ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8 ಪಂದ್ಯದಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಯ್ಡನ್ ಮಾರ್ಕ್‌ರಮ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದರು.

ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ 3 ವಿಕೆಟ್ ಪಡೆಯುವ ಮೂಲಕ, ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು T20 ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನ್ನುವ ದಾಖಲೆ ಮಾಡಿದ್ದಾರೆ.T20ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ (5 ಸಲ) 15 ಅಥವಾ ಅದಕ್ಕಿಂತ ಕಡಿಮೆ ರನ್ ನೀಡಿದ ಬೌಲರ್ ಎನ್ನುವ ಖ್ಯಾತಿ ಪಡೆದುಕೊಂಡಿದ್ದಾರೆ.

T20ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್(32 ವಿಕೆಟ್) ಅವರ ದಾಖಲೆಯನ್ನು ಬೂಮ್ರಾ ಮುರಿದರು. ಅವರು ಒಟ್ಟು 33 ವಿಕೆಟ್ ಪಡೆದಿದ್ದಾರೆ.
ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಅರ್ಷದೀಪ್ ಸಿಂಗ್ 32 ವಿಕೆಟ್ ಪಡೆದಿದ್ದರೆ, 29 ವಿಕೆಟ್ ಕಬಳಿಸಿರುವ ಹಾರ್ದಿಕ್ ಪಾಂಡ್ಯ 4ನೇ ಸ್ಥಾನದಲ್ಲಿದ್ದಾರೆ.






