• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜ ಬದಲಾವಣೆಗೆ ಶ್ರಮಿಸಿದ ಸಂತರಲ್ಲಿ ಆದಿಜಗದ್ಗುರು ಶ್ರೀಗಳು ಮೇಲ್ಪಂಕ್ತಿಯಲ್ಲಿದ್ದಾರೆ

ಪ್ರತಿಧ್ವನಿ by ಪ್ರತಿಧ್ವನಿ
December 22, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ವಿದ್ಯಾವಂತರಿಗೆ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯಿರಬೇಕು. ಅಸಮಾನತೆ ನಿವಾರಣೆಯಾಗದೇ ಸಮಾಜದಲ್ಲಿ ಶಾಂತಿ ಸ್ಥಾಪನೆ ಅಸಾಧ್ಯ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಯಂತೋತ್ಸವಗಳು ಹಲವು ತಾಲ್ಲೂಕು ಮತ್ತುಜಿಲ್ಲಾ ಕೇಂದ್ರಗಳಲ್ಲಿ ನಡೆದುಕೊಂಡು ಬರುತ್ತಿದ್ದು, ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯಲಿರುವುದು ಸಂತೋಷದ ವಿಚಾರ. ಈ ಕಾರ್ಯಕ್ರಮ ಆಯೋಜನೆಯಲ್ಲಿ ಸಹಕರಿಸಿದ ಶಾಸಕರಾದ ಶ್ರೀ ನರೇಂದ್ರಸ್ವಾಮಿಯವರಿಗೆ ಅಭಿನಂದನೆಗಳು. ಈ ದೇಶದಲ್ಲಿ ಹಲವಾರು ಸಾಧುಸಂತರು, ಸೂಫಿ ಸಂತರು ಸಮಾಜದ ಬದಲಾವಣೆಗೆ ಶ್ರಮಿಸಿದ್ದು, ಈ ಪ್ರಯತ್ನದಲ್ಲಿ ಶ್ರೀಗಳು ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದರು.

ಯಾವುದೇ ಧರ್ಮ ದ್ವೇಷವನ್ನು ಬೋಧಿಸುವುದಿಲ್ಲ
ಸಮಾಜದಲ್ಲಿ ವಿವಿಧ ಜಾತಿಧರ್ಮಗಳಿದ್ದು, ಅಸಮಾನತೆಯ ಹುಟ್ಟಿಗೆ ಕಾರಣವಾಗಿದೆ. ಈ ಅಸಮಾನತೆ ನಿವಾರಣೆಯಾಗದೇ ಸಮಾಜದಲ್ಲಿ ಶಾಂತಿ ಸ್ಥಾಪನೆ ಅಸಾಧ್ಯ. ಬಸವಾದಿ ಶರಣರು ಮನುಷ್ಯ ಸಮಾಜ, ಸಮಾನ ಸಮಾಜ ನಿರ್ಮಾಣವಾಗಬೇಕೆಂದು ಅವಿರತ ಶ್ರಮಿಸಿದರು. ಆದಾಗ್ಯೂ ಸಮಾಜದಲ್ಲಿ ಜಾತಿವ್ಯವಸ್ಥೆ ಸಂಪೂರ್ಣ ನಿರ್ಮೂಲನೆಯಾಗಿಲ್ಲ. ಕವಿ ಕುವೆಂಪು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ ಸ್ಥಾಪನೆಯಾಗಲು ಮಾನವೀಯ ಸಮಾಜ ನಿರ್ಮಾಣವಾಗಬೇಕು. ಯಾವುದೇ ಧರ್ಮವಾಗಲಿ ಪ್ರೀತಿ ಧರ್ಮವನ್ನು ಬೋಧಿಸುತ್ತವೆಯೇ ಹೊರತು ದ್ವೇಷವನ್ನು ಬೋಧಿಸುವುದಿಲ್ಲ. ಇದು ನಮ್ಮ ಸಂಸ್ಕೃತಿ.ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ಸಮಾಜದಲ್ಲಿ ದ್ವೇಷಾಸೂಯೆ ಬಿತ್ತುವ ಅನೇಕ ಶಕ್ತಿಗಳು ಸಮಾಜದಲ್ಲಿ ಇವೆ. ಅಂತಹ ಶಕ್ತಿಗಳ ವಿರುದ್ಧ ಹೋರಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸಮಾಜದಲ್ಲಿ ಸಮಾಜಮುಖಿಯಾಗಿ ಬಾಳುವುದು ಮುಖ್ಯ
ಜಡತ್ವದ ಜಾತಿ ವ್ಯವಸ್ಥೆ ನಿವಾರಣೆಯಾಗಬೇಕಾದರೆ ಆರ್ಥಿಕ , ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಸಮಸಮಾಜ ನಿರ್ಮಿಸಲು ಸಾಧ್ಯ. ಮೌಢ್ಯಗಳಿಂದ ದೂರವಾಗಿ ಜಾತಿರಹಿತ, ವರ್ಗರಹಿತ ಸಮಾಜ ನಿರ್ಮಾಣವಾಗಬೇಕು ಎಂದು ಬಸವಾದಿಶರಣರರು ತಿಳಿಸಿದರು. ಇಂದಿಗೂ ಹಲವರು ಮೌಢ್ಯಗಳನ್ನು ನಂಬುತ್ತಾರೆ.ಹುಟ್ಟು ಸಾವಿನ ನಡುವಿನ ಜೀವನವನ್ನು ನಾವು ಸಾರ್ಥಕಗೊಳಿಸಿಕೊಳ್ಳಬೇಕು. ವಿದ್ಯಾವಂತರಿಗೆ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯಿರಬೇಕು. ಸಮಾಜದಲ್ಲಿ ಸಮಾಜಮುಖಿಯಾಗಿ ಬಾಳುವುದು ಮುಖ್ಯ ಮನುಷ್ಯ ಮನುಷ್ಯರ ನಡುವಿನ ದ್ವೇಷ ಅಮಾನವೀಯ ಎಂದರು.

ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು
ದೇಶಕ್ಕೆ ಸಂವಿಧಾನ ಜಾರಿಗೆ ಬರುವ ಸಂದರ್ಭದಲ್ಲಿ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದು, ಇದು ಬದಲಾಗಬೇಕಾದರೆ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತಿರಬೇಕು. ಮನುಷ್ಯನ ಕಷ್ಟ ಸುಖಗಳಿಗೆ ಸ್ಪಂದಿಸುವುದೇ ದಾಸೋಹ. ದೇ. ಜ . ಗೌ ಅವರು ಕಾಯಕ ಎಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ ಎಂದು ಹೇಳಿದ್ದರು. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು. ಒಬ್ಬರು ಉತ್ಪಾದಿಸಿದ್ದನ್ನು ಮತ್ತೊಬ್ಬರು ಅನುಭವಿಸುವಂತಾಗಬಾರದು ಎಂದರು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಅಸಮಾನತೆ ಹೋಗಬೇಕು
ಅಸಮಾನತೆ ಹೋಗಬೇಕಾದರೆ, ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಇಲ್ಲದಿದ್ದರೆ ಸ್ವಾತಂತ್ರ್ಯ ಗಳಿಸಿದ್ದು ಯಶಸ್ವಿಯಾಗುವುದಿಲ್ಲ. ಅಸಮಾನತೆಯಿಂದ ನರಳುವವರು ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡ್ತಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ. ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಅಸಮಾನತೆ ಹೋಗಬೇಕು ಎಂದು ಅವರು ಎಚ್ಚರಿಕೆ ನೀಡಿದ್ದರು. ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವ ಪ್ರಯತ್ನವನ್ನು ಎಲ್ಲರೂ ಮಾಡೋಣ ಎಂದರು.

Tags: CM Siddaramaiahcm siddaramaiah and dk shivakumarcm siddaramaiah breakfastcm siddaramaiah breakfast meetcm siddaramaiah dk shivakumar breakfast meetingcm siddaramaiah eating nati kolicm siddaramaiah in mangalorecm siddaramaiah latest newscm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs dcm dk shivakumarcm siddaramaiah vs dk shivakumarkarnataka cm siddaramaiahkarnataka cm siddaramaiah castsiddaramaiahsiddaramaiah news
Previous Post

“ವೃಷಭ” ಗೂಳಿ ತರಹ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೂ ಒಳ್ಳೆಯದಾಗಲಿ: ಡಿ.ಕೆ.ಶಿವಕುಮಾರ್

Next Post

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada