಷದ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದ ಡಿಕೆ ಶಿವಕುಮಾರ್‌ ಸಿದ್ದರಾಮಯ್ಯ ಆಪ್ತರನ್ನು ವಿಶ್ವಾಸಕ್ಕೆ ಪಡೆಯುವ ಚಿಂತನೆ ಮಾಡಿದಂತೆ ಕಂಡುಬರುತ್ತಿದೆ. ಸತೀಶ್‌ ಬಳಿಕ ಡಿಕೆ ಶಿವಕುಮಾರ್‌ ಮಾಜಿ ಸಚಿವ ರಾಜಣ್ಣ ಅವರನ್ನು ಭೇಟಿಯಾಗಿ ಪ್ರಮುಖ ರಾಜಕೀಯ ವಿಚಾರಗಳ ಬಗ್ಗೆಯೂ ಚರ್ಚಿಸಿದ್ದಾರೆ. ರಣತಂತ್ರದ ಮೂಲಕ ಸಿಎಂ ಹಾದಿ ಸುಲಭವಾಗುವುದು ಕಷ್ಟ ಸಾಧ್ಯ ಎಂದು ಮನಗಂಡಿರುವ ಡಿಸಿಎಂ ಪ್ರೀತಿ, ವಿಶ್ವಾಸದ ಮೂಲಕ ಹೆಜ್ಜೆ ಇಟ್ಟರೆ ಹೆಚ್ಚಿನ ಅನುಕೂಲ ಎನ್ನುವುದನ್ನು ಅರಿತುಕೊಂಡಂತೆ ಕಂಡು ಬರುತ್ತಿದೆ. ಈ ಕಾರಣಕ್ಕಾಗಿಯೇ ದೈವೀ ಶಕ್ತಿಗಳ ಜೊತೆಗೆಯೇ ಸಿದ್ದ ಶಕ್ತಿಗಳನ್ನು ಒಲಿಸಿಕೊಳ್ಳುವ ನಿಟ್ಟಿನಲ್ಲಿ ಡಿಕೆ ಶಿವಕುಮಾರ್‌ ಮುಂದಾಗಿದ್ದಾರೆ ಎನ್ನಲಾಗಿದೆ.

Belagavi Council Session 2025: ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ #pratidhvani

ಈ ನಡುವೆಯೇ ನಾನು ಸಿಎಂ ಇಬ್ಬರೂ ಒಂದು ಒಪ್ಪಂದಕ್ಕೆ ಬಂದಿದ್ದೇವೆ. ಹೈಕಮಾಂಡ್‌ ಇಬ್ಬರಿಗೂ ಒಪ್ಪಂದ ಮಾಡಿಕೊಂಡಿದ್ದೇವೆ ಎಂದಿರುವ ಡಿಕೆ ಶಿವಕುಮಾರ್‌ ಇನ್ನೊಂದು ಒಪ್ಪಂದದ ಬಾಂಬ್‌ ಸಿಡಿಸಿದ್ದಾರೆ. ಈ ಮೂಲಕ ಹೈಕಮಾಂಡ್‌ ಈ ವಿಚಾರದ ಮೇಲೆ ನಿಗಾಇರಿಸಿದೆ ಎಂದು ಡಿಸಿಎಂ ಪರೋಕ್ಷವಾಗಿ ತಿಳಿಸಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಡಿಕೆ ಶಿವಕುಮಾರ್‌ ಆಪ್ತ ಶಾಸಕರು ತಮ್ಮ ಹೇಳಿಕೆಗಳನ್ನು ನಿಲ್ಲಿಸಿಲ್ಲ. ಜನವರಿ 6ರಂದು ಡಿಕೆಶಿ ಸಿಎಂ ಆಗುತ್ತಾರೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಆದರೆ ಲಂಗು ಲಗಾಮಿಲ್ಲದೆ ಹೇಳಿಕೆ ನೀಡುತ್ತಿದ್ದ ಕೈ ನಾಯಕರಿಗೆ ಹೈಕಮಾಂಡ್‌ ಖಡಕ್‌ ಎಚ್ಚರಿಕೆ ನೀಡಿದೆ.

Belagavi Winter Session: ಸಿಎಂ ಸಿದ್ದರಾಮಯ್ಯ ವಾಗ್ದಾಳಿಗೆ ಮರು ಮಾತಿಲ್ಲದೆ ಕೂತ ವಿಪಕ್ಷ ಶಾಸಕರು #pratidhvani

ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕನಿಂದ ಬೆಳಿದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು ಎಂದು ಪರೋಕ್ಷವಾಗಿ ಡಿಕೆಶಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾರ್ನ್‌ ಮಾಡಿದ್ದಾರೆ.

DK Shivakumar : ಬಿಜೆಪಿಯಿಂದ ರಾಹುಲ್, ಸೋನಿಯಾ ಗಾಂಧಿ ಮುಟ್ಟೋಕಾಗಲ್ಲ... #pratidhvani #dkshivakumar

ಈ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷವಾಗಿದೆ. ಪಕ್ಷದ ಎಂಬ ವಿಚಾರ ಬಂದಾಗ ಅದರಲ್ಲಿ ಎಲ್ಲರ ಪಾತ್ರವೂ ಇರುತ್ತದೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ತೀಕ್ಷ್ಣವಾಗಿ ಚಾಟಿ ಬೀಸಿದ್ದಾರೆ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಹೈಕಮಾಂಡ್ ಯಾವುದೇ ರೀತಿಯ ಗೊಂದಲ ಮಾಡಿಲ್ಲ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಹೆಸರು ಹೇಳಿದರೆ ಹೇಗೆ ಖರ್ಗೆ ಪ್ರಶ್ನಿಸಿದ್ದಾರೆ. ಈ ಮೂಲಕ ಹೈಕಮಾಂಡ್‌ ನಾಯಕರು ನಿರ್ಧರಿಸುವವರೆಗೂ ಯಾವೊಬ್ಬ ನಾಯಕನೂ ಕೂಡ ವ್ಯತಿರಿಕ್ತ ಹೇಳಿಕೆಗಳನ್ನು ನೀಡಬಾರದು ಎಂದು ನಾಯಕರಿಗೆ ಮತ್ತೊಮ್ಮೆ ಮಲ್ಲಿಕಾರ್ಜುನ ಖರ್ಗೆ ಸಂದೇಶ ರವಾನಿಸಿದ್ದಾರೆ.

Tags: CM SiddaramaiahcongressDCM DK ShivakumarKaranatakaKarnataka PoliticsMallikarjuna KhargePolitics
Previous Post

ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Next Post

ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada