ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ( Mallikarjuna Kharge) ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್(D. K. Shivakumar) ಅವರು ‘ಬಹಳ ಸಂತೋಷ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದಿರುವುದು ಸಂತೋಷ ಎಂದಿದ್ದಾರೆ.
ಇದನ್ನೂ ಓದಿ: D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ

ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ ಎನ್ನುವ ಸಿಎಂ ಟ್ವೀಟ್ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼಈ ಬಗ್ಗೆ ನನಗೆ ಮಾಹಿತಿ ಇಲ್ಲʼ ಎಂದು ಹೇಳಿದರು.

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮೆರವಣೆಗೆ ವೇಳೆ ನಡೆದ ಗಲಭೆ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ʼನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆʼ ಎಂದು ಹೇಳಿದರು.

ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ನಾನು ಒಂದು ರೂಪಾಯಿ ಅನುದಾನ ಕೇಳಿಲ್ಲ ಎಂಬ ಶಾಸಕ ಧೀರಜ್ ಮುನಿರಾಜು ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼಈ ಬಗ್ಗೆ ಮುಂದೆ ಮಾತನಾಡೋಣʼ ಎಂದು ಹೇಳಿದರು.







