ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ರಂಜಾನ್ ಹಬ್ಬದ ಪ್ರಯುಕ್ತ ವಿದ್ಯಾರ್ಥಿ ಗಳಿಗಾಗಿ ವಿಶೇಷ ನೋಟೀಸ್ ವೊಂದನ್ನು ಹೊರಡಿಸಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಹುಡುಗರು ಮತ್ತು ಹುಡುಗಿಯರು ಒಟ್ಟಿಗೆ ನಿಲ್ಲುವುದು ಕಂಡು ಬಂದರೆ ಅಂತಹ ಜೋಡಿಗೆ ತಕ್ಷಣ ಮದುವೆ ಮಾಡಿಸುವುದಾಗಿ ಹೇಳಿಕೊಂಡಿದೆ.

ಇನ್ಸ್ಟಾಗ್ರಾಮ್ ನಲ್ಲಿ ವೈರಲ್ ಆಗಿರುವ ಈ ಪೋಸ್ಟ್‌ನಲ್ಲಿ ‘ಹಮ್ದರ್ದ್ ಶಾಲೆಯ ಹೆಸರಿದೆ. ನಮ್ಮ ವಿಶ್ವವಿದ್ಯಾಲಯವು ಧಾರ್ಮಿಕವಾಗಿ ಪ್ರಸಿದ್ಧಿ ಆಗಿರುವುದರಿಂದ ನಮಗೆ ಈ ಅಧಿಸೂಚನೆ ಬಂದಿದೆ ಎಂದು ಹೇಳುವ ಉಲ್ಲೇಖದೊಂದಿಗೆ ಪೋಸ್ಟ್ ವೈರಲ್ ಆಗಿದೆ.

ಪ್ರಿಯ ವಿದ್ಯಾರ್ಥಿಗಳೇ, ಪವಿತ್ರ ರಂಜಾನ್ ತಿಂಗಳಲ್ಲಿ, ಹುಡುಗ ಮತ್ತು ಹುಡುಗಿ ಒಟ್ಟಿಗೆ ನಿಲ್ಲು ವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಇಲ್ಲಿ ತಿಳಿಸಲಾಗಿದೆ. “ಯಾವುದೇ ಹುಡುಗ ಮತ್ತು ಹುಡುಗಿ ಒಟ್ಟಿಗೆ ನಿಂತಿರುವುದು ಕಂಡುಬಂದರೆ, ಅವರ ಮದುವೆಗೆ ತಕ್ಷಣವೇ ವ್ಯವಸ್ಥೆ ಮಾಡಲಾಗುತ್ತದೆ” ಎಂದು ನೋಟಿಸ್ ನಲ್ಲಿ ಬರೆಯಲಾಗಿದೆ .

ಹುಡುಗ ಹುಡುಗಿ ಒಟ್ಟಿಗೆ ನಿಂತರೆ ವಿಶ್ವವಿದ್ಯಾಲಯವೇ ಮದುವೆ ಮಾಡಿಸುತ್ತದೆ. ಆದರೆ ಮದುವೆಯ ನಂತರದ ಔತಣಕೂಟದ (ವಲಿಮಾ) ಖರ್ಚನ್ನು ವಿದ್ಯಾರ್ಥಿಗಳೇ ಭರಿಸಬೇಕು ಎಂದು ಹೇಳಲಾಗಿದೆ. ಆದರೆ ಹಮ್ದರ್ದ್ ವಿಶ್ವವಿದ್ಯಾಲಯದ ವೆಬ್‌ಸೈಟ್ ನಲ್ಲಿ ಇಂತಹ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲ. ಹಾಗಾಗಿ ಇದು ಸುಳ್ಳು ಎಂದು ವಿಶ್ವವಿದ್ಯಾಲಯ ಹೇಳಿಕೆ ನೀಡಿದೆ.







