• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಒಂದರ ಮೇಲೆ ಇನ್ನೊಂದು ಭಾಷೆ ಹೇರುವ ಪ್ರಯತ್ನ ಸಲ್ಲದು : ಮಲಯಾಳಿ ಪಿಣರಾಯಿ ವಿಜಯನ್‌ ವಿರುದ್ದ ಸಿದ್ದರಾಮಯ್ಯ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಒಂದರ ಮೇಲೆ ಇನ್ನೊಂದು ಭಾಷೆ ಹೇರುವ ಪ್ರಯತ್ನ ಸಲ್ಲದು : ಮಲಯಾಳಿ ಪಿಣರಾಯಿ ವಿಜಯನ್‌ ವಿರುದ್ದ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT
G Parameshwara : CLP ಸಭೆಯಲ್ಲಿ 5 ವರ್ಷ CM Siddaramaiah CM ಅಂತ ತೀರ್ಮಾನವಾಗಿದೆ #pratidhvani

ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

DK Shivakumar on HD Kumaraswamy: ತಾಕತ್‌ ಇದ್ರೆ ಬಿಜೆಪಿ ಅವರು ಡಿಬೇಟ್‌ಗೆ ಬರಲಿ.! #pratidhvani

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರೂ ಕೂಡ ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ. ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ.

DK Shivakumar ; ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ

ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ ಎಂದು ಕೆಂಡಾಮಂಡಲರಾಗಿದ್ದಾರೆ.

RAVI GANIGA MANDYA ; ಒಕ್ಕಲಿಗರ ಹಲವು ವರ್ಷಗಳ ಬೇಡಿಕೆಗೆ ನಾಂದಿ ಹಾಡಿದ ಶಾಸಕ ಗಣಿಗ ರವಿಕುಮಾರ್.  #pratidhvani

ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ. ಇದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವೂ ಆಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Mohan kondajji | ಸಿದ್ದರಾಮಯ್ಯ ದಾಖಲೆ ಮೋಹನ್ ಕೊಂಡಜ್ಜಿ ಹೇಳಿದ್ದೇನು..? #mohankondajji #bangalore #watch

ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ‍್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಕಿವಿ ಹಿಂಡಿದ್ದಾರೆ.

S. R. Vishwanath : ಕಂದಾಯ ಸಚಿವರ ಕ್ಷೇತ್ರದಲ್ಲೇ ಅಕ್ರಮ ಮನೆಗಳ ನಿರ್ಮಾಣ..! #kogilu #bjp #congress

ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು. ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ ಎಂದು ಪಿಣರಾಯಿ ವಿಜಯನ್‌ಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Tags: Chief Minister Pinarayi Vijayan'.cm siddaramaihcommunist partyconstitution of indiaKannada LanguageKasargodKerala CMMalayalamsave kannada languagesiddaramaiah outrage
Previous Post

ಹುಬ್ಬಳ್ಳಿ ವಿವಸ್ತ್ರ ಕೇಸ್: ಸುಜಾತ ಹಂಡಿ ಅಸಲಿ ಮುಖ ಬಯಲು

Next Post

ಮನರೇಗಾ ಬಗ್ಗೆ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲ್..!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಮನರೇಗಾ ಬಗ್ಗೆ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲ್..!

ಮನರೇಗಾ ಬಗ್ಗೆ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲ್..!

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada