• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಎಸ್‌ವೈ ಅದ್ಧೂರಿ ಹುಟ್ಟುಹಬ್ಬಕ್ಕೆ ಶಿಕಾರಿಪುರ ಸಜ್ಜು: ಬಿಜೆಪಿ ಶಕ್ತಿ ಪ್ರದರ್ಶನದ ಸುಳಿವು

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಕರ್ನಾಟಕ, ರಾಜಕೀಯ
0
ಬಿಎಸ್‌ವೈ ಅದ್ಧೂರಿ ಹುಟ್ಟುಹಬ್ಬಕ್ಕೆ ಶಿಕಾರಿಪುರ ಸಜ್ಜು: ಬಿಜೆಪಿ ಶಕ್ತಿ ಪ್ರದರ್ಶನದ ಸುಳಿವು
Share on WhatsAppShare on FacebookShare on Telegram

ಶಿಕಾರಿಪುರ: ರಾಜ್ಯ ರಾಜಕೀಯದಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಶೇಷ ಬೆಳವಣಿಗೆ ಇದ್ದೇ ಇರುತ್ತದೆ. ಅತ್ತ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ, ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ, ಹೊಸ ಶಾಸಕರಿಗೆ ಮಂತ್ರಿ ಪಟ್ಟಕ್ಕಾಗಿ ಒತ್ತಾಯ ಹೀಗೆ ಅನೇಕ ವಿಚಾರಗಳು ಚರ್ಚೆಯಲ್ಲಿದ್ದರೆ, ಇತ್ತ ಬಿಜೆಪಿಯಲ್ಲೂ ಒಂದಿಷ್ಟು ಅಸಮಾಧಾನಗಳು ಹೊಗೆಯಾಡುತ್ತಿದೆ.

ADVERTISEMENT
Kumaraswamy on Siddaramaiah: ಇದೇ ಕುರಿ ಕಾಯ್ತಿದ್ದವನನ್ನೇ ಅಲ್ವಾ 2 ಬಾರಿ ನಾವು DCM ಮಾಡಿದ್ದು ಎಂದ HDK

ಈ ನಡುವೆ ಕೆಲ ರಾಜಕೀಯ ನಾಯಕರು ತಮ್ಮ ಶಕ್ತಿ ಪ್ರದರ್ಶನದ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಸಿದ್ದರಾಮೋತ್ಸವ ಎಂದು ಆಚರಿಸುವ ಮೂಲಕ ಸಿದ್ದರಾಮಯ್ಯ ಬಣದ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದರೆ, ಇತ್ತೀಚಿಗೆ ಕನಕಪುರದ ಕನಕೋತ್ಸವದ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್‌ ಸಣ್ಣ ಮಟ್ಟದ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಶಿಕಾರಿಪುರದಲ್ಲಿ ಬಲ ಪ್ರದರ್ಶನ ಮಾಡಲು ಮುಂದಾಗಿದ್ದಾರೆ ಎನ್ನುವ ಮಾತುಗಳು ಎಲ್ಲೆಡೆ ಹರಿದಾಡುತ್ತಿದೆ.

ಫೆಬ್ರವರಿ 27ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ಹುಟ್ಟುಹಬ್ಬದ ಆಚರಣೆ ಕೇವಲ ಸಂಭ್ರಮಕ್ಕೆ ಸೀಮಿತವಾಗದೇ, ರಾಜಕೀಯ ಶಕ್ತಿ ಪ್ರದರ್ಶನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Nikhil Kumaraswamy : ನಿಖಿಲ್ ಕುಮಾರಸ್ವಾಮಿ ಅಬ್ಬರ #pratidhvani

ಬಿ.ಎಸ್. ಯಡಿಯೂರಪ್ಪ ಸಾರ್ವಜನಿಕ ಜೀವನ ಪ್ರವೇಶಿಸಿ 50 ವರ್ಷ ಭರ್ತಿಯಾದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿಯಲ್ಲೇ ಬೃಹತ್ ಸಮಾವೇಶ ನಡೆಸುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಬಣ ಮುಂದಾಗಿದೆ. ಬಿ.ವೈ. ವಿಜಯೇಂದ್ರ ಅವರು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಿದ್ದು, ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಾವಿರಾರು ಕಾರ್ಯಕರ್ತರನ್ನು ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಈ ಬಾರಿ ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿ ಶಿಕಾರಿಪುರದಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಬಣದ ಶಕ್ತಿ ಪ್ರದರ್ಶನ ಮಾಡಿ ಈ ಮೂಲಕ ಪಕ್ಷದ ನಾಯಕರು ಹಾಗೂ ಹೈಕಮಾಂಡ್‌ಗೆ ಜೊತೆಗೆ ಕಾಂಗ್ರೆಸ್‌ ಪಕ್ಷಕ್ಕೂ ತಮ್ಮ ಬಲವನ್ನು ತೋರಿಸಲು ವಿಜಯೇಂದ್ರ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್‌ಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಬಲದ ಬಗ್ಗೆ ಕಾಂಗ್ರೆಸ್‌ಗೂ ಸ್ಪಷ್ಟ ಸಂದೇಶ ನೀಡಲು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

Nikhil Kumaraswamy | ನಮ್ಮ ಕುಟುಂಬ ಕೆಲಸ ಮಾಡಿದೆ.. ಯಾವುದೇ ಅನುಮಾನ ಬೇಡ ರಾಮನಗರಕ್ಕೆ ಫಿಕ್ಸ್ ಆಗಿದ್ದೀನಿ

ಇನ್ನು ಬಿ.ಎಸ್. ಯಡಿಯೂರಪ್ಪ ಅವರ ಅದ್ಧೂರಿ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆ ಇದೆ. ಜೊತೆಗೆ ರಾಜ್ಯ ಮತ್ತು ಕೇಂದ್ರದ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಒಟ್ಟಿನಲ್ಲಿ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಆಚರಣೆ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳಿಗೆ ವೇದಿಕೆಯಾಗುವ ಸಾಧ್ಯತೆ ಇದೆ.

Tags: BJPBS YediyurappaBY VijayendraCM SiddaramaiahcongressDCM DK ShivakumarKarnatakaKarnataka PoliticsPolitics
Previous Post

ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

Next Post

SSLC ಫಲಿತಾಂಶ ಸುಧಾರಣೆಗೆ ಮುಂದಾದ ಚಿಕ್ಕೋಡಿ ಡಿಡಿಪಿಐ : ಸೀತಾರಾಮು ವಿಶೇಷ ಪ್ಲ್ಯಾನ್‌ ಏನು..?

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
SSLC ಫಲಿತಾಂಶ ಸುಧಾರಣೆಗೆ ಮುಂದಾದ ಚಿಕ್ಕೋಡಿ ಡಿಡಿಪಿಐ : ಸೀತಾರಾಮು ವಿಶೇಷ ಪ್ಲ್ಯಾನ್‌ ಏನು..?

SSLC ಫಲಿತಾಂಶ ಸುಧಾರಣೆಗೆ ಮುಂದಾದ ಚಿಕ್ಕೋಡಿ ಡಿಡಿಪಿಐ : ಸೀತಾರಾಮು ವಿಶೇಷ ಪ್ಲ್ಯಾನ್‌ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada