ನವದೆಹಲಿ: ಭಾರತ ಮತ್ತು ಬ್ರೆಜಿಲ್ ಮುಂದಿನ ಐದು ವರ್ಷಗಳಲ್ಲಿ 20 ಬಿಲಿಯನ್ ಡಾಲರ್ಗೂ ಹೆಚ್ಚು ದ್ವಿಪಕ್ಷೀಯ ವ್ಯಾಪಾರ ಸಾಧಿಸುವ ಗುರಿ ನಿಗದಿಪಡಿಸಿವೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ (Luiz Inacio Lula da Silva) ನಡುವಿನ ಮಾತುಕತೆ ಬಳಿಕ ಈ ನಿರ್ಧಾರ ಪ್ರಕಟವಾಗಿದೆ.

ಲ್ಯಾಟಿನ್ ಅಮೆರಿಕದಲ್ಲಿ ಬ್ರೆಜಿಲ್ ಭಾರತಕ್ಕೆ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಡಾಲರ್ ಮೀರಿಸಲು ಉಭಯ ದೇಶಗಳು ಬದ್ಧವಾಗಿವೆ.

ಭಾರತ ಮತ್ತು ಬ್ರೆಜಿಲ್ ಒಟ್ಟಾಗಿ ಕೆಲಸ ಮಾಡಿದಾಗ ಜಾಗತಿಕ ದಕ್ಷಿಣದ ಧ್ವನಿ ಬಲಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಜಾಗತಿಕ ವೇದಿಕೆಯಲ್ಲಿ ಸಹಕಾರ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಮತ್ತು ಔಷಧ ಕ್ಷೇತ್ರದಲ್ಲಿ ಸಹಕಾರ ಹೆಚ್ಚಿಸಲು ನಿರ್ಧರಿಸಲಾಗಿದೆ. ಭಾರತದಿಂದ ಬ್ರೆಜಿಲ್ಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಔಷಧ ಪೂರೈಕೆ ಹೆಚ್ಚಿಸುವ ಬಗ್ಗೆ ಮಾತುಕತೆ ನಡೆದಿದೆ. ಒಟ್ಟಾರೆ, ಭಾರತ–ಬ್ರೆಜಿಲ್ ಸಂಬಂಧಗಳು ಮತ್ತಷ್ಟು ಬಲವಾಗಿದ್ದು, ವ್ಯಾಪಾರ ಮತ್ತು ಭದ್ರತೆ ಕ್ಷೇತ್ರಗಳಲ್ಲಿ ಹೊಸ ಗುರಿಗಳನ್ನು ನಿಗದಿಪಡಿಸಲಾಗಿದೆ.







