• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Congress: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ದೂರು ದಾಖಲು: ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಕರ್ನಾಟಕ, ರಾಜಕೀಯ
0
Congress: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ದೂರು ದಾಖಲು: ಕಾರಣವೇನು..?
Share on WhatsAppShare on FacebookShare on Telegram

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ(MLA Ashok Kumar Rai) ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ(BJP) ಪುತ್ತೂರು ಗ್ರಾಮಾಂತರ ಮಂಡಲ ಎಸ್‌ಸಿ ಮೋರ್ಚಾ ವತಿಯಿಂದ ಫೆಬ್ರವರಿ 16ರಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ADVERTISEMENT
Pralhad Joshi :  ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ...  ಭರ್ಜರಿ ಡ್ಯಾನ್ಸ್‌ #pratidhvani

ರಾಜ್ಯ ವಿಧಾನ ಪರಿಷತ್ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣ ಸ್ವಾಮಿ ಅವರನ್ನು ನಿಂದಿಸಿರುವುದಾಗಿ ಹಾಗೂ ಪರಿಶಿಷ್ಟ ಜಾತಿಯ ಛಲವಾದಿ ಸಮುದಾಯವನ್ನು ಅವಹೇಳನಕಾರಿಯಾಗಿ ಉಲ್ಲೇಖಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಸಮುದಾಯಗಳ ನಡುವೆ ದ್ವೇಷ ಉಂಟಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಮಾತನಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್‌, ʼ ವಿಬಿ ಜಿರಾಮ್‌ಜಿ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಮಾಡಿ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಪಾದಯಾತ್ರೆಗಳು ನಡೆದ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿಯವರು ಆ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಅವರು ಮಾತನಾಡಿರುವುದನ್ನು ಶಾಸಕರು ಅಪಾರ್ಥ ಮಾಡಿಕೊಂಡು, ಅವರ ಕುರಿತು ಅಗೌರವಯುತವಾಗಿ ಮಾತನಾಡಿದ್ದಾರೆ.ʼ

HD Kumaraswamy vs DK Shivakumar :ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು #pratidhvani #politics

ʼಶಾಸಕರು ಅವರದೇ ಪಕ್ಷದ ಸರಕಾರ, ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಗಳು ಇರುವಾಗ ಅವರಿಗೆ ತಿಳಿಹೇಳುವುದನ್ನು ಬಿಟ್ಟು ಪೊಲೀಸರು, ಸರಕಾರಿ ಅಧಿಕಾರಿಗಳನ್ನು ನಿಂದಿಸುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ. ಇದೀಗ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೇವಸ್ಥಾನಕ್ಕೆ ಬರುವಾಗ ರಾಜಕೀಯವನ್ನು ಚಪ್ಪಲಿಯಂತೆ ಹೊರಗಿಟ್ಟು ಬನ್ನಿ ಎಂದವರೇ ಅಲ್ಲಿ ನಿಂತು ರಾಜಕೀಯ ಮಾತನಾಡಿದರು. ಇದನ್ನು ಬಿಜೆಪಿ ಖಂಡಿಸುತ್ತದೆʼ.

Saayoni Ghosh : ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಟಿಎಂಸಿ ಸಂಸದೆ  #pratidhvani

ʼಶಾಸಕರಾಗಿ ಅವರು ಎರಡೂವರೆ ವರ್ಷದಲ್ಲಿ ಅವರ ಕೆಲಸ ಸರಿಯಾಗಿ ಮಾಡುತ್ತಿದ್ದಾರೆ. ಆದರೆ ಅವರ ಕೆಲಸಗಳು ಈ ರೀತಿಯ ಕೆಟ್ಟ ಪದಗಳ ಪ್ರಯೋಗದಿಂದಾಗಿ ಗೋಡೆಯ ಬಣ್ಣವನ್ನು ಮಸಿ ನುಂಗಿದಂತೆ ಆಗುತ್ತಿದೆ. ಅವರು ಬಹುಮತದಿಂದ ಆಯ್ಕೆಯಾಗಿರುವ ಶಾಸಕರಲ್ಲ. ಅವರ ವಿರುದ್ಧ 1 ಲಕ್ಷ ಹಿಂದೂ ಮತಗಳಿವೆ ಎನ್ನುವುದನ್ನು ಗಮನಿಸಿಕೊಂಡು ಕೆಲಸ ಮಾಡಬೇಕು. ಶಾಸಕರ ಇಂತಹ ವರ್ತನೆಯಿಂದ ಪುತ್ತೂರಿನ ಇತಿಹಾಸಕ್ಕೂ ಕಳಂಕ ಬರುತ್ತದೆ. ಅವರು ಮಾಡಿರುವ ತಪ್ಪನ್ನು ಸರಿಪಡಿಸುವ ಕೆಲಸವನ್ನು ಅವರೇ ಮಾಡಬೇಕು. ಈ ಹಿನ್ನೆಲೆಯಲ್ಲಿ ಎಸ್‌ಸಿ ಮೋರ್ಚಾದ ವತಿಯಿಂದ ಪೊಲೀಸರಿಗೆ ದೂರು ನೀಡುತ್ತಿದ್ದೇವೆʼ ಎಂದು ಹೇಳಿದರು.

CM Siddaramaiah on DCM DK Shivakumar  ಟಗರು ಜೊತೆ ಬಂಡೆ ಐದು ವರ್ಷ ನಿಲ್ಲುತ್ತೆ  ! #pratidhvani

ದಲಿತ ಮುಖಂಡ ಅಣ್ಣಪ್ಪ ಕಾರೆಕ್ಕಾಡು ಮಾತನಾಡಿ, ʼಪರಿಶಿಷ್ಟ ಜಾತಿಗೆ ಸೇರಿದ ನಾಯಕನನ್ನು ಪ್ರಾಣಿಗೆ ಹೋಲಿಸಿ ಶಾಸಕರು ಮಾತನಾಡಿದ್ದಾರೆ. ಇದು ಸಮುದಾಯಕ್ಕೆ ಸಲ್ಲದ ಮಾತು. ಬಿಜೆಪಿ-ಕಾಂಗ್ರೆಸ್‌ನವರು ರಾಜಕೀಯಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿಕೊಳ್ಳಬಹುದು. ಆದರೆ ಶಾಸಕರ ಈ ಹೇಳಿಕೆ ಇಡೀ ಪರಿಶಿಷ್ಟ ಜಾತಿಗೆ ಅನ್ವಯವಾಗುತ್ತದೆ. ಇದರಿಂದ ಇಡೀ ಸಮುದಾಯಕ್ಕೆ ನೋವಾಗಿದೆ. ಎಂದು ಹೇಳಿದರು.

Tags: Ashok Kumar RaiBJPChalavadi Narayana SwamycomplaintcongressKannadakannada newsKarnatakaKarnataka PoliticsPoliticsPuttur
Previous Post

ಪಿಡಿಓ ಹಣದಾಹಕ್ಕೆ ಪಂಚಾಯತಿಯಲ್ಲೇ ಪೆಟ್ರೋಲ್‌ ಸುರಿದುಕೊಂಡ ರೈತ : ಮುಂದೇನಾಯ್ತು..?

Next Post

ಶಾಲಿನಿ ರಜನೀಶ್ ವಿರುದ್ಧ ಕೋಟ್ಯಂತರ ರೂ. ಕಮಿಷನ್‌ ಬಾಂಬ್‌ : ಸ್ನೇಹಮಯಿ ಕೃಷ್ಣ ಸ್ಫೋಟಕ ಆರೋಪಗಳೇನು..?

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಶಾಲಿನಿ ರಜನೀಶ್ ವಿರುದ್ಧ ಕೋಟ್ಯಂತರ ರೂ. ಕಮಿಷನ್‌ ಬಾಂಬ್‌ : ಸ್ನೇಹಮಯಿ ಕೃಷ್ಣ ಸ್ಫೋಟಕ ಆರೋಪಗಳೇನು..?

ಶಾಲಿನಿ ರಜನೀಶ್ ವಿರುದ್ಧ ಕೋಟ್ಯಂತರ ರೂ. ಕಮಿಷನ್‌ ಬಾಂಬ್‌ : ಸ್ನೇಹಮಯಿ ಕೃಷ್ಣ ಸ್ಫೋಟಕ ಆರೋಪಗಳೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada