ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕೆ ಪಟ್ಟು ಹೆಚ್ಚಾಗುತ್ತಲೇ ಇದೆ. ಕುರ್ಚಿ ಕದನ ತಣ್ಣಗಾಗಿದೆಯೇ ಎಂದು ಜನರು ಅಂದುಕೊಳ್ಳುತ್ತಿದ್ದಂತೆ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಅವರು ಈ ಬಾರಿಯೇ ಸಿಎಂ ಆಗಬೇಕು, ಆಗೆಯೇ ಆಗುತ್ತಾರೆ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರನ್ನು ನಾವು ಮುಖ್ಯಮಂತ್ರಿಯಾಗಿ ನೋಡಬೇಕು. ನಾವೆಲ್ಲರೂ ಅವರ ಬೆಂಬಲಕ್ಕೆ ನಿಂತಿದ್ದೇವೆ. ಅವರನ್ನು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಾರೆ ಎಂದು ಶಾಸಕ ಇಕ್ಬಾಲ್ ಎಂದಿದ್ದಾರೆ.

ನಾನು ಹೇಳಿದ್ದ ಎರಡು ಡೇಟ್ ಮಿಸ್ ಆಗಿದೆ. ಆದರೆ ಈ ಬಾರಿ ಮಿಸ್ ಆಗಲ್ಲ, ಮೂರನೇ ಡೇಟ್ ಮಿಸ್ ಆಗಲ್ಲ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲೇ ಬೇಕು. ನಾನು ಮಾತ್ರವಲ್ಲ 80 ರಿಂದ 90 ಶಾಸಕರು ಅವರ ಬೆಂಬಲಕ್ಕೆ ಇದ್ದಾರೆ ಎಂದು ಇಕ್ಬಾಲ್ ಹೇಳಿದ್ದಾರೆ.






