• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Top Story, ಕರ್ನಾಟಕ, ರಾಜಕೀಯ
0
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ.

ADVERTISEMENT
Union Budget 2026 : ಕೇಂದ್ರ ಬಜೆಟ್ 2026-27..7 ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ..! #pratidhvani

ಕರ್ನಾಟಕ ಸರ್ಕಾರ ಸಲ್ಲಿಸಿರುವ ಈ ಪ್ರಸ್ತಾವಣೆಗೆ ಒಪ್ಪಿಗೆ ನೀಡದಿರುವುದಕ್ಕೆ ರಾಜ್ಯಪಾಲರು ಒಟ್ಟು 29 ಕಾರಣಗಳನ್ನು ದಾಖಲಿಸಿ ಕೇಂದ್ರಕ್ಕೆ ರವಾನಿಸಿದ್ದಾರೆ. ರಾಜ್ಯಪಾಲರು ನೀಡಿರುವ ಪ್ರಮುಖ ಕಾರಣಗಳ ಪ್ರಕಾರ, ಮಸೂದೆಯಲ್ಲಿ ದ್ವೇಷ ಭಾಷದ ವ್ಯಾಖ್ಯಾನವೇ ಸ್ಪಷ್ಟವಾಗಿಲ್ಲ. ಯಾವ ಮಾತು ಅಥವಾ ಕೃತ್ಯವನ್ನು ದ್ವೇಷ ಭಾಷಣ ಎಂದು ಪರಿಗಣಿಸಬೇಕು ಎಂಬ ಬಗ್ಗೆ ಗೊಂದಲ ಇರುವುದರಿಂದ, ಕಾಯ್ದೆಯ ದುರುಪಯೋಗಕ್ಕೆ ಅವಕಾಶ ಸೃಷ್ಟಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಲಾಗಿದೆ.

 

ಮಸೂದೆ ತರುವ ಮುನ್ನ ಸಮಾಜದ ವಿವಿಧ ವರ್ಗಗಳು, ಸಾರ್ವಜನಿಕರು, ಕಾನೂನು ತಜ್ಞರು ಹಾಗೂ ಹಿತಾಸಕ್ತಿಗಳೊಂದಿಗೆ ಯಾವುದೇ ರೀತಿಯ ಚರ್ಚೆ ಅಥವಾ ಸಮಾಲೋಚನೆ ನಡೆಸಿರುವುದು ಕಂಡುಬಂದಿಲ್ಲ ಎಂಬುದನ್ನೂ ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಅಲ್ಲದೆ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಹ ಸಂವಾದ ನಡೆದಿಲ್ಲ. ವಿಧಾನಸಭೆಯಲ್ಲಿ ಕೂಡ ಈ ಮಸೂದೆ ಕುರಿತು ವಿಸ್ತೃತ ಚರ್ಚೆ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.

Union Budget 2026 : ಮಹಿಳೆಯರಿಗಾಗಿ ʼಶೀ ಮಾರ್ಟ್‌ʼ ಯೋಜನೆ..! #STEMinstitutions, #pratidhvani

ಮಸೂದೆಗೆ ವಿರೋಧವಾಗಿ ಸುಮಾರು 40 ಮನವಿಗಳು ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಈ ಮನವಿಗಳಲ್ಲಿ, ಈ ಕಾಯ್ದೆಯನ್ನು ಬಳಸಿಕೊಂಡು ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಬಹುದು ಎಂಬ ಗಂಭೀರ ಆತಂಕ ವ್ಯಕ್ತಪಡಿಸಲಾಗಿದೆ. ರಾಜ್ಯಪಾಲರ ಅಭಿಪ್ರಾಯದಂತೆ, ದ್ವೇಷ ಭಾಷಣವನ್ನು ನಿಯಂತ್ರಿಸಲು ಈಗಾಗಲೇ ಭಾರತೀಯ ದಂಡ ಸಂಹಿತೆ (IPC)ಯಲ್ಲಿ ಹಲವು ವಿಧಿಗಳು ಅಸ್ತಿತ್ವದಲ್ಲಿವೆ. ಆದರೆ, ಈ ಹೊಸ ಮಸೂದೆಯಲ್ಲಿ ಶಿಕ್ಷೆ ಮತ್ತು ದಂಡದ ಪ್ರಮಾಣವನ್ನು ಹೆಚ್ಚಿಸಲಾಗಿದೆ.

session  ಗಾಂಧಿ ಹೆಸರನ್ನೇ ತೆಗೆದು ಗಾಂಧಿ ಪ್ರತಿಮೆ ಮುಂದೆ ಕೂರ್ತಿರಿ ಅಂತ ಬಿಜೆಪಿಗರನ್ನ ಕೆಣಕಿದ CM  #pratidhvani

ಅಲ್ಲದೇ ದ್ವೇಷ ಭಾಷಣ ನಿಯಂತ್ರಣದ ಹೆಸರಿನಲ್ಲಿ ಇಂಟರ್ನೆಟ್‌ ಹಾಗೂ ಡಿಜಿಟಲ್‌ ಮಾಧ್ಯಮಗಳ ಮೇಲೆ ಹೆಚ್ಚುವರಿ ನಿಯಂತ್ರಣ ಹೇರುವ ಅಧಿಕಾರವನ್ನು ಸರ್ಕಾರಕ್ಕೆ ನೀಡುವ ಅಂಶಗಳಿವೆ. ಇದು ನಾಗರಿಕರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗುವ ಸಾಧ್ಯತೆ ಇದೆ ಎಂಬುದನ್ನೂ ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಈ ಎಲ್ಲಾಅಂಶಗಳ ಹಿನ್ನೆಲೆಯಲ್ಲಿ, ಮಸೂದೆಗೆ ರಾಜ್ಯಪಾಲರುಅಂಕಿತ ಹಾಕದೆ, ಭಾರತದ ರಾಷ್ಟ್ರಪತಿ ಅವರ ವಿವೇಚನೆಗೆ ಮಸೂದೆಯನ್ನು ವರ್ಗಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲೋಕಭವನ ಮೂಲಗಳು ತಿಳಿಸಿವೆ. ಈಗ ಕರ್ನಾಟಕ ಸರ್ಕಾರ ತಂದಿರುವ ಈ ವಿವಾದಾತ್ಮಕ ಮಸೂದೆ ಕುರಿತು ಅಂತಿಮ ನಿರ್ಧಾರವನ್ನು ರಾಷ್ಟ್ರಪತಿ ಅವರು ತೆಗೆದುಕೊಳ್ಳಬೇಕಿದೆ.

Tags: CM SiddramaiahDCM DK ShivakumarHate Speech BillKarnatakaKarnataka PoliticsPoliticsthawar chand gehlot
Previous Post

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

Next Post

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada