• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Suresh: ಕಾಂಗ್ರೆಸ್‌ನಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ- ಡಿ.ಕೆ ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
February 11, 2026
in Top Story, ಕರ್ನಾಟಕ, ರಾಜಕೀಯ
0
DK Suresh: ಕಾಂಗ್ರೆಸ್‌ನಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ- ಡಿ.ಕೆ ಸುರೇಶ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಸರ್ವ ಪಕ್ಷಗಳ ನಾಯಕರನ್ನು ಒಳಗೊಂಡಿದೆ. ಇಲ್ಲಿ ಬಿಜೆಪಿ, ಜನತಾ ದಳ, ಬಿಎಸ್‌ಪಿ ಸೇರಿದಂತೆ ಎಲ್ಲರೂ ಇದ್ದಾರೆ. ನಮ್ಮಲ್ಲಿ ಮೊದಲ ಆದ್ಯತೆ ಅವರಿಗೆ. ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ, ಆಮೇಲೆ ಕಾಂಗ್ರಸಿಗರಿಗೆ ಆದ್ಯತೆ. ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್( DK Suresh) ಹೇಳಿದ್ದಾರೆ.

Siddaramaiah 5 ವರ್ಷ ಸಿಎಂ ಎಂದು ಯತೀಂದ್ರಗೆ DK Suresh ಪರೋಕ್ಷ ತಿರುಗೇಟು #pratidhvani

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಬಿ.ಡಿ.ಭೂಕಾಂತ್‌ಗೆ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಹಾಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವ ಮುಖ್ಯಮಂತ್ರಿಗಳ ನಿರ್ಧಾರದಲ್ಲಿ ತಪ್ಪೇನಿಲ್ಲ ಎಂದರು. ಕಾಂಗ್ರೆಸ್ ಎಲ್ಲರನ್ನು ಗೌರವಿಸುತ್ತದೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂಬ ಭಾವನೆ ಮುಖ್ಯಮಂತ್ರಿಗಳಿಗೆ ಇರುವುದರಿಂದ ಮಾಡಿರಬಹುದು ಎಂದು ಹೇಳಿದರು.

ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆದಾಗ ಮಾತ್ರ ದೆಹಲಿಗೆ ಹೋಗುತ್ತಿಲ್ಲ. ಕಳೆದ 40 ವರ್ಷಗಳಿಂದ ನಿರಂತರವಾಗಿ ದೆಹಲಿಗೆ ಹೋಗುತ್ತಿದ್ದಾರೆ. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಹೋಗುತ್ತಾರೆ. ಈಗ ಅವರು ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಸರ್ಕಾರದ ಕೆಲಸಗಳು ಇರುತ್ತವೆ. ಇನ್ನು ದೆಹಲಿಗೆ ಹೋದಾಗ, ರಾಜಕೀಯವಾಗಿ ಅಲ್ಲದಿದ್ದರೂ ಕುಶಲೋಪರಿ ಚರ್ಚೆಗೆ ಭೇಟಿ ಮಾಡುತ್ತಾರೆ. ಸಂಸತ್ ಅಧಿವೇಶನ ನಡೆಯುತ್ತಿರುವಾಗ ಇಲಾಖೆಗಳಿಗೆ ಸಂಬಂಧಿಸಿದ ಚರ್ಚೆ ಮಾಡಲು ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ, ಬೆಂಗಳೂರಿನ ವಿಚಾರವಾಗಿ ಚರ್ಚೆ ಮಾಡುತ್ತಾರೆ. ಹೀಗಾಗಿ ದೆಹಲಿ ಪ್ರವಾಸ ಶಿವಕುಮಾರ್ ಅವರಿಗೆ ಹೊಸತಲ್ಲ ಎಂದರು.

