• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಯಲ್ಲೂ ಮಹಿಳೆಯರು ಸಕ್ರಿಯವಾಗಬೇಕು..!!

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿದ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಯಲ್ಲೂ ಮಹಿಳೆಯರು ಸಕ್ರಿಯವಾಗಬೇಕು..!!
Share on WhatsAppShare on FacebookShare on Telegram

ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ADVERTISEMENT

ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೃಷಿಯಲ್ಲಿ ಮಹಿಳೆ: ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ನಮ್ಮ ದೇಶದಲ್ಲಿ ಮಹಿಳೆಯರು ಕೃಷಿಯ ಎಲ್ಲಾ ಹಂತಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕೇವಲ ಕೃಷಿ ಕ್ಷೇತ್ರ ಅಷ್ಟೇ ಅಲ್ಲ, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ ಎಂದರು.

ಸರ್ಕಾರಕ್ಕೆ ಮಠ ಮಾನ್ಯಗಳ ಕಾರ್ಯವೇ ಸ್ಫೂರ್ತಿ
ಅಕ್ಷರ ದಾಸೋಹ ಹಾಗೂ ಅನ್ನ ದಾಸೋಹದ ಮೂಲಕ ಬಡಜನರಿಗೆ ನೆರವಾಗುತ್ತಿರುವ ಮಠ ಮಾನ್ಯಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ. ಯಾವುದೇ ಸರ್ಕಾರಗಳು ಬಂದರೂ ಮಠಗಳ ಕಾರ್ಯವನ್ನು ಅನುಕರಣೆ ಮಾಡುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅನ್ನ ದಾಸೋಹ ಮತ್ತು ಜ್ಞಾನದಾಸೋಹಗಳನ್ನು ಒಟ್ಟೊಟ್ಟಿಗೆ ನೀಡುವ ಮೂಲಕ ಬಡ ಮಕ್ಕಳಿಗೂ ಕಲಿಯುವ ಅವಕಾಶವನ್ನು ಕಲ್ಪಿಸಿದ್ದು ನಮ್ಮ ಮಠಗಳು. ಸರ್ಕಾರದಿಂದ ಮಾಡಲಾಗದಂತಹ ಮಹತ್ಕಾರ್ಯವನ್ನು ಮಠಗಳು, ಧಾರ್ಮಿಕ ಸಂಸ್ಥೆಗಳು ಮಾಡುತ್ತ ಬಂದಿವೆ. ಮಠ ಮಾನ್ಯಗಳು, ಧಾರ್ಮಿಕ ಸಂಸ್ಥೆಗಳು ಸರಕಾರಕ್ಕೆ ಸಮಾನಾಂತರವಾಗಿ ಶೈಕ್ಷಣಿಕ ಸೇವೆಯನ್ನು ನೀಡುತ್ತ ಬಂದಿವೆ. ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸುವ ಕಾರ್ಯ ಮಠಗಳಿಂದ ಆಗುತ್ತಿದೆ ಎಂದು ಹೇಳಿದರು.

ಜೆಎಸ್ ಎಸ್ ಮಠ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಕೇವಲ ಮೈಸೂರು ಭಾಗದ ಮಕ್ಕಳಿಗೆ ಸೀಮಿತವಾಗದೆ ವಿವಿಧ ರಾಜ್ಯಗಳ ಮಕ್ಕಳು ಇಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸಾಮಾಜಿಕ ಬದ್ಧತೆ ಹೊಂದಿರುವ ಜೆಎಸ್ ಎಸ್ ಸಂಸ್ಥೆ ಅಕ್ಷರ, ಅನ್ನದ ಜೊತೆಗೆ ಸಂಸ್ಕೃತಿಯನ್ನು ಕಲಿಸುತ್ತಿದೆ ಎಂದರು‌.

ಪ್ರಶಸ್ತಿ ಪ್ರದಾನ ಮಾಡಿದ ಸಚಿವರು

ಈ ವೇಳೆ ಸಚಿವರು ಪ್ರಗತಿಪರ ರೈತರಿಗೆ ಹಾಗೂ ಪ್ರಗತಿಪರ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಕ್ರಾಪ್ ಇಂಪ್ರುಮೆಂಟ್, ಕ್ರಾಪ್ ಪ್ರೊಡಕ್ಷನ್, ಕ್ರಾಪ್ ಪ್ರೊಟೆಕ್ಷನ್ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ಈ ವೇಳೆ ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದರೆ, ವಾಟಾಳು ಸೂರ್ಯಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ಕನಕಪುರದ ಶ್ರೀ ದೇಗುಲ ಮಠದ ಡಾ.ಶ್ರೀ ಚನ್ನಬಸವ ಸ್ವಾಮಿಗಳು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್.ಸಿ.‌ಮಹದೇವಪ್ಪ, ಡಾ.ಶರಣ್ ಪ್ರಕಾಶ್ ಪಾಟೀಲ್, ಡಾ.ಎಂಸಿ ಸುಧಾಕರ್, ಶಾಸಕರಾದ ಎ.ಆರ್.ಕೃಷ್ಣ ಮೂರ್ತಿ ಮಂಥರ್ ಗೌಡ, ಡಿ.ರವಿ ಶಂಕರ್, ಗಣೇಶ್ ಪ್ರಸಾದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್, ಮಾಜಿ ಶಾಸಕಿ ಗೀತಾ ಮಹದೇವ ಪ್ರಸಾದ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: A R Krishna MurthyCM SiddaramaiahDr H.C.MahadevappaDr Sharana Prakash PatilGeetha mahadev prasadJSS CompanyLakshmi HebblkarMC SudhakarMinister Lakshmi HebbalkarPushpa Amar NathRavi ShankarShivarathri ShivayogiSutturu Math
Previous Post

BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

Next Post

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ..? ಖಾಕಿಯಲ್ಲೇ ಮುತ್ತು ವೈರಲ್..!

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ..? ಖಾಕಿಯಲ್ಲೇ ಮುತ್ತು ವೈರಲ್..!

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ..? ಖಾಕಿಯಲ್ಲೇ ಮುತ್ತು ವೈರಲ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada