ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಮತ್ತೆ ರಾಜಕೀಯ ವಿದ್ಯಮಾನಗಳು ಗರಿಗೆದರಿವೆ. ಸದ್ಯ ದೆಹಲಿಯಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್(a DCM DK Shivakumar) ಸದ್ದಿಲ್ಲದೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಕಳೆದ ರಾತ್ರಿಯಷ್ಟೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ಭೇಟಿಯಾಗಿ ತಮ್ಮ ಬೇಡಿಕೆಯನ್ನು ಮುಂದಿಟ್ಟು, ಅವಕಾಶಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅದರ ಮುಂದುವರೆದಿ ಭಾಗವಾಗಿ ಇಂದು ಬೆಳಂಬೆಳಿಗ್ಗೆ ರಾಹುಲ್ ಗಾಂಧಿಯವರನ್ನು(Rahul Gandhi) ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಮೂಲಕ ತಮ್ಮ ಬಹುದಿನಗಳ ಕನಸನ್ಸು ನನಸು ಮಾಡಿಕೊಳ್ಳಲು ಇನ್ನೊಂದು ಸುತ್ತಿನ ಕಸರತ್ತಿನಲ್ಲಿ ಡಿಕೆ ಶಿವಕುಮಾರ್ ತೊಡಗಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ದೆಹಲಿಗೆ ಬಂದಿದ್ದೆ, ರಾಜಕಾರಣ ಮಾಡೋದಕ್ಕೆ, ಹೀಗಾಗಿ ರಾಜಕಾರಣ ಮಾಡೇ ಮಾಡ್ತೀನಿ, ನಾಯಕತ್ವದ ಬಗ್ಗೆನೂ ಚರ್ಚೆ ಮಾಡ್ತೀನಿ, ಎಲ್ಲ ವಿಚಾರಗಳ ಕುರಿತೂ ಮಾತನಾಡಿದ್ದೇನೆ. ಅದನ್ನು ಬೀದಿಯಲ್ಲಿ ನಿಂತು ಹೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಭೇಟಿಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆಯ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.

ಅಸ್ಸಾಂ ಚುನಾವಣೆಯ ಬಗ್ಗೆ ನಾವು ಚರ್ಚಿಸಿದ್ದೇವೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹತ್ವದ ಸಮಾಲೋಚನೆ ನಡೆಸಿದ್ದೇವೆ. ನಾನು ಇಲ್ಲಿಗೆ ಬಂದು ಯಾರ್ಯಾರ ಬಳಿ ಮಾತನಾಡಿದ್ದೇನೆ ಎಂದು ಅಗತ್ಯವಿಲ್ಲ. ನಾನು ಬಂದ ಮೇಲೆ ಎಲ್ಲ ವಿಚಾರಗಳನ್ನು ತಿಳಿಸಬೇಕಲ್ಲವೇ ಎಂದು ಡಿ.ಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.