MLAs Foreign tour: ಶಾಸಕರ ವಿದೇಶ ಪ್ರವಾಸದ ಹಿಂದೆ ಕುರ್ಚಿ ಗೇಮ್? DK Suresh ಹೇಳಿದ್ದೇನು? #pratidhvani

ಇನ್ನು ನಾಯಕತ್ವ ಬದಲಾವಣೆ ಚರ್ಚೆ ವೇಳೆ ಬಜೆಟ್‌ಗೂ ಮುನ್ನ ಕೆಲವು ಶಾಸಕರು ವಿದೇಶ ಪ್ರವಾಸಕ್ಕೆ ಮುಂದಾಗಿರುವ ಸುದ್ದಿಯ ಬಗ್ಗೆ ಮಾತನಾಡಿದ ಅವರು, ವಿದೇಶ ಪ್ರವಾಸಕ್ಕೆ ಹೋಗುತ್ತಿರುವವರು ಯಾರು? ಕರೆದುಕೊಂಡು ಹೋಗುವವರು ಯಾರು? ಯಾರೋ ಹೇಳಿದ್ದನ್ನು ಶಿವಕುಮಾರ್ ಅವರ ಮೇಲೆ ಯಾಕೆ ಹೇಳುತ್ತೀರಿ. ಡಿ.ಕೆ. ಶಿವಕುಮಾರ್ ಅವರಿಗೂ ಶಾಸಕರ ಪ್ರವಾಸಕ್ಕೆ ಯಾವುದೇ ಸಂಬಂಧವಿಲ್ಲ. ಈ ವಿಚಾರವಾಗಿ ಬಹಳ ಸ್ಪಷ್ಟವಾಗಿ ಹೇಳುತ್ತೇನೆ.

ಶಾಸಕರ ಪ್ರವಾಸ ವೈಯಕ್ತಿಕವಾಗಿಯೂ ಇರಬಹುದು, ಬೇರೆಯವರ ಪ್ರಯೋಜಕತ್ವವೂ ಇರಬಹುದು. ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂಗೂ ಈ ಪ್ರವಾಸಕ್ಕೂ ಸಂಬಂಧವಿಲ್ಲ. ಈ ರೀತಿ ಏನಾದರೂ ಹುಟ್ಟಾಕುತ್ತಿದ್ದರೆ, ಅದು ರಾಜಕೀಯ ದುರುದ್ದೇಶದಿಂದ ಮಾತ್ರ. ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರಲು ನಮ್ಮ ಪಕ್ಷದ ಕೆಲವರು ಮಾಡುತ್ತಿರಬಹುದು. ನಮ್ಮ ಪಕ್ಷದವರು ಮಾಡುತ್ತಿದ್ದಾರೋ, ವಿರೋಧ ಪಕ್ಷದವರು ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೆ ಇದರಲ್ಲಿ ಶಿವಕುಮಾರ್ ಅವರು ಪಾಲುದಾರರಲ್ಲ ಎಂದು ಸ್ಪಷ್ಟಪಡಿಸಿದರು.

Parliament on Rahul Gandhi : ಸಂಸತ್‌ನಲ್ಲಿ ಬಿಜೆಪಿಗೆ ಮಾತಲ್ಲಿ ಟಾಂಗ್‌ ಕೊಟ್ಟ ರಾಹುಲ್‌ ಗಾಂಧಿ..!
Tags: BJPCM SiddaramaihacongressDK Shivakumardk sureshkannada newsKarnatakaKarnataka PoliticsPolitics
Previous Post

Bharat Bandh: ನಾಳೆ ಭಾರತ್ ಬಂದ್: ಇಲ್ಲಿದೆ ಮಹತ್ವದ ಮಾಹಿತಿ

Next Post

ಬಿಜೆಪಿ ಮುಖಂಡರಿಗೆ ರಾಜ್ಯ ಸಚಿವ ಸ್ಥಾನಮಾನ: ಕಾಂಗ್ರೆಸ್‌ನಲ್ಲಿ ಅಸಮಾಧಾನ?

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಬಿಜೆಪಿ ಮುಖಂಡರಿಗೆ ರಾಜ್ಯ ಸಚಿವ ಸ್ಥಾನಮಾನ: ಕಾಂಗ್ರೆಸ್‌ನಲ್ಲಿ ಅಸಮಾಧಾನ?

ಬಿಜೆಪಿ ಮುಖಂಡರಿಗೆ ರಾಜ್ಯ ಸಚಿವ ಸ್ಥಾನಮಾನ: ಕಾಂಗ್ರೆಸ್‌ನಲ್ಲಿ ಅಸಮಾಧಾನ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada