ಹಾಸನ: ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್ಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಮುಂದುವರಿದಿದೆ. ದಾರಿಗೆ ಹಾಕಿದ್ದ ಹಂಪ್ಸ್ ಕಾಣದ ಪರಿಣಾಮ ಬುಲೆಟ್ ವಾಹನ ಚಲಾಯುಸುತ್ತಿದ್ದ ಪ್ರಿಯಾ (Priya Age-23) ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಆಕೆಯ ಗೆಳತಿ ಸ್ವಾತಿ(Swati, Age-24) ಸ್ಥಿತಿ ಗಂಭೀರವಾಗಿದೆ. ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಭಾನುವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಪ್ರಿಯಾ ಎಂಬ ಯುವತಿ ಮೃತಪಟ್ಟಿದ್ದಾರೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಕಾರಣ ನಿಯಂತ್ರಣ ತಪ್ಪಿ ಬಿದ್ದಿದ್ದು, ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಮತ್ತೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂಚನಾ ಫಲಕಗಳಿಲ್ಲದ ಮತ್ತು ಬಣ್ಣ ಮಾಸಿದ ಹಂಪ್ನಿಂದ ಈ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಸುರಕ್ಷತೆ ಕಾಪಾಡಲು ಸೂಕ್ತ ಕ್ರಮ ಕೈಗೊಂಡು ಹಂಪ್ಗಳಿಗೆ ಸೂಚನಾ ಫಲಕ ಅಳವಡಿಸಲು ಆಗ್ರಹಿಸಿದ್ದಾರೆ.
ಸತ್ಯಮಂಗಲ ಬಡಾವಣೆಯ ಪ್ರಿಯಾ ಮೃತ ಯುವತಿ. ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಪ್ರಿಯಾ ಮತ್ತು ಸ್ವಾತಿ ಹೆಲ್ಮೆಟ್ ಧರಿಸದೆ ಬುಲೆಟ್‌ನಲ್ಲಿ ಜಾಲಿ ರೈಡ್ ಮಾಡುತ್ತಿದ್ದರು. ಇವರಿಬ್ಬರು ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು. ಹೊರವಲಯದ ರಸ್ತೆಯ ಡಾಂಬರು ಕಿತ್ತು ಹೋಗಿದ್ದು, ಹಂಪ್ ಬಳಿಯಲ್ಲಿ ತಗ್ಗುಗಳಾಗಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಅಪಘಾತಗಳು ನಡೆಯುತ್ತಿರುತ್ತವೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.






