ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಇಂದು ತುಮಕೂರಿನಲ್ಲಿ(Tumakuru) ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿದರು. ಕ್ರೀಡಾಕೂಟದ ವೇದಿಕೆಯಲ್ಲಿ ಮಾತನಾಡಿದ ಅವರು, ಕ್ರೀಡೆಗಳು ಯುವಜನರಲ್ಲಿ ಶಿಸ್ತು, ಆರೋಗ್ಯ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಪ್ರಮುಖ ಸಾಧನವಾಗಿದ್ದು, ಸರ್ಕಾರವು ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಬದ್ಧವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಬಳಿಕ ಸಿಎಂ ಸಿದ್ದರಾಮಯ್ಯ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ ಕೆ.ಎನ್ ರಾಜಣ್ಣ(K̤N Rajanna) ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ರಾಜಣ್ಣ ಅವರ ನಿವಾಸದಲ್ಲಿ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಆತಿಥ್ಯ ವಹಿಸಲಾಗಿದ್ದು, ಸಿಎಂಗೆ ಇಷ್ಟವಾದ ನಾಟಿ ಕೋಳಿ ಬಾಡೂಟವನ್ನು ಸಿದ್ಧಪಡಿಸಲಾಗಿತ್ತು.ರಾಜಣ್ಣ ಅವರ ಮನೆಯಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು, ನಾಟಿ ಕೋಳಿ ಬಾಡೂಟ, ಕಾಲ್ ಸೂಪ್ ಸೇರಿದಂತೆ ಹಲವು ಸಾಂಪ್ರದಾಯಿಕ ಖಾದ್ಯಗಳನ್ನು ಸಿದ್ಧಪಡಿಸಲಾಗಿತ್ತು.

ಊಟದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ʼಕೆ.ಎನ್ ರಾಜಣ್ಣ ಅವರ ಮನೆಯಲ್ಲಿ ಸಿದ್ಧಪಡಿಸಿದ್ದ ಊಟ ಬಹಳ ಚೆನ್ನಾಗಿತ್ತು. ಕಾಲ್ ಸೂಪ್, ನಾಟಿ ಕೋಳಿ ಎಲ್ಲವೂ ರುಚಿಯಾಗಿತ್ತು. ನನಗೆ ಸ್ವಲ್ಪ ಜ್ವರ ಇದ್ದು ಆರೋಗ್ಯ ಸರಿಯಾಗಿರಲಿಲ್ಲ, ಬಾಯಿಗೂ ರುಚಿ ಕಡಿಮೆಯಾಗಿತ್ತು. ಆದರೂ ನಾನ್ ವೆಜ್ ಊಟ ಬಹಳ ಚೆನ್ನಾಗಿದ್ದರಿಂದ ಸಂತೋಷವಾಗಿ ಊಟ ಮಾಡಿದ್ದೇನೆ ಎಂದರು. ಕೆ.ಎನ್ ರಾಜಣ್ಣ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಓದಿ: ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್












