ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆಂದು ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ. ಕ್ಷಮೆ ಕೇಳದಿದ್ದರೆ ಕಾಟನ್‌ಪೇಟೆ ಗೇಟ್ ಚಿತ್ರ ಬಿಡುಗಡೆಗೆ ಮಾಡಲು ಬಿಡುವುದಿಲ್ಲ ಎಂದು ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ ಎಚ್ಚರಿಕೆ ನೀಡಿದ್ದಾರೆ.

ಆರ್.ಶ್ರೀನಿವಾಸ್ ನಿರ್ಮಾಣದ ಕಾಟನ್ ಪೇಟೆ ಗೇಟ್ ಚಿತ್ರ ಫೆ.13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಬಿಡುಗಡೆಗೆ ಸಂಬಂಧಿಸಿದ ಪತ್ರಿಕಾ ಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಆರ್.ಶ್ರೀನಿವಾಸ್ ಪುನೀತ್ ರಾಜ್ ಕುಮಾರ್ ನಾಯಕತ್ವ ದಲ್ಲಿ ತಾವು ನಿರ್ಮಿಸ ಬೇಕಿದ್ದ ಮಯೂರ ಎಂಬ ಸಿನಿಮಾದ ನಿರ್ದೇಶಕನೂ ಸತ್ತುಹೋದ ಮತ್ತು ಆ ಚಿತ್ರದ ನಾಯಕ ನಟನೂ ಸತ್ತುಹೋದ, ಅವರಿಬ್ಬರೂ ಈಗ ಮೇಲೆ ಚೆನ್ನಾಗಿದ್ದಾರೆ ಎಂದಿದ್ದಾರೆ.

ಅವರ ಈ ಹೇಳಿಕೆಯ ವಿರುದ್ಧ ಅಭಿಮಾನಿಗಳ ಸಂಘದ ವತಿಯಿಂದ ರಾಜ್ಯಾದ್ಯಂತ ಒಂದು ನೂರಕ್ಕೂ ಹೆಚ್ಚು ದೂರುಗಳನ್ನು ನೀಡಲಾಗಿದೆ.ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಇಲ್ಲದಿದ್ದರೆ ಕಾಟನ್‌ಪೇಟೆ ಗೇಟ್ ಚಿತ್ರ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಹೇಳಲಾಗುತ್ತಿದೆ.






