• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಲಿತ ಸಿಎಂ ಚರ್ಚೆ: ಮಹದೇವಪ್ಪರಿಗೆ ಮಾಹಿತಿ ಇರಬಹುದು ಎಂದ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in Top Story, ಕರ್ನಾಟಕ, ರಾಜಕೀಯ
0
ದಲಿತ ಸಿಎಂ ಚರ್ಚೆ: ಮಹದೇವಪ್ಪರಿಗೆ ಮಾಹಿತಿ ಇರಬಹುದು ಎಂದ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ (HC Mahadevappa) ಹೈಕಮಾಂಡ್‌ಗೆ ಒತ್ತಾಯಿಸಿರುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್(DCM DK Shivakumar) ಪ್ರತಿಕ್ರಿಯಿಸಿದ್ದು, ಮಹದೇವಪ್ಪ ಅವರು ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದರು.

Shivamogga SSLC Student Death | KS Eshwarappa | ಸ್ಥಳಕ್ಕೆ ಡಿ.ಸಿ, ಎಸ್‌.ಪಿ, ಜಿಲ್ಲಾ ಮಂತ್ರಿ ಬರುವಂತೆ ಪಟ್ಟು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರ ಹೇಳಿಕೆ ನೋಡಿದೆ. ಅದರ ಹೊರತಾಗಿ ಬೇರೆ ಯಾವುದೇ ಚರ್ಚೆ ಇಲ್ಲ. ಅವರಿಗೆ ಸಿಎಂ ಬದಲಾವಣೆ ಮಾಹಿತಿ ಇರಬಹುದು, ಆದರೆ ಆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಹೈಕಮಾಂಡ್ ನಿಮ್ಮನ್ನು ಹಾಗೂ ಸಿಎಂ ಅವರನ್ನು ದೆಹಲಿಗೆ ಕರೆದಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವುದೇ ಕರೆ ಬಂದಿಲ್ಲ. ನಾನು ನಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಗಳ ಮೇಲೆ ದೆಹಲಿಗೆ ಹೋಗಬೇಕಾಗಿದೆ. ನಗರಾಭಿವೃದ್ಧಿ ಇಲಾಖೆ ಯೋಜನೆಗೆ ಸಂಬಂಧಿಸಿದಂತೆ 1 ಲಕ್ಷ ಕೋಟಿ ರೂ. ನೀಡಲಾಗುತ್ತಿದ್ದು, ದೊಡ್ಡ ನಗರಗಳಿಗೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ನಮ್ಮ ನಗರಾಭಿವೃದ್ಧಿ ಸಚಿವರ ಬಳಿ ಚರ್ಚೆ ಮಾಡಿ, 2 ಹಾಗೂ 3ನೇ ಹಂತದ ನಗರಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಿದ್ಧಪಡಿಸಲು ಹೇಳುತ್ತೇನೆ ಎಂದು ತಿಳಿಸಿದರು.

ಕೃಷ್ಣರಾಜನಗರ ಜೆಡಿಎಸ್ ಕಾರ್ಯಕರ್ತರ ಸಭೆ | Janarondige Janata Dala | Nikhil Kumaraswamy  #pratidhvani

