ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಲಷ್ಕರ್-ಎ-ತೈಬಾ ಉಗ್ರ ಟಿ ನಾಸಿರ್ ಗೆ ಸಹಾಯ ಮಾಡಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತೆ ಮೂವರು ಆರೋಪಿಗಳ ವಿರುದ್ಧ ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಟಿ.ನಾಸೀರ್ ಗೆ ಸಹಾಯ ಮಾಡಿದ್ದ ಅನೀಸ್ ಫಾತಿಮಾ, ಚಾನ್ ಪಾಷಾ ಎ, ಡಾ.ನಾಗರಾಜ್ ರನ್ನ NIA ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಮೂವರನ್ನು ತೀವ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ,ಸ್ಫೋಟಕ ದ್ರವ್ಯಗಳ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆ, ಕರ್ನಾಟಕ ಕಾರಾಗೃಹ ಕಾಯ್ದೆ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
2023ರಲ್ಲಿ ಬೆಂಗಳೂರು ನಗರದಲ್ಲಿ ಉಗ್ರ ದಾಳಿಗಳನ್ನು ನಡೆಸುವ ಉದ್ದೇಶದಿಂದ
ಶಸ್ತ್ರಾಸ್ತ್ರಗಳು, ಗ್ರನೇಡ್, ಡಿಜಿಟಲ್ ಸಾಧನಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದರು. ನಂತರ NIA ಈ ಪ್ರಕರಣದ ತನಿಖೆ ಶುರುಮಾಡಿತ್ತು. ಬಳಿಕ ಪರಾರಿಯಾಗಿರುವ ಜುನೈದ್ ಅಹ್ಮದ್ ಸೇರಿದಂತೆ ಒಟ್ಟು 9 ಆರೋಪಿಗಳ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು. ಈ ಆರೋಪಿಗಳು ಭಾರತದ ಸಾರ್ವಭೌಮತೆ ಮತ್ತು ಭದ್ರತೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಉಗ್ರ ಚಟುವಟಿಕೆಗಳನ್ನು ಯೋಜಿಸಿದ್ದರು ಎಂದು NIA ಚಾರ್ಜ್ ಶೀಟ್ ಸಲ್ಲಿಸಿದೆ.








