• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 28, 2026
in Top Story, ಕರ್ನಾಟಕ, ರಾಜಕೀಯ
0
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K. Shivakumar )ʼ ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು.  ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT
DCM DK Shivakumar : ತಿಮ್ಮಾಪುರ ರಾಜಿನಾಮೆಗೆ ಒತ್ತಾಯ; ವಿಪಕ್ಷಗಳ ಉತ್ಪ್ರೇಕ್ಷೆ #pratidhvani #dkshivakumar

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರ ಅವರ ಸಂಬಂಧಿಕರನ್ನು ಭೇಟಿ ಮಾಡಿದ್ದೆ ಎಂದರು.

ಇತ್ತೀಚೆಗೆ ಹೆಚ್ಚು ವಿಮಾನ ಅಪಘಾತಗಳು ಹಾಗೂ ತಾಂತ್ರಿಕ ದೋಷ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಇದರ ಬಗ್ಗೆ ವಿಸ್ತೃತ ವರದಿ ಬಂದ ನಂತರ ಮಾತನಾಡುತ್ತೇನೆ. ತಾಂತ್ರಿಕ ದೋಷದ ಬಗ್ಗೆ ನನಗೆ ಏನು ಗೊತ್ತು. ಮುಂಬೈನ ಗೆಳೆಯರು ಸೇರಿದಂತೆ ಹಲವರು ವಿಷಯ ತಿಳಿಸಿದ್ದಾರೆ ಎಂದರು‌.

ಅಮೆರಿಕದಲ್ಲಿ 'ಹಿಮ' ಪ್ರಳಯ! 16 ಕೋಟಿ ಜನ ತತ್ತರ, ಊಟಕ್ಕೂ ಪರದಾಟ! | US Winter Storm Explained‌ #pratidhvani

ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ನನ್ನ ಪ್ರಕಾರ ಆರ್.ಬಿ. ತಿಮ್ಮಾಪುರ ಅವರಿಗೂ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎನಿಸುತ್ತದೆ. ವಿಪಕ್ಷಗಳು ಬೇಕಂತಲೇ ಉತ್ಪ್ರೇಕ್ಷೆ ಮಾಡುತ್ತಿವೆ. ಇದರ ಬಗ್ಗೆ ಮುಖ್ಯಮಂತ್ರಿಯವರ ಬಳಿ ವಿವರವಾಗಿ ಮಾತನಾಡಿ ಆನಂತರ ತಿಳಿಸುತ್ತೇನೆ. ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದರು.

Tags: Ajith PawarAjith Pawar DeathDeathIndiaMaharashtramumbaiPolitics
Previous Post

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

Next Post

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada