• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಯಡ್ರಾಮಿ ತಾಲ್ಲೂಕಿನಲ್ಲಿ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ: ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು

ಪ್ರತಿಧ್ವನಿ by ಪ್ರತಿಧ್ವನಿ
January 12, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಮುಕ್ತಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿ ಯಲ್ಲಿ ಆಯೋಜಿಸಲಾಗಿದ್ದ *ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಇಲಾಖೆಗಳ ಕಾರ್ಯಕ್ರಮ ಗಳಿಗೆ ಶಂಕುಸ್ಥಾಪನೆ ನೆರೆವೇರಿಸಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಿ ಮಾತನಾಡಿದರು.

ADVERTISEMENT

ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ 87 ಕಾಮಗಾರಿಗಳ ಕಾಮಗಾರಿಗಳನ್ನು 867.49 ಕೋಟಿ ವೆಚ್ಚದ , 38.29 ಕೋಟಿ ವೆಚ್ಚ ಕಾಮಗಾರಿಗಳಿಗೆ ಉದ್ಘಾಟನೆ ಮಾಡಲಾಗಿದೆ. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು
ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ 906 ಕೋಟಿ ಗಳನ್ನು ವೆಚ್ಚ ಮಾಡಲಾಗುತ್ತಿರಲಿಲ್ಲ ಎಂದರು.

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಸರ್ಕಾರ
1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ.ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.

ಕಳೆದ ಬಾರಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಾಣಾಳಿಕೆಯಲ್ಲಿ ಸೇರಿರದ 30 ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. ಎರಡೂವರೆ ವರ್ಷದಲ್ಲಿ ಕೊಟ್ಟ ಎಲ್ಲಾ ಭರವಸೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲಾಗಿದೆ ಎಂದರು. ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10% ಭರವಸೆಗಳನ್ನು ಈಡೇರಿಸಲಾಗಲಿಲ್ಲ ಎಂದು ತಿಳಿಸಿದರು.

49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧ ಮಂಜೂರು
ರಾಜ್ಯದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಿಗೆ ಬಿಜೆಪಿ ಸೌಲಭ್ಯ ಒದಗಿಸಿದ್ದು ಕೇವಲ 14 ತಾಲ್ಲೂಕುಗಳಲ್ಲಿ ಮಾತ್ರ ಮಾಡಿದರು. 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ನಮ್ಮ ಸರ್ಕಾರ ಮಾಡಿದ್ದು, ನಿರ್ಮಾಣ ಮಾಡಲಾಗುವುದು ಎಂದರು.

ಬಿಜೆಪಿ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ 19 ತಾಲ್ಲೂಕುಗಳು ಮಂಜೂರಾಗಿದ್ದರೆ, ಕೇವಲ ಎರಡು ಕಟ್ಟಡ ಮಾತ್ರ ನಿರ್ಮಾಣವಾಗಿದೆ. ನಮ್ಮ ಸರ್ಕಾರ 17 ತಾಲ್ಲೂಕುಗಳು ಮಂಜೂರಾಗಿದ್ದು,97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳನ್ನು ನಮ್ಮ ಸರ್ಕಾರ ಮಂಜೂರು ಮಾಡಿದೆ ಎಂದರು. ಬಿಜೆಪಿ ಕೇವಲ ಕೋಮುವಾದ ಮಾಡುವ ಕೆಲಸ ಮಾಡಿದೆ ಎಂದರು. ಕೋಮುವಾದ, ಹಿಂದುತ್ವ ಎಂದು ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದರು.

ರೈತರ ಪರವಾದ ಸರ್ಕಾರ
ಈ ಬಾರಿ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎಫ್ ನಿಂದ 1218 ಕೋಟಿ ಜೊತೆಗೆ ಸರ್ಕಾರದ ವತಿಯಿಂದ ಒಟ್ಟು 1031ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ.ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 721786 ರೈತರ ಬೆಳೆ ಹಾನಿಗೊಳಗಾಗಿದೆ. 1072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದೆ. ಕಲಬುರ್ಗಿ ಜಿಲ್ಲೆಯಲ್ಲಿ 323318 ರೈತರ ಬೆಳೆ ಹಾನಿಯಾಗಿದ್ದು 498 ಕೋಟಿ ಪರಿಹಾರ ನೀಡಲಾಗಿದೆ ಎಂದರು. ರೈತರ ಖಾತೆಗಳಿಗೆ ಅನುದಾನವನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆ ಸರ್ಕಾರ ಸದಾ ಮುಂದಾಗಿದೆ. ನೆಟ್ಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ 233 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ಕಬ್ಬಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ 50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿ ಗಳನ್ನು ಸರ್ಕಾರದಿಂದ ಕಬ್ಬಿನ ಬೆಳೆಗಾರರಿಗೆ ನೀಡಲಾಗಿದೆ ಎಂದರು.

371 ಜೆ ಜಾರಿಯಾಗಿದ್ದು ಕಾಂಗ್ರೆಸ್ ಸರ್ಕಾರದಿಂದ
ಬಿಜೆಪಿಯ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿದ್ದ ಅಡ್ವಾಣಿ ಯವರು 371 ಜೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು ಎಂದರು. ಇದರಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾಯಿತು. 13000 ಕೋಟಿ ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3000 ಕೋಟಿ ಒದಗಿಸಲಾಗಿದೆ ಎಂದರು.

300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ
ಶಾಸಕ ಅಜಯ್ ಸಿಂಗ್ ಅವರು ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 900 ರಾಜ್ಯಕ್ಕೆ ಕೆಪಿಎಸ್ ಮಂಜೂರಾಗಿದೆ.

371 ಜೆ ಜಾರಿಯಲ್ಲಿ ಬಿಜೆಪಿಯ ಪಾತ್ರವಿಲ್ಲ
ಬಿಜೆಪಿ ಕೇವಲ ಸುಳ್ಳು ಆರೋಪಗಳನ್ನು ಮಾತ್ರ ಮಾಡುತ್ತದೆ. 371 ಜೆ ಜಾರಿಯಾಗಿದ್ದರೆ ಅದಕ್ಕೆ ಕಾರಣ ಮಲ್ಲಿಕಾರ್ಜುನ ಖರ್ಗೆ, ಧರ್ಮ ಸಿಂಗ್ ಅವರು ಕಾರಣ. ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದರು. ಬಿಜೆಪಿ ಬೊಗಳೆದಾಸರು, ಸುಳ್ಳು ಹೇಳುವುದು, ಅಪಪ್ರಚಾರ ಬಿಟ್ಟರೆ ಬೇರೇನೂ ಮಾಡುವುದಿಲ್ಲ ಎಂದರು. ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದರು.

ಎ ಐ ಸಿ ಸಿ ಅಧ್ಯಕ್ಷರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ ಖರ್ಗೆ, ಕೃಷ್ಣಭೈರೇಗೌಡ, ಶರಣಬಸಪ್ಪ ದರ್ಶನಾಪುರ, ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ರಹೀಂ ಖಾನ್, ಶಾಸಕರು ಉಪಸ್ಥಿತರಿದ್ದರು.

Tags: AICCBJPCM SiddaramaiahcongressDharam SinghDK ShivakumarjevargiKalburgiKrishna ByregowdaMadhu BangarappaMallikarjun KhargeNarendra ModiPriyanka KhargeRahim KhanSharana Prakash PatilSharanabasappa Darshanapura
Previous Post

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

Next Post

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

January 12, 2026
Next Post
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!