ನೂತನ ಶಾಸಕರು ಕನಿಷ್ಠ 5 ಮಂತ್ರಿ ಸ್ಥಾನವನ್ನು ಹೊಸಬರಿಗೆ ನೀಡಬೇಕು ಎಂದು ಹೈಕಮಾಂಡ್ ಗೆ ಬರೆದಿರುವ ಪತ್ರದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ. ನನಗೆ ಅವರ ಪತ್ರ ತಲುಪಿಲ್ಲ. ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ. ಮೋದಿ ಅವರು ಶಾಸಕರಾಗದೇ ಸಿಎಂ ಆಗಲಿಲ್ಲವೇ. ಅವರು ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಬಾರಿಗೆ ಶಾಸಕರಾದಾಗ ಮಂತ್ರಿಯಾದವರಲ್ಲಿ ನಾನೂ ಒಬ್ಬ. ಹೊಸ ಪೀಳಿಗೆ ಬೆಳೆಯಬೇಕು. ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ? ನಾನು ಸಚಿವನಾಗಿ 36 ವರ್ಷವಾಗಿದೆ. ಹೊಸ ಪೀಳಿಗೆ, ಹೊಸ ಆಲೋಚನೆಗಳು ಬರಬೇಕು. ಹೊಸಬರು ಸಂಪುಟಕ್ಕೆ ಬರಬೇಕು ಎಂದು ಬೆಂಬಲಿಸುವವರಲ್ಲಿ ನಾನೂ ಇದ್ದೇನೆ. ಹೊಸಬರನ್ನು ನಾವು ತಯಾರು ಮಾಡಬೇಕಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

Yaduveer Wadiyar : ಸಿಗರೇಟ್​ ಉತ್ಪಾದನೆ ಮಾಡೋರ ಮೇಲೆ ತೆರಿಗೆ ಇಲ್ಲ.. DCಗೆ ಪ್ರಶ್ನೆ ಮಾಡಿದ್ದೀವಿ #pratidhvani

ಇನ್ನು ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ನಮ್ಮ ಸರ್ಕಾರ 5065 ಕೋಟಿರೂ. ವೆಚ್ಚ ಮಾಡುತ್ತಿದ್ದು, ಸಿಎಂ 2 ಸಾವಿರ ಕೋಟಿ ಅನುದಾನ ನೀಡಿದ್ದಾರೆ. 75% ಕಾಮಗಾರಿಗಳು ಮುಕ್ತಾಯವಾಗಿದ್ದು, ಏಪ್ರಿಲ್ ತಿಂಗಳಾಂತ್ಯದ ವೇಳೆಗೆ ಎಲ್ಲವೂ ಮುಕ್ತಾಯಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿಯಲ್ಲಿ ಗುಣಮಟ್ಟದಲ್ಲಿ ರಾಜಿಯಾಗಬಾರದು ಎಂದು ಹೇಳಿದ್ದೇನೆ. 10 ಲಕ್ಷ ಇ ಖಾತಾ ದಾಖಲೆ ವಿತರಣೆ ಕಾರ್ಯಕ್ರಮ ಮಾಡಲಾಗುವುದು. ಇನ್ನು 30 ಸಾವಿರ ಬೀದಿವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ಅವರ ವ್ಯಾಪಾರಕ್ಕೆ ವಾಹನ ನೀಡುವ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿದರು.

K Venkatesh : ನಮ್ಮ ಇಲಾಖೆಯಿಂದ ಯಾರನ್ನೂ ಟೂರ್​ಗೆ ಕಳುಹಿಸ್ತಿಲ್ಲ | Congress  #pratidhvani
Tags: BJPCM Chair FightCM SiddaramaiahcongressDCM DK ShivakumarHC mahadevappaKarnatakaPolitics
Previous Post

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಆಕ್ರೋಶ: ಮಹತ್ವದ ಮಾಹಿತಿ ಹಂಚಿಕೊಂಡ ಸಿಎಂ

Next Post

ಯುವಜನತೆಗೆ ಉದ್ಯೋಗಾವಕಾಶ ನೀಡಲು ಸರ್ಕಾರ ಬದ್ಧ: ಸಚಿವ ಸಂತೋಷ್‌ ಲಾಡ್

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಯುವಜನತೆಗೆ ಉದ್ಯೋಗಾವಕಾಶ ನೀಡಲು ಸರ್ಕಾರ ಬದ್ಧ: ಸಚಿವ  ಸಂತೋಷ್‌ ಲಾಡ್

ಯುವಜನತೆಗೆ ಉದ್ಯೋಗಾವಕಾಶ ನೀಡಲು ಸರ್ಕಾರ ಬದ್ಧ: ಸಚಿವ ಸಂತೋಷ್‌ ಲಾಡ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada