• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ ಮುಂದೆ ಕಸ ಸುರಿಯುತ್ತೇವೆ: ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಬಿಜೆಪಿ ಶಾಸಕರ ಬ್ಲಾಕ್ ಮೇಲ್ ಗೆ ಬಗ್ಗುವುದಿಲ್ಲ, ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಎಸ್ಮಾ ಕಾಯ್ದೆ ಅಡಿ ನಿಷ್ಕರುಣೆ ಕ್ರಮ. ಅನುದಾನ ಅಲಭ್ಯತೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ ಮುಂದೆ ಕಸ ಸುರಿಯುತ್ತೇವೆ:  ಡಿ.ಕೆ. ಶಿವಕುಮಾರ್‌ ಎಚ್ಚರಿಕೆ
Share on WhatsAppShare on FacebookShare on Telegram

“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್‌ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಎಚ್ಚರಿಕೆ ನೀಡಿದರು.

ADVERTISEMENT

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ. ಮಂಗಳವಾರದಂದು ಅರವಿಂದ ಲಿಂಬಾವಳಿ, ಇಂದು ದೊಡ್ಡಬಳ್ಳಾಪುರ ಶಾಸಕರು ಬ್ಲಾಕ್‌ ಮೇಲ್‌ ಮಾಡಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್‌.ಅಶೋಕ್‌, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆ” ಎಂದರು.

Rapido Bike : ಸಿದ್ದರಾಮಯ್ಯನವರೇ ನಿಮಗೆ ಕೈ ಮುಗಿತೀನಿ ದಯವಿಟ್ಟು ರಾಪಿಡೋ ಬೈಕ್ ಟ್ಯಾಕ್ಸಿ ನಿಲ್ಸಿ #pratidhvani

ಯಾವ ಉದ್ದೇಶಕ್ಕೆ ಶಾಸಕರುಗಳು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಈ ಹಿಂದಿನಿಂದ ಏನು ಕೆಲಸ ಮಾಡಿಕೊಂಡು ಬರಲಾಗುತ್ತಿತ್ತೊ ಅದೇ ಕೆಲಸವನ್ನು ಈಗಲೂ ಮಾಡಿಕೊಂಡು ಬರಲಾಗುತ್ತಿದೆ. ಅವರ ಕ್ಷೇತ್ರಗಳಿಗೆ ಅನುದಾನ ಬೇಕು ಎಂದು ಹೀಗೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಕಸದ ಲಾರಿಯಿಂದ ಅಪಘಾತವಾಗಿದೆ ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅಪಘಾತ ಆಗಬಾರದಿತ್ತು ಆಗಿದೆ. ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಕಸ ವಿಲೇವಾರಿ ನಿಲ್ಲಿಸಿರುವುದು ಸರಿಯಲ್ಲ. ಎಸ್‌.ಟಿ.ಸೋಮಶೇಖರ್‌, ಶಿವಣ್ಣ, ಕೃಷ್ಣಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

KJ George :  ಯಾವುದೇ ಧರ್ಮ, ಇನ್ನೊಂದು ಧರ್ಮವನ್ನು ದ್ವೇಷಿಸೋಕೆ ಹೇಳಿಲ್ಲ..! #it #ed #bjp

“ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ. ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್‌ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಚಾರಗಳನ್ನು ಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

ಅನುದಾನ ಅಲಭ್ಯತೆಗೆ ಬಿಜೆಪಿ ಸರ್ಕಾರವೇ ಕಾರಣ
ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್‌ ಹೆಚ್ಚಿದೆ, ಕಾಮಗಾರಿ ನಿಲ್ಲಿಸುತ್ತೇವೆ ಎಂದು ಗುತ್ತಿಗೆದಾರರ ಸಂಘ ತಿಳಿಸಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ದೂರು ನೀಡಲು ಅವರಿಗೆ ತಿಳಿಸಿ. ಅವರುಗಳು ಮೊದಲು ಕಾಮಗಾರಿ ನಿಲ್ಲಿಸಲಿ. ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಅನುದಾನವಿಲ್ಲ ಕೆಲಸ ತೆಗೆದುಕೊಳ್ಳಬೇಡಿ ಎಂದು ಹೇಳಿಲ್ಲವೇ? ಆದರೂ ಏಕೆ ಕೆಲಸಗಳನ್ನು ತೆಗೆದುಕೊಂಡರು. ಆರ್ಥಿಕ ಲಭ್ಯತೆ ಇಲ್ಲದೇ ಇದ್ದರೂ ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕೆಲಸಗಳನ್ನು ತೆಗೆದುಕೊಳ್ಳಲಾಯಿತು. ಬೆಂಗಳೂರು ನಗರದಲ್ಲಿ ಎಷ್ಟು ಹೊಂದಿಸಬೇಕೋ ಆ ಕೆಲಸವನ್ನು ನಾನು ಮಾಡಿದ್ದೇನೆ. ಉದಾಹರಣೆಗೆ 10 ಸಾವಿರ ಕೋಟಿ ಅನುದಾನವಿದ್ದರೆ 30- 40 ಸಾವಿರ ಕೋಟಿ ಟೆಂಡರ್‌ ಕರೆದಿದ್ದಾರೆ. ಇದೆಲ್ಲದ್ದಕ್ಕೂ ಬಿಜೆಪಿ ಸರ್ಕಾರವೇ ಕಾರಣ. ಈಗ ಬಿಲ್‌ ಬಿಲ್‌ ಎಂದರೆ ಏನು ಮಾಡುವುದು. ಅಂದು ಏಕೆ ಕೆಲಸಗಳನ್ನು ತೆಗೆದುಕೊಂಡರು. ನನ್ನ ಇಲಾಖೆಯ ದಾಖಲೆಗಳನ್ನು ನೀಡುತ್ತೇನೆ. ಹಣ ಇಲ್ಲ ಎಂದು ಗೊತ್ತಿದ್ದರೂ ಕೆಲಸಗಳನ್ನು ಏಕೆ ಪ್ರಾರಂಭ ಮಾಡಿದರು” ಎಂದು ಹೇಳಿದರು.

ನಿಮಗೂ ಕೆಲಸ ನಿಲ್ಲಿಸುತ್ತೇವೆ ಎಂದು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, “ಕೆಲಸ ನಿಲ್ಲಿಸಿಕೊಳ್ಳುವವರು ನಿಲ್ಲಿಸಿಕೊಳ್ಳಲಿ. ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಸರ್ಕಾರ ಬಜೆಟ್‌ ಪ್ರಕಾರ ಹಣ ನೀಡುತ್ತಿದೆ. ಎಷ್ಟು ಆಗುತ್ತದೆಯೋ ಅಷ್ಟು ಹಣವನ್ನು ನಾವು ಕೊಡುತ್ತೇವೆ. ಬಜೆಟ್‌ ಆದ ನಂತರ ಏನಾದರೂ ಮಾಡೋಣ. ನಮಗೂ ಮಾನವೀಯತೆ ಇದೆ. ಬ್ಲಾಕ್‌ ಮೆಲ್‌ ಮಾಡುತ್ತೇವೆ ಅನ್ನುವವರೆಲ್ಲಾ ಮಾಡಿಕೊಳ್ಳಲಿ” ಎಂದರು.

ನಕಲಿ ಬೆರಳಚ್ಚಿನ ಮೂಲಕ ಅನ್ನಭಾಗ್ಯ ಅಕ್ಕಿ ಲೂಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಗೊತ್ತಿಲ್ಲ” ಎಂದರು.

Tags: BJPBJP IndiaBY VijayendraDK ShivakumarKrishna ByregowdaPRADEEP ESHWARR AshokSHIVANNAST Somashekar
Previous Post

ಬಸ್ ಬಂದ್, ಸಿಡಿದೆದ್ದ ಸಾರಿಗೆ ನೌಕರರು : ಸರ್ಕಾರ ಹೇಳೋದೇನು..?

Next Post

ಕ್ಷಮೆ ಕೇಳಿ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿದ್ದೇನು?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕ್ಷಮೆ ಕೇಳಿ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿದ್ದೇನು?

ಕ್ಷಮೆ ಕೇಳಿ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada