ಬೆಂಗಳೂರು : ಅಭಿಮಾನಿಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ ಭಾವಚಿತ್ರ ನೀಡಿದ್ದನ್ನು, ಸ್ವೀಕರಿಸದೆ ಸಿಎಂ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ನಡೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಅಲ್ಲದೆ ರಾಯರ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿದೆ.
ನಗರದಲ್ಲಿ ಸಿದ್ದರಾಮಯ್ಯ ಕಾರು ಹತ್ತುತ್ತಿದ್ದಂತೆಯೇ ಅಭಿಮಾನಿಯೊಬ್ಬರು ಕಾರಿನತ್ತ ಓಡಿಬಂದು ರಾಯರ ಫೋಟೋವನ್ನು ನೀಡಿದ್ದಾರೆ. ಆಗ ಅದನ್ನು ಮುಟ್ಟಿ ವಾಪಸ್ ತಳ್ಳಿದ್ದು, ಅದರ ಬದಲಾಗಿ ಪಕ್ಕದಲ್ಲಿದ್ದ ಇನ್ನೊಬ್ಬರು ಚಾಣಕ್ಯನ ಪುಸ್ತಕ ನೀಡಿದ್ದಾರೆ, ಆಗ ಸಿಎಂ ಆ ಪುಸ್ತಕ ಸ್ವೀಕರಿಸಿದ್ದಾರೆ.
ಇದನ್ನೂ ಓದಿ : ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ಅಮಾನತು
ಇನ್ನೂ ಇದೇ ವಿಚಾರಕ್ಕೆ ವಿಪಕ್ಷ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಸಿದ್ದರಾಮಯ್ಯಗೆ ಹಿಂದೂ ದೇವರನ್ನು ಕಂಡರೆ ಆಗಿ ಬರಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೇ ಆಗಿ ಬರುವುದಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ! ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕಿಸಿದ್ದಾರೆ.

ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯೆಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು ರಾಯರಿದ್ದಾರೆ ಎದ್ದುಬರುತ್ತಾರ ಕಾಯಬೇಕು..!! ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.







