ದೆಹಲಿ: ಈವರೆಗೂ ಕೊಂಚ ತಣ್ಣಗಾಗಿದ್ದ ಕರ್ನಾಟಕದ ನಾಯಕತ್ವ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮೈಸೂರು ಭೇಟಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್(D.K. Shivakumar) ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ: ಡಿಕೆಶಿಗೆ ಶುಭ ತರುತ್ತಾ ಸಂಕ್ರಾಂತಿ..? : ಯಾವ ಸಂದೇಶ ಹೊತ್ತು ದಿಲ್ಲಿಯಿಂದ ರಿಟರ್ನ್ ಆಗ್ತಾರೆ DCM..?
ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಮಾತನಾಡಿದ ಅವರು, ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು. ಇನ್ನು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.












