• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಪ್ರತಿಧ್ವನಿ by ಪ್ರತಿಧ್ವನಿ
January 24, 2026
in ಇದೀಗ, ಕರ್ನಾಟಕ, ದೇಶ
0
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..
Share on WhatsAppShare on FacebookShare on Telegram

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಇಡೀ ವಿಶ್ವದಲ್ಲೇ ಮಾದರಿ: ಸಂತೋಷ್‌ ಲಾಡ್‌..

ADVERTISEMENT

ಹುಬ್ಬಳ್ಳಿ : ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಹೇಳಿದರು.

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ಇದನ್ನೂ ಓದಿ : ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ದೇಶದ ಸಾಕಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಆದರೆ ಅವರು ಯಾರೂ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇಂತಹ ಮಹತ್ವದ ಅಭೂತಪೂರ್ವ ಗ್ಯಾರಂಟಿಗಳನ್ನು ಜಾರಿ ಮಾಡಿ ಮಾದರಿಯಾಗಿದೆ ಎಂದು ಬಣ್ಣಿಸಿದರು.

Ashita Chandrappa Interview : ನನಗೆ ಧಾರವಾಹಿಯಲ್ಲಿ ಅವಕಾಶ ಸಿಗದೇ ಇರೋದಕ್ಕೆ ಇವರೇ ಕಾರಣ..! #pratidhvani

ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇಂತಹ ವಿಶಿಷ್ಟ ಕಾರ್ಯಕ್ರಮ ಇಡೀ ವಿಶ್ವದಲ್ಲೇ ಇಲ್ಲ. ಗ್ಯಾರಂಟಿ ಮೂಲಕ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ. ಗ್ಯಾರಂಟಿಗಳಿಂದ ಬಡವರಿಗೆ ಅನುಕೂಲವಾಗಿದೆ. ಇಂದು ಜೀವನ ನಡೆಸುವುದು ದುಬಾರಿ ಆಗಿದೆ. ಇಂತಹ ಸಂದರ್ಭದಲ್ಲಿ ಗ್ಯಾರಂಟಿಗಳು ಬಡವರಿಗೆ ಸಹಾಯ ಮಾಡುತ್ತಿವೆ ಎಂದರು.

ನೋಟು ರದ್ದು ಮಾಡಿ ಬಡವರಿಗೆ ತೊಂದರೆ..

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರಾತ್ರೋರಾತ್ರಿ ನೋಟು ರದ್ದು ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆಯಿತು. ಬಡವರ ಕೈಲಿದ್ದ ಹಣ ಎಲ್ಲ ಬ್ಯಾಂಕಿಗೆ ಹೋಯಿತು. ಮೂರು ಲಕ್ಷಕ್ಕೂ ಹೆಚ್ಚು ಕೋಟಿ ಕಪ್ಪು ಹಣ ಪತ್ತೆ ಹಚ್ಚಲಿಲ್ಲ. ಮೋದಿ ಅವರು ತಾವು ಅಧಿಕಾರಕ್ಕೆ ಬಂದರೆ ಹದಿನೈದು ದಿನದಲ್ಲಿ ಪ್ರತಿ ಭಾರತೀಯರ ಅಕೌಂಟ್‌ಗೆ ೧೫ ಲಕ್ಷ ಹಾಕ್ತಿನಿ ಎಂದು ಹೇಳಿದ್ದರು. ಅದು ಹಾಕಲಿಲ್ಲ. ಸ್ವಿಸ್‌ ಬ್ಯಾಂಕಿನಲ್ಲಿರುವ ಕಪ್ಪು ಹಣ ಸ್ವದೇಶಕ್ಕೆ ತರ್ತಿವಿ ಅಂತ ಹೇಳಿದ್ದರು. ಅದು ತರಲಿಲ್ಲ. ನೂರು ದಿನದಲ್ಲಿ ರೈತರ ಸಾರಲ ಮನ್ನಾ ಮಾಡ್ತಿನಿ ಅಂದ್ರು ಅದೂ ಆಗಲಿಲ್ಲ. ರೈತರ ಆದಾಯ ದ್ವಿಗುಣ ಮಾಡ್ತಿನಿ ಅಂದರು. ಅದರ ಬಗ್ಗೆ ಈಗ ಮಾತನಾಡುತ್ತಾ ಇಲ್ಲ. ಬಡವರ ಹಣ ದ್ವಿಗುಣ ಆಗುವ ಬದಲು ಅಂಬಾನಿ, ಆದಾನಿ ಆದಾಯ ಹೆಚ್ಚಳವಾಗಿದೆ ಎಂದು ವ್ಯಂಗವಾಡಿದರು.

ಡಾಲರ್‌ ಬೆಲೆ, ಚಿನ್ನದ ಬೆಲೆ ಗಗನಕ್ಕೇರಿದೆ..

ನರೇಂದ್ರ ಮೋದಿ ಅವರ ಸರ್ಕಾರಿಂದ ಎರಡು ಲ್ಷಕಕ್ಕೂ ಹೆಚ್ಚು ಹಣ ರಾಜ್ಯಕ್ಕೆ ಬರಬೇಕಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗ 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿತು. ರಾಜ್ಯದಲ್ಲಿ ಎಂಟೂವರೆ ಸಾವಿರ ಕೋಟಿ ಸಾಲ ಮನ್ನಾ ಮಾಡಿದೆವು. ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಡಾಲರ್‌ ಬೆಲೆ ಹೆಚ್ಚಿದೆ. ಬಂಗಾರದ ಬೆಲೆ ಗಗನಕ್ಕೆ ಮುಟ್ಟಿದೆ. ಇಂಧನ ಬೆಲೆ ಸಹ ಆಕಾಶಕ್ಕೇರಿದೆ ಎಂದರು.

Kannada Activist Gurudev Narayankumar Pod cast : ವಾಟಾಳ್ ನಾಗರಾಜ್ ಆ ಗುಟ್ಟನ್ನು ಇಂದಿಗೂ ಬಿಟ್ಟುಕೊಟ್ಟಿಲ್ಲ..

ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಅನ್ನೋ ತತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಕೆಲಸ ಮಾಡುತ್ತಾ ಇದೆ. ಬಡವರ, ಜನರ ಹಣವನ್ನು ಜನರಿಗೆ ಗ್ಯಾರಂಟಿ ಮೂಲಕ ನೀಡುತ್ತಿದೆ. ಬಡವರ ಕೆಲಸ ಮಾಡುತ್ತಿದೆ. ಕೊಳೆಗೇರಿ ನಿರ್ಮೂಲನ ಮಂಡಳಿ ಉತ್ತಮವಾಗಿ ಕೆಲಸ ಮಾಡಿದೆ. ಇದರ ರೂವಾರಿಗಳಾಗಿ ಜಮೀರ್‌ ಅಹಮದ್‌ ಹಾಗೂ ಪ್ರಸಾದ ಅಬ್ಬಯ್ಯ ಅವರು ಮುಂಚೂಣಿಯಲ್ಲಿದ್ದಾರೆ. ಅವರಿಗೆ ಜಿಲ್ಲೆಯ ಜನರ ಪರವಾಗಿ ಧನ್ಯವಾದಗಳು ಎಂದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಶಾಸಕರು, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ‌ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Tags: Amit ShahCM Siddaraamaiahcongress karnatakacongress karnataka newscurrencydemonitisationGautam Adaniguarantee schemehubballi newsindian dollarkannada newskarnataka newsKarnataka PoliticsMallikarjun KhargeMukhesh AmbaniNarendra ModiPratidhvaniSantosh Lad
Previous Post

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

Next Post

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada