ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 (BBK 12) ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್(Kiccha Sudeep) ಅವರು ಇಂದು ಆಗಮಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಈ ಬಾರಿ ಫಿನಾಲೆ ಒಂದೇ ದಿನಕ್ಕೆ ಸೀಮಿತವಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಯಲಿದೆ.

ಸುದೀಪ್ ಈ ಹಿಂದೆ ವಿವಿಧ ಕಾರಣಗಳಿಂದ ಬಿಗ್ ಬಾಸ್ ಕನ್ನಡದ ಕೆಲವು ಎಪಿಸೋಡ್‌ಗಳಿಗೆ ಗೈರಾದ ಉದಾಹರಣೆಗಳಿವೆ. ಆದರೆ, ಇದೇ ಮೊದಲ ಬಾರಿಗೆ ಅವರು ಬಿಗ್ ಬಾಸ್ ಫಿನಾಲೆಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇದುವರೆಗೆ ಪ್ರತಿ ಸೀಸನ್‌ನಲ್ಲಿ ಫಿನಾಲೆ ಎರಡು ದಿನಗಳ ಕಾಲ ನಡೆಯುತ್ತಿದ್ದರೆ, ಈ ಬಾರಿ ಒಂದೇ ದಿನಕ್ಕೆ ಸೀಮಿತವಾಗಿದೆ.

ಕಿಚ್ಚ ಸುದೀಪ್ ಸದ್ಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನಲ್ಲಿ ಬ್ಯುಸಿಯಾಗಿದ್ದಾರೆ. ಜನವರಿ 16ರಂದು ಪಂಜಾಬ್ ದೆ ಶೇರ್ ವಿರುದ್ಧ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ ತಂಡ ಜಯ ಸಾಧಿಸಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಈ ಪಂದ್ಯ ಮುಗಿದ ಬಳಿಕ ರಾತ್ರೋ ರಾತ್ರಿ ಬೆಂಗಳೂರಿಗೆ ಬಂದು ಬೆಳಿಗ್ಗೆ ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡುವುದು ಸಾಧ್ಯವಾಗದ ಕಾರಣ, ಒಂದು ದಿನ ಬಿಡುವು ಪಡೆದು ಭಾನುವಾರ ಫಿನಾಲೆ ನಡೆಸಿಕೊಡಲು ಸುದೀಪ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: BBK 12: ಗಿಲ್ಲಿನೇ ಬಿಗ್ ಬಾಸ್ ಗೆಲ್ಲೋದು: ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ












