• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ರಾಜಕೀಯ
0
ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?
Share on WhatsAppShare on FacebookShare on Telegram

ಬೆಂಗಳೂರು: ನಾಳೆ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನವನ್ನು(Karnataka joint session) ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್( ಗೆಹ್ಲೋಟ್(Thawar Chand Gehlot) ಅವರು ನಿರಾಕರಿಸಿರುವುದು ರಾಜ್ಯ ಸರ್ಕಾರಕ್ಕೆ(State Government) ತೀವ್ರ ಅಸಮಾಧಾನ ಹಾಗೂ ಹೊಸ ರಾಜಕೀಯ ತಲೆನೋವಾಗಿದೆ.

ADVERTISEMENT
JDS Rally At Hassan | ಹಾಸನದಲ್ಲಿ ಜೆಡಿಎಸ್ ಸಮಾವೇಶ, ಸ್ಥಳ ಪರಿಶೀಲಿಸಿದ ಕುಮಾರಸ್ವಾಮಿ, ರೇವಣ್ಣ #pratidhvani

ಕೇಂದ್ರ ಸರ್ಕಾರವು ಮನರೇಗಾ ಕಾಯಿದೆಯಲ್ಲಿ ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ಜಾರಿಗೆ ತಂದಿರುವುದನ್ನು ವಿರೋಧಿಸಿ, ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳುವ ಉದ್ದೇಶದಿಂದ ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಿದೆ. ಆದರೆ, ಈ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ಸಲ್ಲಿಸಿದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪೌರಾಯುಕ್ತೆಗೆ ಜೀವ ಬೆದರಿಕೆ: ಕಾಂಗ್ರೆಸ್‌ನಿಂದ ರಾಜೀವ್ ಗೌಡ ಅಮಾನತಿಗೆ ಶಿಫಾರಸು

ಮನರೇಗಾ ಕಾಯಿದೆಯಲ್ಲಿನ ಕೇಂದ್ರ ಸರ್ಕಾರದ ಬದಲಾವಣೆಗಳಿಗೆ ವಿರೋಧ ವ್ಯಕ್ತಪಡಿಸಲು ವಿಧಾನಮಂಡಲದ ಜಂಟಿ ಅಧಿವೇಶನ ಕರೆದಿರುವುದೇ ರಾಜ್ಯಪಾಲರ ನಿರಾಕರಣೆಗೆ ಕಾರಣವೆಂದು ತಿಳಿದುಬಂದಿದೆ. ಇದರಿಂದಾಗಿ ತಮಿಳುನಾಡು ಹಾಗೂ ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು ವರ್ಸಸ್ ರಾಜ್ಯ ಸರ್ಕಾರ ಎಂಬ ಸ್ಥಿತಿ ಉಂಟಾಗಿದೆ. ಇದೇ ರೀತಿಯ ಸಂಘರ್ಷಗಳು ಈಗಾಗಲೇ ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿಯೂ ಮುಂದುವರಿದಿದೆ.

ಇನ್ನು ನಾಳೆಯ ವಿಧಾನಮಂಡಲದ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರನ್ನು ಮನವೊಲಿಸುವ ಉದ್ದೇಶದಿಂದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಉನ್ನತಮಟ್ಟದ ನಿಯೋಗ ಇಂದು ರಾಜಭವನಕ್ಕೆ ಭೇಟಿ ನೀಡಿದೆ. ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಲಿದೆ.

ಇನ್ನು ತಮಿಳುನಾಡಿನ ರಾಜ್ಯಪಾಲರು ಆ‌ರ್.ಎನ್.ರವಿ ಕೂಡ ನಿನ್ನೆ ರಾಜ್ಯ ಸರ್ಕಾರ ಸಿದ್ಧಪಡಿಸಿದ ನೀತಿ ಭಾಷಣವನ್ನು ಓದಲು ನಿರಾಕರಿಸಿ ವಿಧಾನಸಭೆಯಿಂದ ಹೊರನಡೆದಿದ್ದಾರೆ. ಷ್ಟ್ರಗೀತೆಗೆ ಸರಿಯಾದ ಗೌರವ ಸಿಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಜ್ಯಪಾಲರು, ಸರಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಸತತ ಮೂರನೇ ವರ್ಷವೂ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ನಿರಾಕರಿಸಿರುವ ನಡೆಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ರಾಜ್ಯಪಾಲರು ವರ್ಸಸ್ ರಾಜ್ಯ ಸರ್ಕಾರ ಎನ್ನುವ ಸ್ಥಿತಿ ಉಂಟಾಗಿದ್ದು, ಬಿಜೆಪಿ ಆಡಳಿತ ಇಲ್ಲದ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಆಡಳಿತದ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.

Tags: BJPCM SiddaramaiahcongressKarnataka joint sessionKarnataka PoliticsKeralaPoliticsSession 2026Tamil Naduthawar chand gehlotVB-G RAM G Bill
Previous Post

ಪೌರಾಯುಕ್ತೆಗೆ ಜೀವ ಬೆದರಿಕೆ: ಕಾಂಗ್ರೆಸ್‌ನಿಂದ ರಾಜೀವ್ ಗೌಡ ಅಮಾನತಿಗೆ ಶಿಫಾರಸು

Next Post

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada