ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದ ಆರೋಪ ಮಾಡಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಬಂಧನವಾಗಿದೆ. ನಗರದ ಶಾಂತಿ ನಗರದ ಬಳಿಯ ಸಿಟಿ ಸಿವಿಲ್ ಕೋರ್ಟ್ ಬಳಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಲಾಕ್ ಮಾಡಿದ್ದಾರೆ.

ಸಿಎಂ ವಿರುದ್ಧ ಆಪಾದನೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅಲ್ಲದೆ ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ 1.60 ಕೋಟಿಯ ಕಮಿಷನ್ ಬಾಂಬ್ ಅನ್ನು ಸಿಡಿಸಿದ್ದರು. ಮೈಸೂರು ಪಾಲಿಕೆಯ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ಮುಂಬಡ್ತಿಗಾಗಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇ.ಡಿ.ಗೆ ಪತ್ರ ಬರೆದು ಆಗ್ರಹಿಸಿದ್ದರು.
ಸ್ನೇಹಮಯಿ ಕೃಷ್ಣ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಟೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಅವರ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಎದುರು ಹಾಕಿಕೊಂಡು ಕಾನೂನು ಹೋರಾಟ ನಡೆಸುತ್ತಿದ್ದ ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್ ಅವರ ವಿರುದ್ಧ ಸಿಡಿಸಿದ ಕಮಿಷನ್ ಬಾಂಬೇ ಮುಳುಯಾಯಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ.






