ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ(Renukaswamy) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ(Pavithra Gowda) ಸಿಕ್ಕಿದ್ದ ಮನೆಯೂಟದ ಸೌಲಭ್ಯಕ್ಕೆ ಕರ್ನಾಟಕ ಹೈಕೋರ್ಟ್(Karnataka High Court )ತಡೆಯಾಜ್ಞೆ ನೀಡಿದೆ. ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪವಿತ್ರಾ ಗೌಡ ಜೊತೆಗೆ ಆರೋಪಿಗಳಾದ ಲಕ್ಷ್ಮಣ್ ಮತ್ತು ನಾಗರಾಜ್ ಅವರಿಗೆ ಜೈಲಿನಲ್ಲಿ ಮನೆಯೂಟ ನೀಡುವಂತೆ 57ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಗಂಭೀರವಾಗಿ ಪ್ರಶ್ನಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿ ಮೂವರು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ: Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್ ಕೊಟ್ಟಿದ್ಯಾರು..? ಫ್ಯಾನ್ಸ್..? ಸೆಲೆಬ್ರಿಟಿಸ್..?
ಈ ಪ್ರಕರಣದ ವಿಚಾರಣೆ ವೇಳೆ, ಜೈಲಿನಲ್ಲಿರುವ ಕೈದಿಗಳಿಗೆ ವೈಯಕ್ತಿಕವಾಗಿ ವಿಶೇಷ ಸೌಲಭ್ಯ ನೀಡುವುದು ಕಾನೂನುಬಾಹಿರ ಎಂಬುದಾಗಿ ನ್ಯಾಯಪೀಠ ಸ್ಪಷ್ಟಪಡಿಸಿದೆ. ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ ಎಂಬುದನ್ನು ಹೈಕೋರ್ಟ್ ಪುನರುಚ್ಚರಿಸಿದೆ.

ಅಲ್ಲದೇ ಮನೆಯೂಟ ಅಗತ್ಯವಿಲ್ಲ ಎಂಬುದನ್ನು ಒತ್ತಿ ಹೇಳಿದ ಹೈಕೋರ್ಟ್, ಜೈಲಿನಲ್ಲಿ ನೀಡಲಾಗುವ ಆಹಾರವು ಕಳಪೆಯಲ್ಲ ಎಂದು ತಿಳಿಸಿದೆ.

ಇನ್ನು ಆರೋಪಿಗೆ ವಿಭಿನ್ನ ರೀತಿಯ ಸವಲತ್ತು ನೀಡುವುದು ಸುಪ್ರೀಂ ಕೋರ್ಟ್ ಆದೇಶಗಳ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಸಿದೆ. ಭವಿಷ್ಯದಲ್ಲಿ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಮೀರಿ ಆರೋಪಿಗಳಿಗೆ ವಿಶೇಷ ಸೌಲಭ್ಯ ನೀಡಿದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಪೀಠ ಸ್ಪಷ್ಟ ಸೂಚನೆ ನೀಡಿದೆ ಎನ್ನಲಾಗಿದೆ.












