ಬಳ್ಳಾರಿ: ನಗರದಲ್ಲಿ ಜನಾರ್ದನ ರೆಡ್ಡಿ ಮನೆಯ ಎದುರು ನಡೆದಿದ್ದ ಗುಂಡಿನ ಕಾಳಗ ಪ್ರಕರಣಗಳನ್ನ ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನ ಸಿಐಡಿಗೆ ವಹಿಸಲಾಗಿದೆ.
ವಾಲ್ಮೀಕಿ ಜಯಂತಿ ಹಿನ್ನೆಲೆ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವಾಗ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬನಿಗೆ ಗುಂಡೇಟು ಬಿದ್ದು ಸಾವನ್ನಪ್ಪಿದ್ದ.
ಈಗಲಾಟೆ, ಶೂಟೌಟ್ ಸಂಬಂಧ ಬ್ರೂಸ್ ಪೇಟೆ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ , ಶ್ರೀ ರಾಮುಲು ಸೇರಿ ಹಲವರ ವಿರುದ್ಧ ನಾಲ್ಕು FIR ದಾಖಲಾಗಿದ್ದವು. ಈ ಪ್ರಕರಣ ರಾಜಕೀಯ ತಿರುವು ಪಡೆದ ಹಿನ್ನಲೆ ತನಿಖೆಯ ಹೊಣೆ CIDಗೆ ವಹಿಸಲಾಗಿದೆ.











