ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿವೆ. ಅಬಕಾರಿ ಇಲಾಖೆಯಲ್ಲಿನ ಲಂಚದ ಕರ್ಮಕಾಂಡದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿವೆ.
“ಮಂಥ್ಲಿ ಮನಿ” ಮಂತ್ರಿ ಆರ್.ಬಿ.ತಿಮ್ಮಾಪೂರ ಅವರೇ ಈ ಅಕ್ರಮದಲ್ಲಿ ನಿಮ್ಮ ಪಾಲು ಎಷ್ಟು ? ಲಂಚ ಬಾಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಬಾರ್ ಲೈಸೆನ್ಸ್ ನೀಡಲು ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಸುಲಿಗೆ ಮಾಡಲಾಗುತ್ತಿದೆ ಎಂದು ರಾಜ್ಯ ಜೆಡಿಎಸ್ ಆರೋಪಿಸಿದೆ.

ಇದನ್ನೂ ಓದಿ : ಲೋಕಸಭಾ ಎಲೆಕ್ಷನ್ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ
ಬೆಂಗಳೂರು ನಗರ ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಿಎಲ್ -7 ಲೈಸೆನ್ಸ್ ಕೊಡಲು 75 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಪಡೆಯುತ್ತಿದ್ದಾಗ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ ಲಂಚ ಹಗರಣವನ್ನು ಖಂಡಿಸಿದೆ.

ಇನ್ನೂ ಅಬಕಾರಿ ಅಧಿಕಾರಿಯೊಬ್ಬರು 25 ಲಕ್ಷ ಲಂಚ ಸ್ವೀಕಾರದ ವೇಳೆಯಲ್ಲೇ ಸಿಕ್ಕಿಬಿದ್ದಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಸಿಕ್ಕ ಜ್ವಲಂತ ಸಾಕ್ಷಿಯಾಗಿದೆ. ಅಧಿಕಾರಿಯೊಬ್ಬರು ಇಷ್ಟೊಂದು ಪ್ರಮಾಣದ ಲಂಚ ಪಡೆಯಲು ಸಾಧ್ಯವೇ ಇಲ್ಲ, ಇದರಲ್ಲಿ ಅಬಕಾರಿ ಸಚಿವರ ಪಾಲೂ ಇದೆ. ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿವೆ.













