• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Namma Metro: ಬೆಂಗಳೂರು–ತುಮಕೂರು ಮೆಟ್ರೋ : ಇಲ್ಲಿದೆ ಬಿಗ್‌ ಅಪ್ಡೇಟ್‌

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in Top Story, ಕರ್ನಾಟಕ
0
Namma Metro: ಬೆಂಗಳೂರು–ತುಮಕೂರು ಮೆಟ್ರೋ : ಇಲ್ಲಿದೆ ಬಿಗ್‌ ಅಪ್ಡೇಟ್‌
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು–ತುಮಕೂರು ಮೆಟ್ರೋ ರೈಲು ಯೋಜನೆಗೆ ಅಧಿಕೃತ ರೂಪ ದೊರೆತಿದ್ದು, ನಿರ್ಮಾಣ ಕಾರ್ಯಕ್ಕೆ ಅಡಿಪಾಯ ಸಿದ್ಧತೆ ಆರಂಭವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್‌ಜಿಲ್ಲಾ ಕಾರಿಡಾರ್‌ಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಾಗಿದೆ.

ADVERTISEMENT
Bengaluru: ಬಳ್ಳಾರಿ ಗಲಭೆಯಲ್ಲಿ ಖಾಸಗಿ ಗನ್‌ಗಳಿಂದ ಫೈರಿಂಗ್ ಅಗಿದೆಯಂತೆ ? #pratidhvani

ಬೆಂಗಳೂರು–ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲಹಾ ಕಾರ್ಯವನ್ನು ಬಿಎಂಆರ್‌ಸಿಎಲ್ ಆರ್ವೀ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಸಂಸ್ಥೆಗೆ ವಹಿಸಿದೆ. 59.60 ಕಿಲೋಮೀಟರ್ ಉದ್ದದ ಈ ಮೆಟ್ರೋ ಮಾರ್ಗಕ್ಕಾಗಿ ಸುಮಾರು 1.2 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದರ ಟೆಂಡರ್‌ಗಳನ್ನು ನವೆಂಬರ್ 2025ರಲ್ಲಿ ಆಹ್ವಾನಿಸಲಾಗಿತ್ತು. ಪ್ರಸ್ತುತ ಅಧಿಕಾರಿಗಳು ಹಾಗೂ ತಜ್ಞರು ಕ್ಷೇತ್ರಮಟ್ಟದ ಅಧ್ಯಯನ ಕಾರ್ಯ ಆರಂಭಿಸಿದ್ದು, ಸಂಚಾರ ಹಾಗೂ ಪ್ರಯಾಣ ಮಾದರಿಗಳ ಕುರಿತ ದತ್ತಾಂಶ ಸಂಗ್ರಹಣೆ ನಡೆಸಲಾಗುತ್ತಿದೆ.

G Parameshwara : CLP ಸಭೆಯಲ್ಲಿ 5 ವರ್ಷ CM Siddaramaiah CM ಅಂತ ತೀರ್ಮಾನವಾಗಿದೆ #pratidhvani

ಯೋಜನೆಯ ಭಾಗವಾಗಿ ಪ್ರಾಥಮಿಕ ಜೋಡಣೆ ಪರಿಶೀಲನೆ, ವಿವಿಧ ತಾಂತ್ರಿಕ ಮೌಲ್ಯಮಾಪನಗಳು ಮತ್ತು ಆರಂಭಿಕ ಭೂತಾಂತ್ರಿಕ ತನಿಖೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಮಾರ್ಗದ ವಿಸ್ತರಣೆ ಕುರಿತು ಚರ್ಚೆಗಳೂ ನಡೆದಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ನಮ್ಮ ಮೆಟ್ರೋದ 4ನೇ ಹಂತದ ವಿಸ್ತರಣೆಯ ಭಾಗವಾಗಿರುವ ಈ ಯೋಜನೆ ರಾಜ್ಯದ ಸಾರಿಗೆ ಕ್ಷೇತ್ರದಲ್ಲಿನ ಅತ್ಯಂತ ದುಬಾರಿ ಯೋಜನೆಗಳಲ್ಲಿ ಒಂದಾಗಲಿದೆ.

DK Shivakumar ; ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ

ಈ ಕುರಿತು ಮಾಹಿತಿ ನೀಡಿದ ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚವಾಣ್ ಅವರು, ಬೆಂಗಳೂರು–ತುಮಕೂರು ಮೆಟ್ರೋ ಯೋಜನೆಗೆ ಸುಮಾರು 20,649 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈಗ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಇದರಲ್ಲಿ ಸಂಚಾರ ಮತ್ತು ಪ್ರಯಾಣದ ಮಾದರಿಗಳ ಕುರಿತು ದತ್ತಾಂಶ ಸಂಗ್ರಹಣೆ, ಪ್ರಾಥಮಿಕ ಜೋಡಣೆ ಪರಿಶೀಲನೆಗಳು, ವಿವಿಧ ಮೌಲ್ಯಮಾಪನಗಳು ಮತ್ತು ಆರಂಭಿಕ ಭೂತಾಂತ್ರಿಕ ತನಿಖೆಗಳನ್ನು ಒಳಗೊಂಡಿದ ಎಂದು ತಿಳಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಬೆಂಗಳೂರು–ತುಮಕೂರು ನಡುವಿನ ಸಂಚಾರ ವ್ಯವಸ್ಥೆಗೆ ಹೊಸ ಆಯಾಮ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

 

Tags: bengaluruKarnatakametronamma metroThumakuru
Previous Post

ಅಭಿಮಾನಿ ಕೈಯಲ್ಲಿ ಹಚ್ಚೆಯಾದ ಮಂಡ್ಯ ಹೈದ: ಗಿಲ್ಲಿ ಈವರೆಗಿನ ಕಿರುತೆರೆ ಜರ್ನಿ ಹೇಗಿತ್ತು..?

Next Post

ಮಂತ್ರಿ ಪದವಿಗೆ ಶಿಷ್ಟಾಚಾರವಿದೆ, ಹಾಗಂತ ಕೊಂಬು, ಕೋಡು ಇರಲ್ಲ‌ : ಡಿಕೆಶಿಗೆ ಕುಮಾರಸ್ವಾಮಿ ಟಾಂಗ್..

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಮಂತ್ರಿ ಪದವಿಗೆ ಶಿಷ್ಟಾಚಾರವಿದೆ, ಹಾಗಂತ ಕೊಂಬು, ಕೋಡು ಇರಲ್ಲ‌ : ಡಿಕೆಶಿಗೆ ಕುಮಾರಸ್ವಾಮಿ ಟಾಂಗ್..

ಮಂತ್ರಿ ಪದವಿಗೆ ಶಿಷ್ಟಾಚಾರವಿದೆ, ಹಾಗಂತ ಕೊಂಬು, ಕೋಡು ಇರಲ್ಲ‌ : ಡಿಕೆಶಿಗೆ ಕುಮಾರಸ್ವಾಮಿ ಟಾಂಗ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada