• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story, ಕರ್ನಾಟಕ, ದೇಶ
0
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Share on WhatsAppShare on FacebookShare on Telegram

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ(Central Minister HD Kumaraswamy) ಹೇಳಿದ್ದಾರೆ.

ADVERTISEMENT
Union Budget 2026 : ಮೋದಿ ಅವ್ರು ವಿಕಸಿತ ಭಾರತದಕ್ಕೆ ಕರೆ ಕೊಟ್ಟಿದ್ದಾರೆ..! #Budget2026 #NirmalaSitharaman

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಎಂದು ರಾಜ್ಯ ಸರ್ಕಾರ ಸಾಮಾನ್ಯವಾಗಿ ದೂರುತ್ತಿತ್ತು. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. 15ನೇ ಹಣಕಾಸು ಆಯೋಗವು ಶೇ 3.64 ಹಂಚಿಕೆ ಮಾಡಿತ್ತು. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026–27ನೇ ಸಾಲಿನಲ್ಲಿ ₹63,049 ಕೋಟಿ ತೆರಿಗೆ ಪಾಲು ದೊರೆಯಲಿದೆ. ಇನ್ನು ಮುಂದೆ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ರಾಜಕೀಯವಾಗಿ ಕೇಂದ್ರವನ್ನು ಟೀಕೆ ಮಾಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.

ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆ ಏನೂ ಆಗಿಲ್ಲ. ತೆಂಗು ಪ್ರೋತ್ಸಾಹ ಯೋಜನೆಯಡಿ ತೆಂಗಿನ ಉತ್ಪಾದನೆ ಹೆಚ್ಚಳಕ್ಕೆ ಉತ್ತೇಜನ ಕೊಡಲಾಗಿದೆ. ಹಾಗೆಯೇ ಗೋಡಂಬಿ ಮತ್ತು ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಗ್ಲೋಬಲ್ ಬ್ರಾಂಡ್ ಆಗಿ ರೂಪಿಸುವ ಅಂಶವು ಮುಂಗಡ ಪತ್ರದಲ್ಲಿ ಸೇರಿದೆ. ಶ್ರೀಗಂಧ, ತೆಂಗು ಬೆಳೆ, ಕೋಕೋ ಬೆಳೆಗೆ ವಿಶೇಷ ಯೋಜನೆ ಮೂಲಕ ರಾಜ್ಯದ ಹಲವಾರು ಜಿಲ್ಲೆಗಳಿಗೆ ಉಪಯೋಗ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.

Union Budget 2026 : ಸೆಮಿಕಂಡಕ್ಟರ್‌ ಮಿಷನ್‌ಗೆ 40 ಸಾವಿರ ಕೋಟಿ ಫಂಡ್‌..!

ಹೈದರಾಬಾದ್-ಬೆಂಗಳೂರು, ಬೆಂಗಳೂರು ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಈಗಾಗಲೇ ರಾಜ್ಯದ ಹಲವು ವೇಗದ ರೈಲುಗಳು ಕಾರ್ಯಾಚರಿಸುತ್ತಿದ್ದು, ವಂದೇ ಭಾರತ್ ರೈಲುಗಳು ಕೂಡ ಸೇರ್ಪಡೆಯಾಗಿದೆ. ಈಗ ಹೈ ಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದರು.

President Feeds 'Dahi-Cheeni' To Nirmala Sitharaman: ಸಕ್ಕರೆ ಮತ್ತು ಮೊಸರು ನೀಡಿ ಶುಭಕೋರಿದ ಮುರ್ಮು..!

ಇದು ಕೇವಲ ಅಂಕಿ ಅಂಶಗಳ ಮುಂಗಡ ಪತ್ರವಲ್ಲ, ಬದಲಿಗೆ ಮುನ್ನೋಟ, ಮುಂದಾಲೋಚನೆ, ವಿಕಾಸ, ಫಲಿತಾಂಶ ಆಧರಿತ ಮುಂಗಡ ಪತ್ರವಾಗಿದೆ. ವಿಕಸಿತ ಭಾರತ ಗುರಿ ಸಾಕಾರಕ್ಕೆ ಇದು ಪೂರಕವಾಗಿದೆ. 2047ಕ್ಕೆ ನಾವು ಈ ಗುರಿ ಸಾಧನೆ ಮಾಡಬೇಕು, ಅದಕ್ಕೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಬಜೆಟ್ ಸ್ಪಷ್ಟ ದಿಕ್ಸೂಚಿ ತೋರಿದೆ. ಗ್ರಾಮೀಣ ಭಾರತಕ್ಕೆ ಮನ್ನಣೆ ಕೊಡಲಾಗಿದೆ. ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿ ತಾಲೂಕು, ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿ ಮುಂಗಡಪತ್ರದಲ್ಲಿ ಒಳಗೊಂಡಿದೆ. ವಿಶಾಲ, ವಿಸ್ತೃತ, ವಿಕಾಸ; ಇದು ಮೋದಿ ಅವರ ಲೋಕದೃಷ್ಟಿ. ಅದಕ್ಕೆ ತಕ್ಕಂತೆ ಮುಂಗಡಪತ್ರ ಮೂಡಿ ಬಂದಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Tags: budgetBudget 2026central budgetCentral Budget 2026Central Minister HD KumaraswamyHD KumaraswamyUnion BudgetUnion Budget 2026
Previous Post

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Next Post

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada